Sunday, September 8, 2024
spot_img
spot_img
spot_img
spot_img
spot_img
spot_img
spot_img

Hubballi : ನೈಋತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ನೌಕರಿ : ಹುಬ್ಬಳ್ಳಿಯ ನೈಋತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ.

ರೈಲ್ವೆ ಪ್ರೌಢಶಾಲೆಯಲ್ಲಿ ಖಾಲಿ ಇರುವ TGT, PGT ಶಿಕ್ಷಕರು ಮತ್ತು ಪ್ರಾಥಮಿಕ ಶಿಕ್ಷಕರ ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ ಮತ್ತು ಮುಂತಾದ ಷರತ್ತುಗಳನ್ನು ಪೂರೈಸಿರಬೇಕು.

ಅಂಚೆ ಕಛೇರಿಯಲ್ಲಿ 40,000ಕ್ಕೂ ಅಧಿಕ ನೇಮಕಾತಿ : 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.!

ಹುಬ್ಬಳ್ಳಿಯ ನೈಋತ್ಯೆ ರೈಲ್ವೆ ಪ್ರೌಢಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ ಮತ್ತು ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗನ್ನು ಈ ಕೆಳಗೆ ನೀಡಿದೆ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್‌ಸೈಟ್ ಮತ್ತು ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್‌ಗಳನ್ನು ಪರಿಶೀಲಿಸಿ ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ/Details of posts :
* ಟಿಜಿಟಿ ಶಿಕ್ಷಕರು (ವಿವಿಧ ವಿಷಯಗಳಲ್ಲಿ) – 04 ಹುದ್ದೆಗಳು.
* ಪ್ರಾಥಮಿಕ ಶಿಕ್ಷಕರು (ವಿವಿಧ ವಿಷಯಗಳಲ್ಲಿ) – 05 ಹುದ್ದೆಗಳು.

ವೇತನ ಶ್ರೇಣಿ/Pay Scale :
* ಟಿಜಿಟಿ ಶಿಕ್ಷಕರು (ವಿವಿಧ ವಿಷಯಗಳಲ್ಲಿ) : ರೂ. 26,250/-
* ಪ್ರಾಥಮಿಕ ಶಿಕ್ಷಕರು (ವಿವಿಧ ವಿಷಯಗಳಲ್ಲಿ) : ರೂ. 21,250/-

ಐಟಿಐ, ಡಿಪ್ಲೊಮ, ಬಿಇ ಮತ್ತು ಯಾವುದೇ ಪದವಿ ಪಡೆದಿದ್ದೀರಾ.? HAL ನಲ್ಲಿದೆ ಉದ್ಯೋಗವಕಾಶ.!

ಶೈಕ್ಷಣಿಕ ಅರ್ಹತೆಗಳು/education qualification :
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೋಮಾ, ಪದವಿ ಅಥವಾ ಸ್ನಾತಕೋತ್ತರ ಪದವಿ, ಬಿ.ಎಡ್, ಡಿ.ಎಡ್, ಬಿ.ಲಿಬ್ ಯನ್ನು ಮುಗಿಸಿರಬೇಕು. ಹುದ್ದೆವಾರು ಅರ್ಹತಾ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ಓದಿ.

ಅರ್ಜಿ ಶುಲ್ಕ/application fee :
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ವಯೋಮಿತಿ/Age limit :
ಹುದ್ದೆವಾರು ನಿಗದಿಪಡಿಸಿದ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ/Relaxation age limit :
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
* ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
* ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/Method of selection :
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/Application Procedure :
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಬಯೋಡಾಟಾ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ ಮತ್ತು ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿ. 27 ಮೇ 2024 ರಿಂದ 28 ಮೇ 2024 ರವರೆಗೆ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗುವುದು.

Job : ರಾಜ್ಯ ಸರ್ಕಾರದಿಂದ ನರ್ಸ್​ ಮೆಂಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಪ್ರಮುಖ ದಿನಾಂಕಗಳು/Important Dates :
* ನೇರ ಸಂದರ್ಶನಕ್ಕೆ ಹಾಜರಾಗುವ ದಿನಾಂಕ : ದಿನಾಂಕ 27-05-2024 ರಿಂದ 28-05-2024 ರವರೆಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.

* ನೇರ ಸಂದರ್ಶನಕ್ಕೆ ಹಾಜರಾಗುವ ಸ್ಥಳ : ರೈಲ್ವೆ ಪ್ರೌಢಶಾಲೆ, ಆಂಗ್ಲ ಮಾಧ್ಯಮ, ಗದಗ ರಸ್ತೆ, ಹುಬ್ಬಳ್ಳಿ – 580020.

Important Links/ ಪ್ರಮುಖ ಲಿಂಕುಗಳು :

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img