ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರು ನಗರದ ಡಿ. ಜೆ. ಹಳ್ಳಿ ಠಾಣೆ ಪೊಲೀಸರು, ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ ಆರೋಪದಡಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿ ಡಿ. ಜೆ. ಹಳ್ಳಿ ನಿವಾಸಿ ಸಾದ್ ಮುಸಾದ್ (20) ಎಂದು ತಿಳಿದು ಬಂದಿದೆ.
ಇದನ್ನು ಓದಿ : Health : ಬೆಳಿಗ್ಗೆ ತುಟಿ ಬಣ್ಣ ಬದಲಾಗಿ ಮುಖ ಊದಿಕೊಳ್ಳುತ್ತಿದೆಯೇ.? ಇದು ಈ ಗಂಭೀರ ರೋಗದ ಲಕ್ಷಣ.!
ಈತ ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತೆಯನ್ನು ಲವ್ ಮಾಡ್ತೀನಿ ಅಂತ ನಂಬಿಸಿ, ಮನೆಗೆ ಕರೆದೊಯ್ದು ಹಲವು ಬಾರಿ ಅತ್ಯಾಚಾರ ಮಾಡಿದ ಆರೋಪ ಕೇಳಿ ಬಂದಿದೆ.
ಇತ್ತೀಚೆಗೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅಪ್ರಾಪ್ತೆಯನ್ನು ಪಾಲಕರು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ಮಾಡಿಸಿದಾಗ ಆಕೆ ಗರ್ಭಿಣಿ ಎಂಬುದು ಗೊತ್ತಾಗಿದೆ.
ಇದನ್ನು ಓದಿ : ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ : ಕೊನೆಯ ದಿನಾಂಕ ಯಾವತ್ತು.? ಡೈರೆಕ್ಟ್ link ಇಲ್ಲಿದೆ.
ಈ ಸಂಬಂಧ ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮಗಳು ಪ್ರೆಗ್ನೆಂಟ್ ಆದ ವಿಚಾರ ತಿಳಿದ ಬಳಿಕ ತಂದೆ, ಆರೋಪಿಯ ಮನೆಗೆ ಪ್ರಶ್ನಿಸಲು ತೆರಳಿದ್ದಾರೆ. ಈ ವೇಳೆ ಆರೋಪಿಯು ಸಂತ್ರಸ್ತೆಯ ತಂದೆಗೆ ಜೀವ ಬೆದರಿಕೆ ಹಾಕಿರುವುದಲ್ಲದೇ ಹಲ್ಲೆ ಸಹ ಮಾಡಿದ್ದಾನೆ.
ಇದನ್ನು ಓದಿ : Special news : ಇಲ್ಲಿ ಮದುವೆಗೂ ಮುಂಚೆಯೇ ತಾಯಿ ಆಗ್ತಾರೆ ಹೆಣ್ಣು ಮಕ್ಕಳು ; ಭಾರತದ ಈ ಜನಾಂಗದಲ್ಲಿದೆ ವಿಚಿತ್ರ ಸಂಪ್ರದಾಯ.!
ಆರೋಪಿಯು ಇದೇ ರೀತಿ ಹಲವು ಶಾಲಾ ಬಾಲಕಿಯರನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪವಿದೆ. ಈ ಕುರಿತು ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡಿ. ಜೆ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.