ಜನಸ್ಪಂದನ ನ್ಯೂಸ್, ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಮಧು ಬಂಗಾರಪ್ಪ ವಿರುದ್ಧ ಚುನಾವಣಾ ಅಧಿಕಾರಿಗಳ (Election officer’s) ಕಚೇರಿಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು ಶಿಕ್ಷಕರ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಬೆಂಗಳೂರು ನಗರ ಜಿಲ್ಲೆ ಡಿಡಿಪಿಐ, ಬಿಇಒಗಳ ಜೊತೆ ಸಭೆ ಸೇರಿಸಿ ಪ್ರಚಾರ (promotion) ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ಮುಖಂಡರು ದೂರು ನೀಡಿದ್ದಾರೆ.
ಇದನ್ನು ಓದಿ : ಮಾಜಿ ಉಪಮುಖ್ಯಮಂತ್ರಿ ಮಾತನಾಡುತ್ತಿದ್ದ ವೇಳೆ ತಂಬಾಕು ತಿಂದ ಶಾಸಕ ; Video Viral.!
ಅಧಿಕಾರ ದುರುಪಯೋಗ (misusage) ಮಾಡಿಕೊಂಡು ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಪ್ರಭಾವ ಬೀರುತ್ತಿದ್ದಾರೆ ಎಂದು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ.
ಬೆಂಗಳೂರು ಶಿಕ್ಷಕರ ಉಪ ಚುನಾವಣೆಯಲ್ಲಿ ಶಿಕ್ಷಕ ಮತದಾರರಿಗೆ ಬೆಳ್ಳಿ (silver) ಬಟ್ಟಲುಗಳನ್ನು ನೀಡಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣರವರು ಅವರ ಏಜೆಂಟರ್‌ಗಳ ಮೂಲಕ 3 ಜಿಲ್ಲೆಯ ಎಲ್ಲಾ ಕ್ಷೇತ್ರದ ಎಲ್ಲಾ ಶಾಲೆಗಳಲ್ಲಿ ಹಂಚಿಕೆ ಮಾಡುತ್ತಿದ್ದಾರೆ.
ಇದನ್ನು ಓದಿ : ಕೆಸರಿನಲ್ಲಿ ಸಿಲುಕಿದ ಸಚಿವರು : ಹರಸಾಹಸ ಪಟ್ಟು ಹೊರ ತಂದದ್ಹೇಗೆ ; Video ವೀಕ್ಷಿಸಿ.!
ಇದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಆದ್ದರಿಂದ ಈ ಕೂಡಲೇ ದಾಸ್ತಾನು (Inventory) ಮಾಡಿರುವವರನ್ನು ಹಂಚಿಕೆ ಮಾಡುತ್ತಿರುವವರು ಹಾಗೂ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ದೂರಿನಲ್ಲಿ ಆಗ್ರಹಿಸಿದೆ.