Saturday, July 13, 2024
spot_img
spot_img
spot_img
spot_img
spot_img
spot_img

ಶಾಲೆ ಹತ್ತಿರದ ಪೊದೆಯೊಂದರಲ್ಲಿ ಬೆ*ಲೆ ಮಹಿಳೆಯ ಮೃ*ದೇಹ ಪತ್ತೆ : ಅತ್ಯಾ*ರ ಶಂಕೆ.!

spot_img

ಜನಸ್ಪಂದನ ನ್ಯೂಸ್‌, ಡೆಸ್ಕ್ : ಬಾಲಕಿಯರ ಪ್ರೌಢಶಾಲೆ ಹತ್ತಿರದ ಪೊದೆಗಳಲ್ಲಿ 21 ವರ್ಷದ ಮಹಿಳೆಯೊಬ್ಬರ (Women) ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ಘಟನೆ ಆಂಧ್ರಪ್ರದೇಶದ (Andhra Pradesh) ಬಾಪಟ್ಲಾ ಜಿಲ್ಲೆಯ ಎಪುರುಪಾಲೆಂ ಕುಗ್ರಾಮವೊಂದರಲ್ಲಿ ನಡೆದಿದ್ದು, ಸಾರ್ವಜನಿಕರನ್ನು ಬೆಚ್ಚಿಬೀಳಿಸುವ ಘಟನೆ ಇದಾಗಿದೆ. ಕೊಲೆಗೆ ಮುಂಚೆ ಅತ್ಯಾಚಾರ ಎಸಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ : ಭಾರತೀಯ ರೈಲ್ವೆ ಇಲಾಖೆಯಲ್ಲಿ ನೇಮಕಾತಿ : 10/12 ನೇ ತರಗತಿ ಪಾಸಾದವರಿಗೆ 19900 ರೂ. ವೇತನ.!

ಮೃತ ಮಹಿಳೆಯ ಕುಟುಂಬದ ಸದಸ್ಯರ ಹೇಳಿಕೆಯಂತೆ ಪ್ರಕಾರ, ಎಪುರುಪಾಲೆಂ ಗ್ರಾಮದ ಮಹಿಳೆ ಬೆಳಿಗ್ಗೆ 5:30ರ ಸುಮಾರಿಗೆ ಮನೆಯಿಂದ ಹೊರಹೋಗಿದ್ದು ಆ ಬಳಿಕ ಹಿಂತಿರುಗಲಿಲ್ಲ. ಇದರಿಂದ ಗಾಬರಿಗೊಂಡ ಮನೆಮಂದಿ ಹುಡುಕಲು ಹೋದಾಗ  ಬೆತ್ತಲೆ ಸ್ಥಿತಿಯಲ್ಲಿ ಮೃತದೇಹ ಪೊದೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರ ಬಳಿ ಹೇಳಿಕೊಂಡಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹತ್ಯೆಯ ತನಿಖೆಗಾಗಿ ಐದು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನು ಓದಿ : ಲೋನ್‌ಗೆಂದು ಬಂದು ಬ್ಯಾಂಕ್ CEOನನ್ನೇ ದಿವಾಳಿ ಮಾಡಿದ ಕಿಲಾಡಿ ಮಹಿಳೆ.!

ಇನ್ನು ಘಟನೆ ನಡೆದ ವಿಚಾರ ಗೊತ್ತಾಗುತ್ತಿದ್ದಂತೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಗ್ರಾಮಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ವಂಗಲಪುಡಿ ಅನಿತಾ ಅವರಿಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗ್ರಾಮಕ್ಕೆ ಆಗಮಿಸಿದ ಗೃಹ ಸಚಿವ ಅನಿತಾ ಮೃತ ಮಹಿಳೆಯ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಿದ್ದು, ಜೊತೆಗೆ ಪ್ರಕರಣದಲ್ಲಿ ಭಾಗಿಯಾದವರನ್ನು 48 ಗಂಟೆಗಳ ಒಳಗಾಗಿ ಬಂಧಿಸಬೇಕು, ಯಾವುದೇ ಒತ್ತಡಕ್ಕೆ ಮಣಿಯಲು ಅವಕಾಶ ಇಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

spot_img
spot_img
- Advertisment -spot_img