ಜನಸ್ಪಂದನ ನ್ಯೂಸ್, ಡೆಸ್ಕ್ : ವ್ಯಕ್ತಿಯೋರ್ವ ಪಾರ್ಕಿಂಗ್ ಸ್ಥಳದಲ್ಲಿದ್ದ ಕಾರನ್ನು ತಿರುಗಿಸುವ ವೇಳೆ ಅದು ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಆಘಾತಕಾರಿ ಘಟನೆ (shocking incident) ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಇನ್ನೂ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಹಾರಾಷ್ಟ್ರದ ಪುಣೆಯ (Pune, Maharashtra) ವಿಮಾನ ನಗರ ಸಮೀಪದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಈ ಘಟನೆ ನಡೆದಿದೆ.
ಇದನ್ನು ಓದಿ : ಟ್ರೈನ್‌ನಲ್ಲಿ ಬೆಂಕಿ ವದಂತಿ : ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಹರಿದು 10 ಜನರ ಸಾ*ವು ; ವಿಡಿಯೋ.!
ಆಕಸ್ಮಿಕವಾಗಿ ರಿವರ್ಸ್ ಗೇರ್ ಚಲಾಯಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು (Car out of driver’s control) ಪಾರ್ಕಿಂಗ್ ಸ್ಥಳದ ತಡೆಗೋಡೆಗೆ ಬಡಿದು ಸೀದಾ ಕೆಳಗೆ ಬಿದ್ದಿದೆ. ಈ ವೇಳೆ ಜೋರಾಗಿ ಸದ್ದಾಗಿದ್ದು, ಸುತ್ತಮುತ್ತಲಿದ್ದ ಜನ ಸ್ಥಳಕ್ಕೆ ಓಡಿ ಬಂದಿದ್ದಾರೆ.
ಅದೃಷ್ಟವಶಾತ್ ಘಟನೆಯಲ್ಲಿ ಕಾರು ಚಾಲಕನಿಗೆ ಯಾವುದೇ ರೀತಿಯ ಹಾನಿಯಾಗಿಲ್ಲ (No damage). ಕಾರು ಚಾಲಕ ತಮ್ಮ ಪಾರ್ಕಿಂಗ್ ಸ್ಥಳವನ್ನು ತಪ್ಪಾಗಿ ಲೆಕ್ಕ ಹಾಕಿರಬಹುದು. ಇದು ಘಟನೆಗೆ ಕಾರಣವಾಗಿರಬಹುದು. ಇನ್ನೂ ಕಾರಿನ ಬಲವಾದ ಹೊಡೆತ ಗೋಡೆ ಕುಸಿದು, ಕಾರು ಕೆಳಗೆ ಬೀಳಲು ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಇದನ್ನು ಓದಿ : Super glue ಹಾಕಿ ತುಟಿಗಳನ್ನು ಮುಚ್ಚಿದ ಯುವಕ ; ಮುಂದೆನಾಯ್ತು ವಿಡಿಯೋ ನೋಡಿ.!
@AshTheWiz (Ashok Bijalwan) ಎಂಬುವವರು ಈ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದು, ಕಾರನ್ನು ಜೇಮ್ಸ್ ಬಾಂಡ್ ರೀತಿ ಚಾಲನೆ ಹಾಗೂ ಪಾರ್ಕಿಂಗ್ ಮಾಡದಿರಿ ಎಂದು ಶೀರ್ಷಿಕೆ ನೀಡಿದ್ದಾರೆ.
ವಿಡಿಯೋ ಇಲ್ಲಿದೆ :
Don't try to drive/park like James Bond.
Incident at Shubh Gateway Apartment, Viman Nagar in Pune. pic.twitter.com/v9NOmP3csm
— Ashok Bijalwan अशोक बिजल्वाण 🇮🇳 (@AshTheWiz) January 21, 2025
ಹಿಂದಿನ ಸುದ್ದಿ : ವಿಚ್ಛೇದನದ ಕೇಸ್ ನಲ್ಲಿ ಪುರುಷರು ಸಹ ಸಂತ್ರಸ್ತರು : ಹೈಕೋರ್ಟ್.
ಜನಸ್ಪಂದನ ನ್ಯೂಸ್, ಬೆಂಗಳೂರು : ಇತ್ತೀಚೆಗೆ ವೈವಾಹಿಕ ವಿವಾದಗಳ ಪ್ರಕರಣಗಳಲ್ಲಿ (A case of matrimonial disputes) ಮಹಿಳೆಯರು ಹೆಚ್ಚಾಗಿ ಬಲಿಪಶುಗಳಾಗಿದ್ದರೂ, ಅಂತಹ ಪ್ರಕರಣಗಳಲ್ಲಿ ಪುರುಷರು ಸಹ ಸಂತ್ರಸ್ತರು. ಹೀಗಾಗಿ ಲಿಂಗ ಸಮಾನತೆಯ ಸಮಾಜ ಈಗಿನ ಅಗತ್ಯವಾಗಿದೆ (A gender egalitarian society is the need of the hour) ಎಂದು ಕರ್ನಾಟಕ High court ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿ ಡಾ. ಚಿಲ್ಲಕೂರ್ ಸುಮಲತಾ ಅವರು ಹೊರಡಿಸಿದ ಆದೇಶದಲ್ಲಿ ಈ ಬಗ್ಗೆ ತಿಳಿಸಲಾಗಿದೆ.
ಇದನ್ನು ಓದಿ : WCD : ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಮಹಿಳೆಯೊಬ್ಬರು ತಮ್ಮ Divorce ಕುರಿತು ತಾವು ಹಾಜರಾಗಬೇಕಿರುವ ಕೋರ್ಟ್ ತಮ್ಮ ಮನೆಯಿಂದ 130 ಕಿಲೋಮೀಟರ್ ದೂರದಲ್ಲಿದೆ.
ಹೀಗಾಗಿ ಪ್ರತಿ ಸಲವೂ ವಿಚಾರಣೆಗೆ ಹಾಜರಾಗಲು ಕಷ್ಟವಾಗುತ್ತಿದೆ ಎಂದು ವರ್ಗಾವಣೆ ಅರ್ಜಿಯನ್ನು (Transfer application) ಸಲ್ಲಿಸಿದ್ದರು. ಆದರೆ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದೆ (Dismissed).
ಇದನ್ನು ಓದಿ : ರಸ್ತೆಯಲ್ಲಿ ಮಲಗಿದ್ದ ನಾಯಿಮರಿಯ ಮೇಲೆ ಕಾರು ಹತ್ತಿಸಿದ ಕ್ರೂರ ನಿವೃತ್ತ Police ಸಿಬ್ಬಂದಿ.!
ಮಹಿಳೆ ಸಮಸ್ಯೆಯನ್ನು ಎದುರಿಸುತ್ತಿದ್ದರೂ, ಈ ಪ್ರಕರಣದಲ್ಲಿ ಪ್ರತಿವಾದಿ ಆಕೆಯ ಪತಿ ಇಬ್ಬರು ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ಇನ್ನೂ ಈ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಿದರೆ, ಪತಿಗೆ ಇನ್ನಷ್ಟು ತೊಂದರೆಯಾಗುತ್ತೆ ಎಂದು ವಾದಿಸಿದ್ದು, ಇದನ್ನು ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡಿದೆ.
ಮಹಿಳೆಗೆ ಪುರುಷನಂತೆಯೇ ಸಮಾನ ಹಕ್ಕುಗಳಿವೆ. ವಾಸ್ತವವಾಗಿ, ಹೆಚ್ಚಿನ ಸಂದರ್ಭಗಳಲ್ಲಿ ಮಹಿಳೆಯರು ಪ್ರಾಥಮಿಕ ಬಲಿಪಶುಗಳು. ಆದರೆ ಪುರುಷರು ಸ್ತ್ರೀಯರ ಕ್ರೌರ್ಯದಿಂದ ಪ್ರಭಾವಿತರಾಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಕೋರ್ಟ್ ತಿಳಿಸಿದೆ.
ಇದನ್ನು ಓದಿ : All India Institute of Medical Science ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಆದ್ದರಿಂದ, ಲಿಂಗ ಸಮಾನ ಸಮಾಜದ ಅವಶ್ಯಕತೆ ಇದೆ. ಆ ರೀತಿಯ ಸಮಾಜ ಲಿಂಗ ಅಥವಾ ಲಿಂಗದ ಆಧಾರದ ಮೇಲೆ ಕರ್ತವ್ಯಗಳನ್ನು ಬೇರ್ಪಡಿಸುವುದನ್ನು ತಡೆಯುವ ಗುರಿಯನ್ನು ಹೊಂದಿದೆ ಎಂದು ಹೈಕೋರ್ಟ್ ತಿಳಿಸಿದೆ.