ಜನಸ್ಪಂದನ ನ್ಯೂಸ್, ಗದಗ : ಗದಗ ನಗರದ ಟಾಂಗಾಕೂಟ್ ಸರ್ಕಲ್ನಲ್ಲಿ ತಡರಾತ್ರಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ನಡೆದಿದೆ.
ಇನ್ನೂ ಗಲಾಟೆ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.
ಪಟಾಕಿ ಹಚ್ಚುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ವಾಗ್ವಾದ ಆರಂಭವಾಗಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ ಗುಂಪುಗಳ ನಡುವೆ ಗಲಾಟೆ ನಡೆದಿದೆ.
ಇದನ್ನು ಓದಿ : Special news : ಭಾರತದ ಈ ಗ್ರಾಮದಲ್ಲಿ ಯುವತಿ ವಾರಕ್ಕೊಬ್ಬನ ಜೊತೆ ಲಿವ್ ಇನ್ ರಿಲೇಷನ್‌ಶಿಪ್’ನಲ್ಲಿರಬಹುದಂತೆ.!
ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ, ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು. ಆದರೆ, ಪರಿಸ್ಥಿತಿ ಕೈ ಮೀರಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಲಾಠಿ ಚಾರ್ಜ್ ಮಾಡುತ್ತಿದ್ದಂತೆ ಜನರು ಎದ್ನೋ ಬಿದ್ನೋ ಅಂತ ದಿಕ್ಕುಪಾಲಾಗಿ ಓಡಿದ್ದಾರೆ.
ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.