Thursday, April 25, 2024
spot_img
spot_img
spot_img
spot_img
spot_img
spot_img

Boyfriend ಜೊತೆ ಇದ್ದ ಮಗಳನ್ನು ತಾಯಿ ಮಾಡಿದ್ದೇನು ಗೊತ್ತೇ.?

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಮಗಳು ಮನೆಯಲ್ಲಿ ತನ್ನ ಬಾಯ್‌ಫ್ರೆಂಡ್‌ ಜೊತೆ ಇರುವುದನ್ನು ಕಂಡು ಕೋಪಗೊಂಡ ತಾಯಿ, ಮಗಳನ್ನು ಹ*ತ್ಯೆ ಮಾಡಿರುವ ಘಟನೆ ಹೈದರಾಬಾದ್‌ನಲ್ಲಿ (Hyderabad) ನಡೆದಿದೆ.

ತಾಯಿಯಿಂದ ಹ*ತ್ಯೆಯಾದ ಮಗಳನ್ನು 19 ವರ್ಷದ ಭಾರ್ಗವಿ (Bhargavi) ಎಂದು ಹೇಳಲಾಗುತ್ತಿದೆ.

Video : ಆಟವಾಡಲು ಹೋಗಿ ಈಜುಕೊಳದಲ್ಲಿ ಮುಳುಗುತ್ತಿದ್ದ ಪುಟ್ಟ ತಂಗಿಯ ಪ್ರಾಣ ಉಳಿಸಿ ಅಣ್ಣ.!

ಇಬ್ರಾಹಿಂಪಟ್ಟಣದ ತಮ್ಮ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮಗಳು ಭಾರ್ಗವಿ ತನ್ನ ಪ್ರಿಯಕರನೊಂದಿಗೆ ಇರುವುದನ್ನು ಜಂಗಮ್ಮ (Jangamma)  ನೋಡಿದ್ದಾರೆ. ಇದರಿಂದ ಕೋಪಗೊಂಡು ತಾಯಿ ಕ*ತ್ತು ಹಿ*ಸುಕಿ ಮಗಳ ಕೊ*ಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಜಂಗಮ್ಮ ಕೆಲಸ ಮುಗಿಸಿ ಮನೆಗೆ ಊಟಕ್ಕೆ ಬಂದಿದ್ದರು. ಈ ವೇಳೆ ಅವರ ಪುತ್ರಿ ಭಾರ್ಗವಿ ತನ್ನ ಪ್ರಿಯಕರನ ಜೊತೆಯಲ್ಲಿದ್ದಳು. ಮಗಳ ಪ್ರಿಯಕರ (Boyfriend) ನನ್ನು ಬೈದು ಮನೆಯಿಂದ ಹೊರಗೆ ಕಳುಹಿಸಿದ್ದಾಳೆ. ನಂತರ ಮಗಳ ಮೇಲೆ ಹ*ಲ್ಲೆ ನಡೆಸಿ ಕ*ತ್ತು ಹಿ*ಸುಕಿ ಕೊಲೆ ಮಾಡಿದ್ದಾಳೆ.

Apex : ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಕೊ*ಲೆಯಾದ ಯುವತಿಯ ಅಪ್ರಾಪ್ತ ಸಹೋದರ, ತಾನು ಕೊ*ಲೆಯನ್ನು ನೋಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ತನ್ನ ತಾಯಿಯ ವಿರುದ್ಧ ದೂರು (complaint) ದಾಖಲಿಸಿದ್ದಾನೆ. ತಾಯಿ ತನ್ನ ಸಹೋದರಿಯ ಮೇಲೆ ಹಲ್ಲೆ ಮಾಡುವುದನ್ನು ಕಿಟಕಿಯಿಂದ ನೋಡಿದ್ದಾನೆ ಎಂದು ಇಬ್ರಾಹಿಂಪಟ್ಟಣಂ ಪೊಲೀಸ್ ಅಧಿಕಾರಿ ಸತ್ಯನಾರಾಯಣ ತಿಳಿಸಿದ್ದಾರೆ.

ಪುತ್ರಿ ಭಾರ್ಗವಿಗೆ ಮದುವೆ ಮಾಡಬೇಕು ಎಂದು ಜಂಗಮ್ಮ ಯೋಚಿಸಿದ್ದರು. ಮಗಳಿಗೆ ಸೂಕ್ತ ವರನ ಅನ್ವೇಷಣೆಯಲ್ಲಿದ್ದರು. ಅದರ ಮಧ್ಯೆ ಈ ದುರ್ಘಟನೆ ಸಂಭವಿಸಿದೆ.

spot_img
spot_img
spot_img
- Advertisment -spot_img