Friday, September 13, 2024
spot_img
spot_img
spot_img
spot_img
spot_img
spot_img
spot_img

ನ್ಯಾಯ ಕೇಳಿ ಬಂದ ಮಹಿಳೆಯನ್ನು ‘ಮಲಗೋಕೆ ಬಾ’ ಎಂದು ಕರೆದ CPI.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಕೋಲಾರ : ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಕುಟುಂಬಕ್ಕೆ ಪೊಲೀಸರೇ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.

ಬಂಗಾರಪೇಟೆ ಪೊಲೀಸ್ ಠಾಣೆಯ ಸಿಪಿಐ ನಂಜಪ್ಪ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಮಹಿಳೆಯೂ ಸಿಪಿಐ ಮೇಲೆ ಕಿರುಕುಳದ ಆರೋಪ ಮಾಡಿದ್ದಾರೆ.

ಇದನ್ನು ಓದಿ : Special news : ಶ್ರಾವಣ ಮಾಸದಲ್ಲಿ ಮಾಂಸಾಹಾರ ತಿನ್ಮಬಾರದು ಏಕೆ.? ಇಲ್ಲಿದೆ ವೈಜ್ಞಾನಿಕ ಕಾರಣ.

ಪಕ್ಕದ ಮನೆಯವರು ತಮ್ಮ ಮೇಲೆ ದೌರ್ಜನ್ಯ ಎಸಗಿದ್ದು, ಇದರ ಬಗ್ಗೆ ದೂರು ನೀಡಲು ಪೊಲೀಸ್‌ ಠಾಣೆಗೆ ಬಂದ ನಮ್ಮನ್ನೇ ಶೋಷಿಸಲಾಗುತ್ತಿದೆ.

ಠಾಣೆಗೆ ಕರೆಸಿ ನನ್ನನ್ನು ಮಲಗೋಕೆ ಬಾ ಎಂದು ಸಿಪಿಐ ಕರೆಯುತ್ತಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಪೊಲೀಸರನ್ನು ಆಗಾಗ ಮನೆ ಬಳಿ ಕಳುಹಿಸಿ ಕಿರುಕುಳ, ಅವಮಾನ ನೀಡುತ್ತಿದ್ದಾರೆ. ಅಲ್ಲದೇ ಠಾಣೆಗೆ ಕರೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದಾರೆ.

ಇದನ್ನು ಓದಿ : ಅಪ್ರಾಪ್ತೆಯನ್ನು ಲಾಡ್ಜ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ; Video ವೈರಲ್ ಮಾಡಿದ ನೀಚ.!

ನನ್ನ ಮೇಲೆ ವೇಶ್ಯಾವಾಟಿಕೆ ಕೇಸ್‌, ನನ್ನ ಗಂಡನ ವಿರುದ್ಧ ರೌಡಿಶೀಟ್ ಕೇಸ್ ತೆರೆಯುವುದಾಗಿ ಬೆದರಿಕೆ ಹಾಕುತ್ತಿದ್ದಾರೆ.

ನಮಗೆ ರಕ್ಷಣೆ ಕೊಡಿ ಎಂದು ಮಹಿಳೆ ಮನವಿ ಮಾಡಿರುವ ವಿಡಿಯೋ ವೈರಲ್ ಆಗಿದೆ. ಸದ್ಯ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಲ್ಲಿಂದಲೇ ಈ ವಿಡಿಯೋ ಮಾಡಿದ್ದಾರೆ.

ಇದನ್ನು ಓದಿ : ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ 400 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಆಹ್ವಾನ.!

ಇನ್ನೂ ಈ ಪ್ರಕರಣವನ್ನು ವಿಚಾರಣೆ ಮಾಡಿ ವರದಿ ನೀಡುವಂತೆ ಕೆಜಿಎಫ್ ಎಸ್ಪಿ ಶಾಂತರಾಜು ಅವರು ಕೆಜಿಎಫ್ ಡಿವೈಎಸ್‌ಪಿ ಪಾಂಡುರಂಗ ಅವರಿಗೆ ಆದೇಶ ನೀಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img