ಜನಸ್ಪಂದನ ನ್ಯೂಸ್, ತುಮಕೂರು : ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ (Madhugiri Taluk of Tumkur District) ಮಿಡಿಗೇಶಿ ಪೊಲೀಸರು ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪನನ್ನು ಅರೆಸ್ಟ್ ಮಾಡಿದ್ದಾರೆ.
ಡ್ರೋನ್ ಪ್ರತಾಪ್ ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ (arrested).
ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್ ವಿರುದ್ಧ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ (Public and environmentalists) ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ : ಹಾಸ್ಟೆಲ್‌ನಲ್ಲಿ ಹುಟ್ಟುಹಬ್ಬಕ್ಕೆ ಸ್ನೇಹಿತನಿಗೆ ಚಿತ್ರಹಿಂಸೆ ; ಎಂದೂ ನೋಡಿರದ Video ವೈರಲ್.!
ಡ್ರೋನ್ ಪ್ರತಾಪ್, ಹೊಂಡದ ರೀತಿ ಇರುವ ಆಳವಾದ ಗುಂಡಿಯಲ್ಲಿನ (In the deep pit) ನೀರಿಗೆ ಕೆಮಿಕಲ್ ಹಾಕಿ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದರು. ಕೆಮಿಕಲ್ ಎಸೆದ ತಕ್ಷಣ ಅಲ್ಲಿ ದೊಡ್ಡ ಮಟ್ಟದಲ್ಲಿ ಸ್ಪೋಟವಾಗಿ, ಬೆಂಕಿ ಸಹ ಚಿಮ್ಮಿದೆ. ಅಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡು ಬಂದಿದೆ.
ಯಾವೆಲ್ಲ ಕೆಮಿಕಲ್ ಹಾಕಿದರೆ ಬ್ಲಾಸ್ಟ್ ಆಗುತ್ತೆ ಎಂದು ಲೈವ್‌ನಲ್ಲಿ ಹೇಳಿದ್ದು, ಇದನ್ನು ಕಿಡಿಗೇಡಿಗಳು ಕೃತ್ಯಕ್ಕೆ ಬಳಸುವ ಸಾಧ್ಯತೆ ಇದೆ ಎಂದು ಪರಿಸರವಾದಿ ವಿಜಯ್ ನಿಶಾಂತ್ ಕಿಡಿಕಾರಿದ್ದರು ಎಂದು ತಿಳಿದು ಬಂದಿದೆ.
ಹಿಂದಿನ ಸುದ್ದಿ : PDO ನೇಮಕಾತಿಯಲ್ಲಿ ಅಕ್ರಮ ಆರೋಪ; ಪ್ರಶ್ನೆಪತ್ರಿಕೆ ಸೀಲ್ ಓಪನ್ ಆಗಿರುವ ಫೋಟೋ ವೈರಲ್.!
ಜನಸ್ಪಂದನ ನ್ಯೂಸ್, ಧಾರವಾಡ : ಡಿಸೆಂಬರ್ 8ರಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ (Panchayat Development Officer) ನೇಮಕಾತಿ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಆರೋಪ ಕೇಳಿ ಬಂದಿದೆ.
ಅಂತೆಯೇ ಧಾರವಾಡದಲ್ಲಿ (Dharwad) ಪ್ರಶ್ನೆ ಪತ್ರಿಕೆಗಳ ಮೇಲಿನ ಸೀಲ್ ಓಪನ್ ಮಾಡಲಾಗಿದೆ (seal on the question papers has been opened) ಎಂಬ ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧಿಸಿದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ಇದನ್ನು ಓದಿ : Health : ಆಮ್ಲೆಟ್ ಅಥವಾ ಬೇಯಿಸಿದ ಮೊಟ್ಟೆ : ಇವೆರಡರಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ.?
ಡಿಸೆಂಬರ್ 8ರಂದು ಪಿಡಿಒ ನೇಮಕಾತಿಗೆ ಸಂಬಂಧಿಸಿ ನಡೆದಿತ್ತು. ಹೀಗಾಗಿ ತಪ್ಪಿತಸ್ಥರನ್ನು (guilty) ಶಿಕ್ಷಿಸಿ ಮರುಪರೀಕ್ಷೆಗೆ ಆದೇಶ ನೀಡಬೇಕೆಂಬ ಆಗ್ರಹವೂ ಕೇಳಿಬಂದಿದೆ.
ಸಾಮಾನ್ಯವಾಗಿ ಪಿಡಿಒ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು (PDO Recruitment Exam Question Papers) ಮೂರು ಹಂತದ ಸೀಲ್ ಭದ್ರತೆಯನ್ನು (Three -level seal security) ಹೊಂದಿರುತ್ತವೆ. ಪರೀಕ್ಷಾ ಕೇಂದ್ರದ ಪ್ರಶ್ನೆ ಪತ್ರಿಕೆಗಳ ಬಂಡಲ್‌ಗೆ ಸಮಗ್ರವಾಗಿ (Comprehensive) ಪ್ಲಾಸ್ಟಿಕ್ ಕವರ್ನ ಸೀಲ್ ಹಾಕಿರಲಾಗುತ್ತದೆ.
ಬಳಿಕ ಆಯಾ ಪರೀಕ್ಷಾ ಕೊಠಡಿಯ (exam hall) ಪ್ರಶ್ನೆ ಪತ್ರಿಕೆಗಳಿಗೆ ಕಾಗದದ ಕವರ್ನ ಜೊತೆಗೆ ಸೀಲ್ ಹಾಕಿರುತ್ತಾರೆ. ಕೊನೆಗೆ ಪ್ರತಿಯೊಂದು ಪ್ರಶ್ನೆ ಪತ್ರಿಕೆಗೂ ಪ್ರತ್ಯೇಕ ಸೀಲ್ ಇರುತ್ತದೆ. ಆದರೆ, ಪ್ರಶ್ನೆ ಪತ್ರಿಕೆಯ ಮೇಲಿನ ಸೀಲ್ ಓಪನ್ ಮಾಡಿ ಮತ್ತೆ ಅಂಟಿಸಿದ್ದಾರೆಂದು (gum) ಅಭ್ಯರ್ಥಿಗಳು ಆರೋಪಿಸಿದ್ದಾರೆ.
ಇದನ್ನು ಓದಿ : ಸ್ಮಾರ್ಟ್‌ಫೋನ್‌ಲ್ಲಿ ಇರುವ aeroplane ಮೋಡ್’ನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.?
ಕೆಪಿಎಸ್‌ಸಿ ಸರಿಯಾಗಿ ಪರೀಕ್ಷೆ ನಡೆಸಿಲ್ಲವೆಂದು ಅಭ್ಯರ್ಥಿಗಳು ಆರೋಪ ಮಾಡಿದ್ದು, ಮರು ಪರೀಕ್ಷೆ (Re- examination) ನಡೆಸುವಂತೆ ಆಗ್ರಹಿಸಿದ್ದಾರೆ.
ಇನ್ನೂ ಅಕ್ರಮದಲ್ಲಿ ಭಾಗಿಯಾದ ಆರೋಪಿಗಳನ್ನು ಜೈಲಿಗಟ್ಟಿ, ಮರು ಪರೀಕ್ಷೆ ನಡೆಸುವಂತೆ KPSC ಗೆ ಆದೇಶಿಸಬೇಕೆಂದು ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ (ರಿ) ವಿದ್ಯಾರ್ಥಿ ಘಟಕದ ಕಾಂತಕುಮಾರ್ ಆರ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಆಗ್ರಹಿಸಿದ್ದಾರೆ.
X ಸಂದೇಶದ ಮೂಲಕ ಪ್ರಶ್ನೆ ಪತ್ರಿಕೆ ಸೀಲ್ ಓಪನ್ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಚಿತ್ರವನ್ನೂ ಅವರು ಪೋಸ್ಟ್ ಮಾಡಿದ್ದಾರೆ