Friday, October 18, 2024
spot_img
spot_img
spot_img
spot_img
spot_img
spot_img
spot_img

ಮಹಾರಾಷ್ಟ್ರಕ್ಕೆ ಮದುವೆಗೆ ತೆರಳಿದ ಕ್ರೂಸರ್ Accident ; ಬಾಗಲಕೋಟೆ ಮೂಲದ ಐವರ ಸಾವು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬಾಗಲಕೋಟೆ : ವಿಜಯಪುರ – ಗುಹಾಗರ್ ಹೆದ್ದಾರಿಯಲ್ಲಿ (Highway) ಖಾಸಗಿ ಬಸ್‌ಗೆ ಹಿಂಬದಿಯಿಂದ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ.

ಮಹಾರಾಷ್ಟ್ರದ (Maharashtra) ಸಾಂಗ್ಲಿ ಜಿಲ್ಲೆಯ ಜಂಭುಲ್ವಾಡಿ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ 11 ಜನರು ಗಾಯಗೊಂಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿಯ (Jamakhandi) ಮೂಲದ ಜನರು ಮದುವೆಗೆಂದು (Marriage function) ಸಾಂಗ್ಲಿಯ ತಾಸಗಾಂವ್ ತಾಲೂಕಿನ ಸವರ್ಡೆಗೆ ಹೋಗುತ್ತಿದ್ದರು. ಈ ವೇಳೆ ಜಂಭುಲ್ವಾಡಿ ಗ್ರಾಮದ ಬಳಿ ಖಾಸಗಿ ಬಸ್​​ಗೆ ಕ್ರೂಸರ್​​ ಗುದ್ದಿದೆ. ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಇದನ್ನು ಓದಿ : ವಿಚಿತ್ರ ನಂಬಿಕೆ : ತಂತಿ ಬೇಲಿ ಮೇಲೆ Bra ನೇತು ಹಾಕ್ತಾರೆ ಯುವತಿಯರು ; ಯಾಕ್ ಗೊತ್ತಾ.?

ಅಪಘಾತದ ರಭಸಕ್ಕೆ ಕ್ರೂಸರ್​​​ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ವಿಷಯ ತಿಳಿದು ಅಕ್ಕಪಕ್ಕದ ಗ್ರಾಮಸ್ಥರು ತಕ್ಷಣ ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.

ಮೃತದೇಹಗಳನ್ನು (Dead body) ಹೊರತೆಗೆಯಲು ಗ್ರಾಮಸ್ಥರು ಸಾಕಷ್ಟು ಹರಸಾಹಸ ಪಡುವಂತಾಯಿತು. ಅಪಘಾತದ ಬಳಿಕ ಬೆಂಕಿ ಹೊತ್ತಿಕೊಂಡಿದ್ದರಿಂದ ಭಾರಿ ಪ್ರಾಣಹಾನಿ ಸಂಭವಿಸುವ ಸಾಧ್ಯತೆಯಿತ್ತು. ಆದರೆ, ಗ್ರಾಮಸ್ಥರು ತಕ್ಷಣ ಸ್ಥಳಕ್ಕೆ ಬಂದು ಅಗ್ನಿಶಾಮಕ ದಳಕ್ಕೆ (Fire Brigade) ಕರೆ ಮಾಡಿದ್ದರು. ಬಳಿಕ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಿಯಂತ್ರಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿ : ಹಾವು ಹಿಡಿಯುವುದು ಇಷ್ಟು ಸುಲಭನಾ.? ಹಾ, ನೀವು try ಮಾಡಬೇಡಿ ಹುಷಾರ್ ; ವಿಡಿಯೋ ನೋಡಿ.

ಗಾಯಗೊಂಡ 11 ಜನರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ಧಲ್ಗಾಂವ್ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಘಟನೆಗೆ ಕ್ರೂಸರ್ ಚಾಲಕನ ಅಜಾಗರೂಕತೆ ಕಾರಣ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ರೆಹಮದ್ಪುರ, ಅಡಿಹುಡಿ, ಲೋಕಾಪುರ ಮತ್ತಿ ಹಲಗಲಿ ಗ್ರಾಮದವರು ಎಂದು ತಿಳಿದು ಬಂದಿದೆ.

ಗಂಭೀರ ಸ್ಥಿತಿಯಲ್ಲಿ (Serious injuries) ಇರುವವರನ್ನು ಮಿರಜ್‌ನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img