Sunday, September 15, 2024
spot_img
spot_img
spot_img
spot_img
spot_img
spot_img
spot_img

CM ನಿವಾಸದ ಎದುರು ಅಪ್ಪಿಕೊಂಡು ಲಿಪ್ ಕಿಸ್ ಮಾಡಿದ ಜೋಡಿ ; ವಿಡಿಯೋ Viral.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಸೋಶಿಯಲ್ ಮೀಡಿಯಾದಲ್ಲಿ ಪ್ರಣಯ ಜೋಡಿಗಳ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಸ್ವಲ್ಪ ನಾಚಿಕೆ, ಮುಜುಗರ ಇಲ್ಲದೇ ನಡು ರಸ್ತೆಯಲ್ಲಿಯೇ ಮೈಮರೆತು ಎಲ್ಲೆಂದರಲ್ಲಿ ಜೋಡಿಗಳು ಕಿಸ್ ಮಾಡುವ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ.

ಸದ್ಯ ಇಂತಹದ್ದೇ ಇನ್ನೊಂದು ವಿಡಿಯೋ ವೈರಲ್ ಆಗಿದೆ. ಸಿಎಂ ನಿವಾಸದ ರಸ್ತೆಯಲ್ಲಿಯೇ ಜೋಡಿ ಅಸಭ್ಯವಾಗಿ ವರ್ತನೆ ತೋರಿದ ಘಟನೆ ಉತ್ತರ ಪ್ರದೇಶದ ಲಕ್ನೋ ನಗರದಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ನಿಮ್ಮ ಹೃದಯ ರೇಖೆಯಿಂದ ತಿಳಿಯಬಹುದು ನಿಮ್ಮ personality ; ನಿಮ್ಮ ಅಂಗೈ ರೇಖೆ ಯಾವ ರೀತಿ ಇದೆ.!

ವೈರಲ್ ವಿಡಿಯೋದಲ್ಲಿರುವ ದೃಶ್ಯ :
ನಾವು ನೀವು ನೋಡಿದಂತೆ ಸಿಎಂ ನಿವಾಸ ಅಂದ್ರೆ ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿರುತ್ತದೆ. ಆದ್ರೂ ಯಾವುದೇ ಅಂಜಿಕೆ ಇಲ್ಲದೇ ಜೋಡಿ ಕಿಸ್ ಮಾಡಿದ್ದಾರೆ.

ವೇಗವಾಗಿ ಚಲಿಸುತ್ತಿದ್ದ ಕಾರ್‌ನಲ್ಲಿ ಜೋಡಿ ಸನ್‌ರೂಫ್ ತೆಗೆದು ಹೊರ ಬಂದಿದ್ದಾರೆ. ಅಲ್ಲಿಯೇ ಒಬ್ಬರಿಗೊಬ್ಬರು ಮುದ್ದಿಸುತ್ತಾ ಅಪ್ಪಿಕೊಂಡು ತಂಪಾದ ಗಾಳಿಯಲ್ಲಿ ತುಟಿಗೆ ತುಟಿ ಸೇರಿಸಿ ಲಿಪ್ ಕಿಸ್ ಮಾಡಿದ್ದಾರೆ.

ಇದನ್ನು ಓದಿ : ಪ್ರಧಾನಿ ನಿವಾಸದಲ್ಲಿ ಸಿಕ್ಕಿದೆಲ್ಲ ದೋಚಿದ ಪ್ರತಿಭಟನಾಕಾರರು ; ವಿಡಿಯೋ viral.!

ಈ ವಿಡಿಯೋವನ್ನು @anujjournalist1 ಎಂಬ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದ್ದು, ಲಕ್ನೋ ಟ್ರಾಫಿಕ್ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ. ಈ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಪೊಲೀಸರು, ಈ ಸಂಬಂಧ ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇಂತಹವರಿಂದಲೇ ನಮ್ಮ ದೇಶದ ಸಂಸ್ಕೃತಿ ನಾಶವಾಗುತ್ತಿದೆ. ಸಂಸ್ಕೃತಿಯನ್ನು ನಾಶ ಮಾಡುತ್ತಿರುವ ಅಶ್ಲೀಲ ದಂಪತಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಹಿಂದೂ ಸಂಘಟನೆಗಳ ಮುಖಂಡರು ಪೊಲೀಸರನ್ನು ಆಗ್ರಹಿಸಿದ್ದಾರೆ.

ಇದನ್ನು ಓದಿ : ಕರ್ನಾಟಕ ಪಶುಸಂಗೋಪನೆ & ಮೀನುಗಾರಿಕೆ ಇಲಾಖೆಯಿಂದ 400 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಈ ಹಿಂದೆಯೂ ಇಂತ ಅಸಹ್ಯಕರ ವಿಡಿಯೋಗಳು ಹರಿದಾಡಿದ್ದವು. ನಾವು ಕಾಲೇಜಿನಲ್ಲಿದ್ದೇವೆ ಎಂಬುದನ್ನು ಮರೆತು ವಿದ್ಯಾರ್ಥಿಗಳಿಬ್ಬರು ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿಯೇ ಕಿಸ್ಸಿಂಗ್‌ ಮತ್ತು ರೊಮ್ಯಾನ್ಸ್‌ ನಲ್ಲಿ ತೊಡಗಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿತ್ತು.

ಈ ಘಟನೆ ನೋಯ್ಡಾದ ಪ್ರತಿಷ್ಠಿತ ವಿಶ್ವವಿದ್ಯಾಲಯವೊಂದರಲ್ಲಿ ನಡೆದಿದ್ದು, ಯೂನಿವರ್ಸಿಟಿ ಕ್ಯಾಂಪಸ್‌ ಒಳಗಡೆಯೇ ವಿದ್ಯಾರ್ಥಿಗಳಿಬ್ಬರು ಮೈ ಮರೆತು ರೊಮ್ಯಾನ್ಸ್‌ ಮಾಡಿದ್ದಾರೆ. ಈ ಕುರಿತ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img