ಜನಸ್ಪಂದನ ನ್ಯೂಸ್, ಹಾಸನ : ಹಾಸನ ತಾಲ್ಲೂಕಿನ ದುದ್ದ ಗ್ರಾಮದಲ್ಲಿ ಹಸೆಮಣೆ ಏರಬೇಕಿದ್ದ KSISF ಕಾನ್ಸ್‌ಟೇಬಲ್ ಬರ್ಬರ ಹತ್ಯೆಯಾಗಿದೆ.
ಕಾನ್ಸ್‌ಟೇಬಲ್ ವಿ. ಹರೀಶ್ (32) ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಕೊಲೆಯಾದ ವಿ. ಹರೀಶ್ ಅವರು ಬೆಂಗಳೂರಿನಲ್ಲಿ KSISF ಕಾನ್ಸ್‌ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ನವೆಂಬರ್ 11ರಂದು ಅವರ ಮದುವೆ ಫಿಕ್ಸ್ ಆಗಿತ್ತು. ಮದುವೆ ಆಮಂತ್ರಣ ಪತ್ರಿಕೆ ಕೊಡಲು ತೆರಳಿದ್ದ ವೇಳೆ ಹರೀಶ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾಸನ ತಾಲ್ಲೂಕಿನ ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕೊಲೆ ಪ್ರಕರಣ ನಡೆದಿದೆ