ಶುಕ್ರವಾರ, ಜನವರಿ 2, 2026

Janaspandhan News

HomeCrime NewsCar – KSRTC ಬಸ್ ಭೀಕರ ಅಪಘಾತ ; ಮೂವರು ಯುವಕರ ದುರ್ಮರಣ.
spot_img
spot_img
spot_img

Car – KSRTC ಬಸ್ ಭೀಕರ ಅಪಘಾತ ; ಮೂವರು ಯುವಕರ ದುರ್ಮರಣ.

- Advertisement -

ಜನಸ್ಪಂದನ ನ್ಯೂಸ್‌, ಬೆಂಗಳೂರು ಗ್ರಾಮಾಂತರ : ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತ (Accident) ದಲ್ಲಿ ಕಾರಿ (Car) ನಲ್ಲಿದ್ದ ಮೂವರು ಯುವಕರು ದುರ್ಮರಣಕ್ಕೀಡಾದ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಚಿಕ್ಕಬಳ್ಳಾಪುರ ದಿಕ್ಕಿನಿಂದ ವೇಗವಾಗಿ ಬರುತ್ತಿದ್ದ ಕಾರು (Car) ಚಾಲಕರ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರುಗಡೆಯ ರಸ್ತೆ ಮೇಲೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್‌ಗೆ ಅಪ್ಪಳಿಸಿದ ಪರಿಣಾಮ ದುರಂತ ನಡೆದಿದೆ.

ಡಿಕ್ಕಿಯ ತೀವ್ರತೆಗೆ ಕಾರು (Car) ಗಂಭೀರವಾಗಿ ಹಾನಿಗೊಳಗಾಗಿದ್ದು, ವಾಹನದಲ್ಲಿ ಸಿಲುಕಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮೋಹನ್ ಕುಮಾರ್ (33), ಸುಮನ (28) ಮತ್ತು ಸಾಗರ್ (23) ಎಂದು ಪೊಲೀಸರು ದೃಢಪಡಿಸಿದ್ದಾರೆ. ಇವರು ಮೂವರೂ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಮೂಲದವರು ಎಂದು ಮಾಹಿತಿ ದೊರೆತಿದೆ.

ಇದನ್ನು ಓದಿ : “ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರಿಗೆ ಬೆಂಕಿ : ಲೋಕಾಯುಕ್ತ Inspector ಸಜೀವ ದಹನ”.

ಅಪಘಾತದ ರಭಸದ ಪರಿಣಾಮ ಬಸ್ ಮುಂಭಾಗಕ್ಕೂ ಹಾನಿಯಾಗಿದ್ದು, ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸುವ ಕಾರ್ಯವನ್ನು ಪೊಲೀಸರು ಮತ್ತು ಸ್ಥಳೀಯರು ತಕ್ಷಣ ಪೂರ್ಣಗೊಳಿಸಿದ್ದಾರೆ.

ಅತಿವೇಗವೇ ಈ ದುರಂತಕ್ಕೆ ಪ್ರಮುಖ ಕಾರಣವಾಗಿರಬಹುದೆಂದು ಪ್ರಾಥಮಿಕ ತನಿಖೆಯಿಂದ ಊಹಿಸಲಾಗಿದೆ. ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿ ವಾಹನಗಳನ್ನು ತೆರವುಗೊಳಿಸಿ ಸಂಚಾರ ಸರಾಗಗೊಳಿಸುವಲ್ಲಿ ತೊಡಗಿದ್ದರು.

ಇದನ್ನು ಓದಿ : Accident : ಕಾರು – ಟ್ರ್ಯಾಕ್ಟರ್ ಡಿಕ್ಕಿ ; ಸ್ಥಳದಲ್ಲಿಯೇ ನಾಲ್ವರು ಯುವಕರ ದುರ್ಮರಣ.!

ಅಪಘಾತದ ಪರಿಣಾಮವಾಗಿ ಕೆಲಕಾಲ ಹೈದರಾಬಾದ್–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ನಜ್ಜುಗುಜ್ಜಾದ ಕಾರಿನಿಂದ (Car) ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹೆಚ್ಚಿನ ಸಮಯ ತೆಗೆದುಕೊಂಡ ಕಾರಣ ದಟ್ಟಣೆ ಮತ್ತಷ್ಟು ಹೆಚ್ಚಾಗಿತ್ತು.

ಬಳಿಕ ಮೃತದೇಹಗಳನ್ನು ದೇವನಹಳ್ಳಿಯ ಆಕಾಶ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, Car – KSRTC ಬಸ್ ಅಪಘಾತಕ್ಕೆ ಕಾರಣಗಳ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ.


ರಾಜ್ಯದಲ್ಲಿ 2.84 ಲಕ್ಷ Government ಹುದ್ದೆಗಳು ಖಾಲಿ ; 24,300 ನೇಮಕಕ್ಕೆ ಅನುಮತಿ : ಸಿಎಂ

Government Job

ಜನಸ್ಪಂದನ ನ್ಯೂಸ್‌, ಬೆಂಗಳೂರು : ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡ ಸೇರಿದಂತೆ ರಾಜ್ಯದ ವಿವಿಧೆಡೆ ಇತ್ತೀಚೆಗೆ ಯುವಕರು ಪ್ರತಿಭಟನೆ ನಡೆಸಿದ ಬೆನ್ನಲ್ಲೇ, ಕರ್ನಾಟಕದಲ್ಲಿ ಒಟ್ಟು 2,84,881 ಸರ್ಕಾರಿ (Government) ಹಾಗೂ ಅರೆ ಸರ್ಕಾರಿ (semi Government) ಹುದ್ದೆಗಳು ಖಾಲಿ ಇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಪೈಕಿ 24,300 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಮಂಜೂರಾತಿ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವಿಧಾನಸಭೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಮುಖ್ಯಮಂತ್ರಿ, ಇಲಾಖಾವಾರು ಖಾಲಿ ಹುದ್ದೆಗಳ ವಿವರ ಹಾಗೂ ಪ್ರಸ್ತುತ ಭರ್ತಿ ಮಾಡಲು ಅನುಮೋದನೆ ಪಡೆದ ಹುದ್ದೆಗಳ ಮಾಹಿತಿಯನ್ನು ಪ್ರಕಟಿಸಿದ್ದಾರೆ.

ಇದನ್ನು ಓದಿ : ಮದುವೆಯಲ್ಲಿ Dance ಮಾಡಿದ ಹೆಂಡತಿ ; ಗಂಡ ಮಾಡಿದ್ದೇನು ಗೊತ್ತೇ? ವಿಡಿಯೋ ನೋಡಿ.

ಇಲಾಖಾವಾರು ಖಾಲಿ ಹುದ್ದೆಗಳ ವಿವರ :

ಸಿಎಂ ನೀಡಿದ ಮಾಹಿತಿಯಂತೆ, ರಾಜ್ಯದ ವಿವಿಧ (Government) ಇಲಾಖೆಗಳಲ್ಲಿ ಈ ಕೆಳಕಂಡಂತೆ ಹುದ್ದೆಗಳು ಖಾಲಿಯಿವೆ:

  • ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ : 79,696
  • ಆರೋಗ್ಯ ಇಲಾಖೆ : 37,572
  • ಒಳಾಡಳಿತ ಇಲಾಖೆ : 28,188
  • ಉನ್ನತ ಶಿಕ್ಷಣ ಇಲಾಖೆ : 13,599
  • ಪಶುಸಂಗೋಪನೆ ಇಲಾಖೆ : 11,020
  • ಗ್ರಾಮೀಣಾಭಿವೃದ್ಧಿ ಇಲಾಖೆ : 10,504
  • ಕಂದಾಯ ಇಲಾಖೆ : 10,867
  • ಪರಿಶಿಷ್ಟ ಜಾತಿಗಳ ಕಲ್ಯಾಣ ಇಲಾಖೆ : 9,646
  • ಆರ್ಥಿಕ ಇಲಾಖೆ : 7,668
  • ಕಾನೂನು ಇಲಾಖೆ : 7,659
  • ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ : 4,792
  • ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ–ಜೀವನೋಪಾಯ ಇಲಾಖೆ : 4,010
  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ : 3,391
  • ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ : 2,435

ಇದನ್ನು ಓದಿ : ಮಧ್ಯರಾತ್ರಿ ಸೊಸೆಯ ಕೋಣೆಯಿಂದ ಕೇಳಿದ Noise ; ನೋಡಲು ಹೋದ ಅತ್ತೆಗೆ ಶಾಕ್!

24,300 ಹುದ್ದೆಗಳ ಭರ್ತಿಗೆ ಅನುಮೋದನೆ :

ಪ್ರಸ್ತುತ ಆರ್ಥಿಕ ಇಲಾಖೆ ಅನುಮೋದನೆ ನೀಡಿರುವ 24,300 ಹುದ್ದೆಗಳ ಇಲಾಖಾವಾರು ವಿವರ ಹೀಗಿದೆ:

  • ಸಾರಿಗೆ ಇಲಾಖೆ : 6,847
  • ಇಂಧನ ಇಲಾಖೆ : 2,400
  • ಆರ್ಥಿಕ (ಹಣಕಾಸು) ಇಲಾಖೆ : 2,243
  • ಆರೋಗ್ಯ ಇಲಾಖೆ : 1,725
  • ಕಂದಾಯ ಇಲಾಖೆ : 1,350
  • ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ : 5,267
  • ಕೃಷಿ ಇಲಾಖೆ : 557
  • ಒಳಾಡಳಿತ ಇಲಾಖೆ : 557
  • ಪರಿಶಿಷ್ಟ ಜಾತಿಗಳ ಕಲ್ಯಾಣ ಇಲಾಖೆ : 892
  • ವೈದ್ಯಕೀಯ ಶಿಕ್ಷಣ ಇಲಾಖೆ : 333
  • ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ : 200
  • ನಗರಾಭಿವೃದ್ಧಿ ಇಲಾಖೆ : 185
  • ಸಹಕಾರ ಇಲಾಖೆ : 180

ಇದನ್ನು ಓದಿ : Heart-Attack ಕ್ಕೂ 30 ನಿಮಿಷ ಮುನ್ನ ದೇಹ ನೀಡುವ ಈ ಎಚ್ಚರಿಕೆ ಸೂಚನೆಗಳು

ಒಟ್ಟು 24,300 ಹುದ್ದೆಗಳ ನೇಮಕಾತಿಗೆ ಮಂಜೂರಾತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

Courtesy : Kannada Prabha

ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ

- Advertisement -
Janaspandhan News
Janaspandhan Newshttp://WWW.janaspandhan.com
Janaspandana News is a digital news platform that reports crime and local news from Karnataka.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments