Wednesday, May 22, 2024
spot_img
spot_img
spot_img
spot_img
spot_img
spot_img

ನೌಕಾಪಡೆಯ ಎರಡು ಹೆಲಿಕಾಪ್ಟರ್ ನಡುವೆ ಡಿಕ್ಕಿಯಾಗಿ ಪತನ : 10 ಮಂದಿ ಸಾವು : ಅಪಘಾತದ ಭಯಾನಕ ವಿಡಿಯೋ ವೈರಲ್.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಎರಡು ಹೆಲಿಕಾಪ್ಟರ್ ಗಳು (helicopters) ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ 10 ಜನ ಸಾವಿಗೀಡಾದ ಘಟನೆ ಮಲೇಷ್ಯಾದ ಪೆರಾಕ್‌ನ ಲುಮುಟ್‌ನಲ್ಲಿ ಮಂಗಳವಾರ ಬೆಳಗ್ಗೆ ಸ್ಥಳೀಯ ಕಾಲಮಾನ 9.32ಕ್ಕೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಪೆರಾಕ್ ಅಗ್ನಿಶಾಮಕ ಮತ್ತು ಪಾರುಗಾಣಿಕಾ ಇಲಾಖೆ ಈ ಘಟನೆಯನ್ನು ದೃಢಪಡಿಸಿದೆ (confirm). ಅಲ್ಲದೇ ವೈದ್ಯಕೀಯ ಅಧಿಕಾರಿಗಳು ಘಟನಾ ಸ್ಥಳದಲ್ಲಿನ ಸಾವುಗಳನ್ನು ದೃಢಪಡಿಸಿದ್ದಾರೆ ಎಂದು ಫ್ರೀ ಮಲೇಷ್ಯಾ ಟುಡೇ ವರದಿ ತಿಳಿಸಿದೆ.

Belagavi : ಮಹಿಳೆ ವಿವಸ್ತ್ರ ಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ; ಆರೋಪಿಗಳ ಬಿಡುಗಡೆ, ಪಟಾಕಿ ಸಿಡಿಸಿ ಸಿಹಿ ತಿನ್ನಿಸಿ ಸಂಭ್ರಮಾಚರಣೆ .!

ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಹೆಲಿಕಾಪ್ಟರ್ ಮತ್ತೊಂದು ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆಯುತ್ತಿರುವ ದೃಶ್ಯ ಕಂಡು ಬರುತ್ತಿದೆ.

ರಾಯಲ್ ಮಲೇಷ್ಯಾ ನೌಕಾಪಡೆಯ ಆಚರಣೆ ಕಾರ್ಯಕ್ರಮಕ್ಕಾಗಿ ಪೂರ್ವಾಭ್ಯಾಸ ನಡೆಸುತ್ತಿದ್ದಾಗ ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್ ಗಳು ಗಾಳಿಯಲ್ಲಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ವರದಿಯಿಂದ ತಿಳಿದು ಬಂದಿದೆ.

Health : ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಎಸಳು ತಿನ್ನುವುದರಿಂದ ಏನು ಪ್ರಯೋಜನ.?

ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಹೆಲಿಕಾಪ್ಟರ್‌ನ ಸಿಬ್ಬಂದಿಗಳು. ಮೃತದೇಹಗಳನ್ನು ಗುರುತಿಸಲು ಲುಮುಟ್ ಏರ್ ಬೇಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಈ ಘಟನೆಯ ತನಿಖೆಗೆ ಆಯೋಗವನ್ನು ರಚಿಸಲು ಆಡಳಿತ ನಿರ್ಧರಿಸಿದೆ. ದೇಶದಲ್ಲಿ ಪದೇ ಪದೇ ಮಿಲಿಟರಿ ಹೆಲಿಕಾಪ್ಟರ್‌ಗಳು ಅಪಘಾತಕ್ಕೀಡಾಗುವ ಘಟನೆಗಳ ಬಗ್ಗೆ ಕಳವಳವನ್ನು ಹೆಚ್ಚಿಸಿದೆ.

spot_img
spot_img
spot_img
- Advertisment -spot_img