ಜನಸ್ಪಂದನ ನ್ಯೂಸ್, ಗದಗ : ಗದಗ (Gadag) ನಗರದ ಲಾಡ್ಜ್ ವೊಂದರಲ್ಲಿ ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ (Construction Center Contract Engineer) ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ (ಜ.03) ನಡೆದಿದೆ.
ಆತ್ಮಹತ್ಯೆಗೆ ಶರಣಾದ ಇಂಜಿನಿಯರ್ ಶಂಕರಗೌಡ ಪಾಟೀಲ್ (54) ಎಂದು ತಿಳಿದು ಬಂದಿದೆ.
ಇದನ್ನು ಓದಿ : ದೂರು ನೀಡಲು ಬಂದ ಮಹಿಳೆಯೊಂದಿಗೆ ಕಚೇರಿಯಲ್ಲೇ Dysp ರಾಸಲೀಲೆ.!
ಇವರು ಗದಗ ಕೇಂದ್ರ ಬಸ್ ನಿಲ್ದಾಣದ ಸಮೀಪ ಇರುವ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ (Surrender to suicide at the lodge) ಎಂದು ತಿಳಿದು ಬಂದಿದೆ.
ಬೆಳಿಗ್ಗೆ ಚಹಾ ಕುಡಿದು ಮನೆಯಿಂದ ಹೊರಬಂದ ಇಂಜಿನಿಯರ್ ನಂತರ ಲಾಡ್ಜ್ ಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂಜಿನಿಯರ್ ಸಾವಿನ ಬಗ್ಗೆ ಹಲವು ಅನುಮಾನಗಳು ಎದುರಾಗಿವೆ.
ಇದನ್ನು ಓದಿ : ಪೊಲೀಸರನ್ನೇ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿದ Lady.!
ಬೆಟಗೇರಿ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಹಿಂದಿನ ಸುದ್ದಿ : ದೂರು ನೀಡಲು ಬಂದ ಮಹಿಳೆಯೊಂದಿಗೆ ಕಚೇರಿಯಲ್ಲೇ ಡಿವೈಎಸ್ಪಿ ರಾಸಲೀಲೆ.!
ಜನಸ್ಪಂದನ ನ್ಯೂಸ್, ತುಮಕೂರು : ಪೊಲೀಸ್ ಇಲಾಖೆಯೇ ತಲೆ ತಗ್ಗಿಸುವಂತಹ ಘಟನೆ ನಡೆದಿದ್ದು, ಪೊಲೀಸ್ ಠಾಣೆಗೆ ದೂರು ನೀಡಲು ಬಂದ ಮಹಿಳೆಯನ್ನು ಪುಸಲಾಯಿಸಿ ತನ್ನ ಕಚೇರಿಯಲ್ಲೇ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ದೌರ್ಜನ್ಯ ನಡೆಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇದನ್ನು ಓದಿ : ಕೋಣದ DNA ಪರೀಕ್ಷೆಗೆ ಮುಂದಾದ ಕರ್ನಾಟಕ- ಆಂಧ್ರಪ್ರದೇಶ ಗ್ರಾಮಸ್ಥರು ; ಅಂತದ್ದೇನಾಯ್ತು ಗೊತ್ತಾ.?
ತುಮಕೂರು ಜಿಲ್ಲೆಯ ಮಧುಗಿರಿ ಡಿವೈಎಸ್ಪಿ (Madhugiri Dysp of Tumkur District) ರಾಮಚಂದ್ರಪ್ಪ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ (Sexual assault) ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಮಹಿಳೆಯೊಬ್ಬರು ಜಮೀನು ವಿವಾದಕ್ಕೆ (Land dispute) ಸಂಬಂಧಿಸಿದಂತೆ ದೂರು ನೀಡಲು ಬಂದ ವೇಳೆ ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ರಾಸಲೀಲೆ ನಡೆಸಿದ್ದಾರೆ.
ಇದನ್ನು ಓದಿ : ಸಂಚಲನ ಸೃಷ್ಟಿಸಿದ ಒಂದೇ ಕೆರೆಯಲ್ಲಿ PSI, ಲೇಡಿ ಕಾನ್ಸ್‌ಟೇಬಲ್ ಮತ್ತು ಓರ್ವ ಯುವಕನ ಶವ ಪತ್ತೆ ಪ್ರಕರಣ.!
ಹೀನಕೃತ್ಯದ ವಿಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಡಿವೈಎಸ್‌ಪಿ ತಲೆಮರೆಸಿಕೊಂಡಿದ್ದಾರೆ (Hiding) ಎಂದು ತಿಳಿದು ಬಂದಿದೆ.
ಇನ್ನೂ ಮಹಿಳೆಯು ಪಾವಗಡ ಮೂಲದವರಾಗಿದ್ದು, ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ವಿಚಾರಣೆ ಸಲುವಾಗಿ ಮಹಿಳೆಯನ್ನು ಡಿವೈಎಸ್‌ಪಿ ಕಚೇರಿಗೆ ಕರೆಸಲಾಗಿತ್ತು.
ಇದನ್ನು ಓದಿ : 150 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ ; Chikkodi ಮೂಲದ ಯೋಧ ಸೇರಿ ಐವರು ಹುತಾತ್ಮ.!
ಡಿವೈಎಸ್‌ಪಿ ರಾಮಚಂದ್ರಪ್ಪ ಈ ವೇಳೆ ಮಹಿಳೆಯನ್ನು ಪುಸಲಾಯಿಸಿ ಆಕೆಯನ್ನು ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆ ಶುರು ಮಾಡಿದ್ದಾರೆ. ಮಹಿಳೆಯೊಂದಿಗೆ ಡಿವೈಎಸ್‌ಪಿ ರಾಮಚಂದ್ರಪ್ಪ ಬಲವಂತವಾಗಿ ನಡೆದುಕೊಳ್ಳುತ್ತಿರುವ ದೃಶ್ಯವನ್ನು ಸೆರೆ ಹಿಡಿದ ವ್ಯಕ್ತಿಯೊಬ್ಬರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.