Friday, June 14, 2024
spot_img
spot_img
spot_img
spot_img
spot_img
spot_img

ಕರ್ತವ್ಯ ಲೋಪದ ಹಿನ್ನೆಲೆ : ಮೂವರು ಪೊಲೀಸರು Suspend.!

spot_img

ಜನಸ್ಪಂದನ ನ್ಯೂಸ್, ಮೈಸೂರು : ಮೈಸೂರು ಜಿಲ್ಲೆಯ ಕೆ.ಆರ್‌. ನಗರ ತಾಲ್ಲೂಕಿನ ಚಂದಗಾಲ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಒಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಸಸ್ಪೆಂಡ್ ಮಾಡಲಾಗಿದೆ.

ದೂರು ಸ್ವೀಕರಿಸಲು ನಿರಾಕರಿಸಿದ ಕೆ.ಆರ್.ನಗರ ಠಾಣೆಯ ಸಿಪಿಐ ಸಂತೋಷ್, ಎಸ್‌ಐ ಗಿರೀಶ್‌ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ ರಾಘವೇಂದ್ರ ಅವರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಇದನ್ನು ಓದಿ : Health : ಈರುಳ್ಳಿ ಸೊಪ್ಪು ಸೇವಿಸುವುದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ.?

ಘಟನೆಯ ಹಿನ್ನೆಲೆ :
ಕೆ.ಆರ್.ನಗರ ತಾಲ್ಲೂಕಿನ ಗ್ರಾಮವೊಂದರ ಲೋಕೇಶ್ ಎಂಬಾತ ಪಕ್ಕದ ಗ್ರಾಮದ ಬಾಲಕಿಯೋರ್ವಳ ಖಾಸಗಿ ಫೋಟೋ ಹಾಗೂ ವಿಡಿಯೋ ಮಾಡಿ ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ.

ಈ ವಿಚಾರವಾಗಿ ಅಪ್ರಾಪ್ತ ಸಂತ್ರಸ್ತೆ ಪೋಷಕರು ಕೆ.ಆರ್. ನಗರ ಠಾಣೆಗೆ ದೂರು ನೀಡಲು ಮುಂದಾಗಿದ್ದರು. ಆದರೆ ತಮಗೆ ನ್ಯಾಯ ಸಿಗುವ ಭರವಸೆ ಇಲ್ಲದೆ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿತ್ತು.

ಅಂತೆಯೇ ಮಹದೇವ ನಾಯ್ಕ ಕುಟುಂಬದವರು ಚಾಮರಾಜನಗರ ಜಿಲ್ಲೆ ಮಹದೇಶ್ವರಬೆಟ್ಟ ಸಮೀಪದ ತಾಳಬೆಟ್ಟದಲ್ಲಿ ಶನಿವಾರ ಆತ್ಮಹತ್ಯೆಗೆ ಯತ್ನಿಸಿದ್ದರು.

ಇವರಲ್ಲಿ ಮಹದೇವನಾಯ್ಕ ಸಾವನ್ನಪ್ಪಿದ್ದರು. ಮೃತದೇಹವನ್ನು ಸ್ವಗ್ರಾಮಕ್ಕೆ ತಂದ ವೇಳೆ, ಸಂಬಂಧಿಕರು ಹಾಗೂ ಗ್ರಾಮಸ್ಥರು ಠಾಣೆ ಸಮೀಪದ ಅಂಬೇಡ್ಕರ್ ಪ್ರತಿಮೆ ಎದುರು ಧರಣಿ ನಡೆಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ : ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಟೈಪಿಸ್ಟ್‌, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ಭರ್ತಿಗೆ KPSC ಗೆ ಪ್ರಸ್ತಾವಣೆ.!

ಸ್ಥಳಕ್ಕೆ ಭೇಟಿ ನೀಡಿದ್ದ ಕೆ.ಆರ್. ನಗರ ಶಾಸಕ ಡಿ. ರವಿಶಂಕರ್‌, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆಯಾಗಲಿದೆ. ಮೃತರ ಕುಟುಂಬದವರಿಗೆ ಸರ್ಕಾರದಿಂದ ಪರಿಹಾರ ಕೊಡಿಸುತ್ತೇನೆ ಎಂದು ಭರವಸೆ ನೀಡಿದರು.

ಸಂತ್ರಸ್ತ ಬಾಲಕಿಯ ತಾಯಿ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದು, ಬಾಲಕಿ ಹಾಗೂ ಅಜ್ಜಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

spot_img
spot_img
- Advertisment -spot_img