Saturday, July 27, 2024
spot_img
spot_img
spot_img
spot_img
spot_img
spot_img

Suspend : ಕರ್ತವ್ಯ ಲೋಪ ಹಿನ್ನೆಲೆ ; PSI ಅಮಾನತು.!

spot_img

ಜನಸ್ಪಂದನ ನ್ಯೂಸ್, ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದ ಬೆಳ್ಳೂರು (Belluru) ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣದಲ್ಲಿ ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ ಪಿಎಸ್‌ಐ‌ನ್ನು ಅಮಾನತು ಮಾಡಲಾಗಿದೆ.

ಬೆಳ್ಳೂರು ಠಾಣೆಯ ಪಿಎಸ್ಐ ಬಸವರಾಜ ಚಿಂಚೋಳಿ ಸಸ್ಪೆಂಡ್ ಆಗಿದ್ದಾರೆ.

ಇದನ್ನು ಓದಿ : ಮಹಿಳೆ ಮೇಲೆ ನಿರಂತರ ಅತ್ಯಾಚಾರ ; Video ವೈರಲ್ ಮಾಡಿ ಗ್ರಾ. ಪಂ. ಅಧ್ಯಕ್ಷೆಯ ಮಗನಿಂದ ವಿಕೃತಿ.!

ಕರ್ತವ್ಯಲೋಪ ಹಿನ್ನೆಲೆಯಲ್ಲಿ ಮಂಡ್ಯ ಎಸ್‌ಪಿ ಎನ್.ಯತೀಶ್ ‌ಅಮಾನತು (suspended) ಆದೇಶ ಹೊರಡಿಸಿದ್ದಾರೆ.

ಘಟನೆಯ ಹಿನ್ನೆಲೆ :
ಬೆಳ್ಳೂರಿನಲ್ಲಿ ಹಿಂದೂ ಹಾಗೂ ಮುಸ್ಲಿಂ ಯುವಕರ ಮಧ್ಯೆ ಕಾರು ಓವರ್ ಟೇಕ್ ವಿಚಾರವಾಗಿ ಗಲಾಟೆಯಾಗಿದ್ದು, ಬಳಿಕ ಅಭಿಲಾಷ್ ಎಂಬ ಯುವಕನ ಮೇಲೆ ಹಲ್ಲೆ ನಡೆದಿತ್ತು.

ಈ ಬಗ್ಗೆ ದೂರು ಸ್ವೀಕರಿಸದೆ ಪಿಎಸ್‌ಐ ಬಸವರಾಜ ಚಿಂಚೋಳಿ ನಿರ್ಲಕ್ಷ್ಯ ತೋರಿದ್ದರು ಎಂದು ಆರೋಪಿಸಲಾಗಿತ್ತು. ಬಳಿಕ ಸೋಮವಾರ ರಾತ್ರಿ 7 ಗಂಟೆ ಸಮಯದಲ್ಲಿ ಮುಸ್ಲಿಂ ಯುವಕರು ಮತ್ತೆ ದಾಂಧಲೆ ನಡೆಸಿ ಅಭಿಲಾಷ್ ಮೇಲೆ ಮಾರಣಾಂತಿಕ ಹಲ್ಲೆ (Fatal assault) ನಡೆಸಿದ್ದರು. ಅಲ್ಲದೇ, ಕೆಲ ಮನೆಗಳಿಗೆ ನುಗ್ಗಿ ಬೆದರಿಕೆ ಹಾಕಲಾಗಿದೆ ಎಂದು ಸ್ಥಳೀಯರು ಆರೋಪಿದ್ದಾರೆ.

ಈ ಬಗ್ಗೆ ಯುವಕ ಅಭಿಲಾಶ್ ಹಾಗೂ ಅವರ ಚಿಕ್ಕಪ್ಪ ಸೇರಿ ಬೆಳ್ಳೂರು ಠಾಣೆಗೆ ಹೋಗಿ ದೂರು ನೀಡಿದ್ದರು. ಆದರೆ, ಪೊಲೀಸರು ದೂರು ದಾಖಲಿಸಿದೇ ಉಡಾಫೆ ವರ್ತನೆಯಿಂದ ವಾಪಸ್ ಕಳಿಸಿದ್ದರು.

ಈ ಘಟನೆಯನ್ನು ಖಂಡಿಸಿ ಬೆಳ್ಳೂರು ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಪಟ್ಟು ಹಿಡಿದಿದ್ದರು. ನಂತರ ಈ ಹಲ್ಲೆ ಪ್ರಕರಣದ ಗಂಭೀರತೆಯನ್ನು ಅರಿತ ಪೊಲೀಸರು 3 ಪ್ರತ್ಯೇಕ ದೂರನ್ನು (A separate complaint) ದಾಖಲಿಸಿಕೊಂಡು ಕ್ರಮಕ್ಕೆ ಮುಂದಾಗಿದ್ದಾರೆ.

ಇದನ್ನು ಓದಿ : ಉತ್ತರ ಪತ್ರಿಕೆ ಓದದೇ ರೀಲ್ಸ್ ಮಾಡುತ್ತ ಮಾರ್ಕ್ಸ್ ಕೊಟ್ಟ ಮೇಡಂ ; ಮುಂದೆನಾಯ್ತು Video ನೋಡಿ.

ಆದರೆ, ಇಷ್ಟೆಲ್ಲ ಆಗುವುದಕ್ಕಿಂತ ಮುಂಚೆಯೇ ದೂರು ಕೊಡಲು ಬಂದರೂ ದಾಖಲಿಸದ ಪೊಲೀಸರ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿ ಬೆಳ್ಳೂರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಈ ಹಿನ್ನೆಲೆಯಲ್ಲಿ ಬೆಳ್ಳೂರು ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ ಚಿಂಚೋಳಿ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ಅವರು ಆದೇಶ ಹೊರಡಿಸಿದ್ದಾರೆ.

spot_img
spot_img
- Advertisment -spot_img