Monday, March 17, 2025
HomeNewsಖೋಟಾ ನೋಟು ದಂಧೆ : ಕಾನ್ಸ್‌ಟೇಬಲ್ ಸೇರಿ ನಾಲ್ವರು Arrest.!
spot_img
spot_img
spot_img
spot_img
spot_img

ಖೋಟಾ ನೋಟು ದಂಧೆ : ಕಾನ್ಸ್‌ಟೇಬಲ್ ಸೇರಿ ನಾಲ್ವರು Arrest.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ರಾಯಚೂರು : ಜಿಲ್ಲೆಯಲ್ಲಿ ಪೊಲೀಸರು ಬೃಹತ್ ನಕಲಿ/ಖೋಟಾ ನೋಟು (Counterfeit note) ದಂಧೆಯನ್ನು ಬಯಲಿಗೆಳೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಕಲಿ ನೋಟು ತಯಾರಿಕಾ ಘಟಕದ ಮೇಲೆ ಪೊಲೀಸರು ದಾಳಿ ನಡೆಸಿ, ಸಶಸ್ತ್ರ ಮೀಸಲು ಪಡೆಯ ಕಾನ್ಸ್‌ಟೇಬಲ್ (Armed Reserve Force Constable) ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ರಾಯಚೂರು ಸಶಸ್ತ್ರ ಮೀಸಲು ಪಡೆಯ ಕಾನ್ಸ್‌ಟೇಬಲ್ ಮರಿಲಿಂಗ, ರಮೇಶ್ ಆದಿ, ಸದ್ದಾಂ, ಮತ್ತು ಶಿವಲಿಂಗ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು (Police) ಬಂಧಿಸಲಾಗಿದೆ.

ಇದನ್ನು ಓದಿ : Belagavi : ಭೀಕರ ರಸ್ತೆ ಅ*ಘಾ*, ಮೂವರ ಸಾವು.!

ರಾಯಚೂರಿನ ರಹಸ್ಯ ಸ್ಥಳದಲ್ಲಿ (secret place) ನಕಲಿ ನೋಟು ತಯಾರಿಸಲಾಗುತ್ತಿದ್ದು, ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ದಾಳಿಯ ಸಮಯದಲ್ಲಿ, ನಕಲಿ ಕರೆನ್ಸಿ ಉತ್ಪಾದಿಸಲು ಬಳಸುವ ಯಂತ್ರಗಳು, ಶಾಯಿ, ಮುದ್ರಿತ ನೋಟುಗಳು (Machines, ink, printed notes) ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ. 100, 200 ಮತ್ತು 500 ಮುಖಬೆಲೆಯ ನೋಟುಗಳನ್ನು ಇಲ್ಲಿ ಮುದ್ರಿಸಲಾಗುತ್ತಿತ್ತು.

ಇದನ್ನು ಓದಿ : BMRCL : ನಮ್ಮ ಮೆಟ್ರೋದಲ್ಲಿ ಉದ್ಯೋಗವಕಾಶ ; ಆಸಕ್ತರು ಅರ್ಜಿ ಸಲ್ಲಿಸಿ.!

ಈ ನಕಲಿ ನೋಟುಗಳನ್ನು ರಾಜ್ಯ ಮತ್ತು ವಿದೇಶ (state and abroad) ಗಳಿಗೆ ಕಳುಹಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಈ ಹಗರಣದಲ್ಲಿ ಸಶಸ್ತ್ರ ಮೀಸಲು ಪಡೆಯ ಕಾನ್ಸ್‌ಟೇಬಲ್ ಭಾಗಿಯಾಗಿರುವುದು ಆಶ್ಚರ್ಯಕರವಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲು ಹೆಚ್ಚಿನ ತನಿಖೆ (Further investigation) ನಡೆಸುತ್ತಿದ್ದಾರೆ.

ಹಿಂದಿನ ಸುದ್ದಿ : ಮುಂದಿನ ಎರಡು ದಿನ ಕರ್ನಾಟಕದ ಈ 4 ಜಿಲ್ಲೆಗಳಲ್ಲಿ ಮಳೆಯ ಆಗಮನ.!

ಜನಸ್ಪಂದನ ನ್ಯೂಸ್‌, ಬೆಂಗಳೂರು : ರಾಜ್ಯದಲ್ಲಿ ಸೂರ್ಯ ಸೂರ್ಯ ನೆತ್ತಿ ಸುಡುತ್ತಿರುವ ಹಿನ್ನಲೆಯಲ್ಲಿ ಬಿರು ಬಿಸಿಲಿಗೆ ಜನರು ಬಸವಳಿದಿದ್ದಾರೆ. ಆದರೆ ಇದೀಗ ಹವಾಮಾನ ಇಲಾಖೆ Good News ಒಂದನ್ನು ನೀಡಿದೆ. ಮುಂದಿನ ಎರಡು ದಿನಗಳವರೆಗೆ ಕರ್ನಾಟಕದ ಈ ನಾಲ್ಕು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಮಳೆ :

ಹವಾಮಾನ ಇಲಾಖೆಯ ಅನುಸಾರ ರಾಜ್ಯದ ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣ ಹವೆ ಮುಂದುವರಿಯಲಿದೆ.

ಇದನ್ನು ಓದಿ : Video : ಗೂಳಿಗೂ ಬಣ್ಣ ಹಾಕುವ ಮೂಲಕ ಗೂಳಿಯೊಂದಿಗೆ ಹೋಳಿ ಆಚರಿಸಿದ ಜನಸಮೂಹ.!

ದಕ್ಷಿಣ ಒಳನಾಡಿನ 3 ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆ ಇದೆ. ಮಳೆಯ ಜೊತೆಗೆ ಗುಡುಗು, ಮಿಂಚು ಕೂಡ ಬೀಸಲಿದೆ. ಮೈಸೂರು, ಹಾಸನ ಮತ್ತು ಕೊಡಗಿನಲ್ಲಿ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರದಲ್ಲಿ ಬಲವಾದ ಗಾಳಿ ಬೀಸಲಿದೆ.

ಮುಂದಿನ 5 ದಿನಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ ಗರಿಷ್ಠ ತಾಪಮಾನ 2 ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಾಗುತ್ತದೆ. ಆದ್ದರಿಂದ, ಜನರು ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.

ಇದನ್ನು ಓದಿ : Car ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತ ; ಮುಂದೆನಾಯ್ತು? ಈ ಆಘಾತಕಾರಿ ವಿಡಿಯೋ ನೋಡಿ.!

ಕರಾವಳಿ :

ತಾಪಮಾನ ತೀವ್ರವಾಗಿ ಏರಿದೆ ಮತ್ತು ಕೆಲವು ಸ್ಥಳಗಳಲ್ಲಿ ಈಗಾಗಲೇ 40 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಮುಂದಿನ 5 ದಿನಗಳವರೆಗೆ ಹವಾಮಾನ ಇದೇ ರೀತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರೊಂದಿಗೆ, ದಕ್ಷಿಣ ಕನ್ನಡದ ಕೆಲವು ಸ್ಥಳಗಳಲ್ಲಿ ಇಂದು ಗುಡುಗು ಮತ್ತು ಮಿಂಚಿನ ಮಳೆಯಾಗುವ ಮುನ್ಸೂಚನೆ ನೀಡಿದೆ. ಜಿಲ್ಲೆಯ ಕೆಲವು ಭಾಗಗಳಲ್ಲಿ ನಿನ್ನೆ (ಮಾರ್ಚ್ 16) ಮಳೆಯಾಗಿದೆ.

ಯಾವ ಜಿಲ್ಲೆಯಲ್ಲಿ ಒಣಹವೆ ಮುಂದುವರೆಯಲಿದೆ :

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ವಿಜಯನಗರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿಯಲ್ಲಿ ಒಣ ಹವೆ ಇರಲಿದೆ. ಕಲಬುರಗಿಯಲ್ಲಿ ತಾಪಮಾನ 42.8 ಡಿಗ್ರಿ ಸೆಲ್ಸಿಯಸ್ ಇದೆ.

ಇದನ್ನು ಓದಿ : Airports Authority of India ದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಉತ್ತರ ಒಳನಾಡು : 

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರೊಂದಿಗೆ, ಮಾರ್ಚ್ 18 ರಿಂದ 20 ರವರೆಗೆ ಮೂರು ದಿನಗಳವರೆಗೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ಮುನ್ಸೂಚನೆ ನೀಡಿದ್ದು, ಜನರು ಜಾಗರೂಕರಾಗಿರಬೇಕು.

ಇಂದು, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರದಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ಬಲವಾದ ಗಾಳಿಯೊಂದಿಗೆ. ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಒಣ ಹವಾಮಾನ ಮುಂದುವರಿಯಲಿದೆ.

ಇದನ್ನು ಓದಿ : Health : ಈ ಹಣ್ಣನ್ನು ತಿಂದರೆ ನೈಸರ್ಗಿಕವಾಗಿ ಕಿಡ್ನಿಯಲ್ಲಿನ ಕಲ್ಲು ಕರಗುವುದಂತೆ.!

2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳ :

ಮಾರ್ಚ್ 18 ಮತ್ತು 19 ರಂದು ಪ್ರತ್ಯೇಕ ಪ್ರದೇಶಗಳಿಗೆ ಶಾಖದ ಅಲೆಯ ಎಚ್ಚರಿಕೆಯೂ ಇದೆ. ದಕ್ಷಿಣ ಒಳನಾಡಿನಲ್ಲಿ ಮರುದಿನ ಯಾವುದೇ ಪ್ರಮುಖ ಬದಲಾವಣೆಗಳು ಕಂಡುಬರುವ ಸಾಧ್ಯತೆಯಿಲ್ಲ ಆದರೆ ಶೀಘ್ರದಲ್ಲೇ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಕ್ರಮೇಣ ಹೆಚ್ಚಳವಾಗಬಹುದು.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!