Thursday, April 25, 2024
spot_img
spot_img
spot_img
spot_img
spot_img
spot_img

Lokasabha Election – 2024 : ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿ ಬಿಡುಗಡೆ ; 43 ಅಭ್ಯರ್ಥಿಗಳ ಹೆಸರು ಇಲ್ಲಿದೆ.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : 2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದೆ.

ಈ ಪಟ್ಟಿಯಲ್ಲಿ 43 ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಮಾಜಿ ಸಿಎಂ ಕಮಲ್ ನಾಥ್ ಅವರ ಪುತ್ರ ನಕುಲ್ ನಾಥ್ ಅವರಿಗೆ ಚಿಂದ್ವಾರದಿಂದ ಮತ್ತು ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಗೆ ಜಲೋರ್ ನಿಂದ ಟಿಕೆಟ್ ನೀಡಲಾಗಿದೆ.

Public Exam : 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ತಡೆ.!

ಈ ಹಿಂದೆ ಪಕ್ಷದ ಮೊದಲ ಪಟ್ಟಿಯಲ್ಲಿ 39 ಹೆಸರುಗಳನ್ನು ಪ್ರಕಟಿಸಲಾಗಿತ್ತು. ಈ ಮೂಲಕ ಕಾಂಗ್ರೆಸ್ ಇದುವರೆಗೆ 82 ಹೆಸರುಗಳನ್ನು ಪ್ರಕಟಿಸಿದೆ. ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ (ಸಿಇಸಿ) ಎರಡನೇ ಸಭೆ ನಿನ್ನೆ ಸಂಜೆ ನಡೆದಿತ್ತು.

ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಸಿಇಸಿ ಸದಸ್ಯರು ಭಾಗವಹಿಸಿದ್ದರು. ರಾಜಸ್ಥಾನ ಮತ್ತು ಉತ್ತರಾಖಂಡದ ಹಿರಿಯ ಕಾಂಗ್ರೆಸ್ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.

spot_img
spot_img
spot_img
- Advertisment -spot_img