ಜನಸ್ಪಂದನ ನ್ಯೂಸ್, ಡೆಸ್ಕ್ : ಎಐ ಸೃಷ್ಟಿಸಿರುವ ಅಶ್ಲೀಲ ವಿಡಿಯೋಗಳ ಮೂಲಕ ಹುಡುಗಿಯರನ್ನು ಬ್ಲಾಕ್ ಮೇಲ್ ಮಾಡುತ್ತಿರುವ ಪ್ರಕರಣ ಮಧ್ಯಪ್ರದೇಶದ ಜಬಲ್ ಪುರದಲ್ಲಿ ಬೆಳಕಿಗೆ ಬಂದಿದೆ.
ಈ ವಂಚನೆಗೆ ಇದುವರೆಗೆ 50ಕ್ಕೂ ಹೆಚ್ಚು ಮಹಿಳೆಯರು ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಗ್ಗೆ ದೂರು ಸ್ವೀಕರಿಸಿದ ನಂತರ ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ ಪ್ರತಾಪ್ ಸಿಂಗ್ ಅವರು ಎಸ್‌ಐಟಿ ರಚಿಸಿದ್ದಾರೆ.
ಇದನ್ನು ಓದಿ : Cable ಅಳವಡಿಕೆಗೆ ಲಕ್ಷ ಲಕ್ಷ ಲಂಚಕ್ಕೆ ಬೇಡಿಕೆ ; ಅಧಿಕಾರಿಯ ವಿರುದ್ಧ ಹರಿದಾಡಿದ ವಿಡಿಯೋ.!
ಆರೋಪಿಗಳು ಪೊಲೀಸರಂತೆ ನಾಟಕವಾಡಿ ಮಹಿಳೆಯರಿಗೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಡುತ್ತಿದ್ದರು ಎಂದು ವರದಿಯಾಗಿದೆ.
ಜಬಲ್ಪುರದ ಕಾಲೇಜು ವಿದ್ಯಾರ್ಥಿಗಳ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿಂದ ತೆಗೆದುಕೊಂಡು ಎಐ ರಚಿಸಿದ ವಿಡಿಯೋಗಳ ಮೂಲಕ ಬ್ಲ್ಯಾಕ್ ಮೇಲ್ ಮಾಡುತ್ತಾರೆ.
ಅಲ್ಲದೇ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡುವುದಾಗಿ ಯುವತಿಯರನ್ನು ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಇದನ್ನು ಓದಿ : ಸಾಯಲು ಬಂದು ರೈಲು ಹಳಿಯಲ್ಲೇ ನಿದ್ರೆಗೆ ಜಾರಿದ ಯುವತಿ; ಮುಂದೆನಾಯ್ತು ಈ Video ನೋಡಿ.!
ಈ ನೀಚ ಕೃತ್ಯವೆಸಗುವವರಿಗೆ ಯುವತಿಯರ ನಂಬರ್ ಹೇಗೆ ಸಿಕ್ಕಿತು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಜಬಲ್‌ಪುರದಲ್ಲಿ ಪ್ರತಿಭಟನೆ ನಡೆಸಿವೆ. ಪೊಲೀಸ್ ಆರೋಪಿಗಳ ಪತ್ತೆ ನಡೆಸುತ್ತಿದ್ದು, ಸದ್ಯದಲ್ಲೇ ಸಿಕ್ಕಿಬೀಳಲಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.