ಜನಸ್ಪಂದನ ನ್ಯೂಸ್, ಬೆಂಗಳೂರು : ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಸುಮಾರು 56 ಕೋಟಿ ರೂ. ಮೌಲ್ಯದ 14 ಬದಲಿ ನಿವೇಶನಗಳನ್ನು ಪಡೆದಿರುವ ಪ್ರಕರಣಕ್ಕೆ ಸಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮೋದನೆಯನ್ನು ಹೈ ಕೋರ್ಟ್ ಎತ್ತಿಹಿಡಿಯಿತು.
ಇದನ್ನು ಓದಿ : ರಾಜ್ಯದ ಮತ್ತೋರ್ವ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ; ಶ್ರೀಗಳಿಂದ ಸ್ಪಷ್ಟೀಕರಣ.!
ಸಿಎಂ ವಿರುದ್ಧ ತನಿಖೆಗೆ ನೀಡಿದ ಆದೇಶ ಕುರಿತು ನಿನ್ನೆ ಹೈಕೋರ್ಟ್ ಮಹತ್ವದ ತೀರ್ಪಿನ ನಂತರ ಈ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಮಹತ್ವದ ಆದೇಶ ಹೊರಬಿದ್ದಿದ್ದು, ಲೋಕಾಯುಕ್ತ ತನಿಖೆಗೆ ಆದೇಶ ನೀಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿದೆ.
ಸ್ನೇಹಮಯಿ ಕೃಷ್ಣಾ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇದೆ ಎಂದು ಕೋರ್ಟ್ ಹೇಳಿದ್ದು ತನಿಖೆಗೆ ಆದೇಶ ನೀಡಿದೆ.