ಜನಸ್ಪಂದನ ನ್ಯೂಸ್, ಮಂಗಳೂರು : ರಾತ್ರಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ನಡೆದಿದೆ.
ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿತವಾಗಿದೆ. ಈ ವೇಳೆ ಮನೆಯೊಳಗಿದ್ದ ಯಾಸಿರ್ (45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.
ಇದನ್ನು ಓದಿ : ಬೃಹತ್ ಗಾಳಿಪಟದೊಂದಿಗೆ ಆಕಾಶಕ್ಕೆ ಹಾರಿದ 3 ವರ್ಷದ ಮಗು ; ಬೆಚ್ಚಿಬೀಳಿಸುವ ವಿಡಿಯೋ ವೈರಲ್.!
ನಿನ್ನೆ ರಾತ್ರಿ ಯಾಸೀರ್ ಕುಟುಂಬ ಊಟ ಮಾಡಿ ನಿದ್ರೆಗೆ ಜಾರಿತ್ತು. ಬೆಳಗ್ಗೆ ಎಳುವಷ್ಟರಲ್ಲಿ ಕುಟುಂಬ ಜೀವಂತ ಸಮಾಧಿ ಆಗಿದೆ. ಸದ್ಯ ಮೂವರ ಮೃತದೇಹವನ್ನು ಸ್ಥಳೀಯರು, ಅಧಿಕಾರಿಗಳು ಹೊರತೆಗೆದಿದ್ದಾರೆ. ಮತ್ತೊಬ್ಬ ಬಾಲಕಿ ಮೃತದೇಹಕ್ಕಾಗಿ ಕಾರ್ಯಾಚರಣೆ ನಡೆಯುತ್ತಿದೆ.
ರಾತ್ರಿ ಸುರಿದ ಭಾರೀ ಮಳೆಗೆ ದುರಂತ ಸಂಭವಿಸಿದ್ದು, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನು ಓದಿ : ಭೂಮಿ ಅಗೆಯುವಾಗ ಸಿಕ್ತು ಚಿನ್ನದ ನಿಧಿ : ಕಾವಲಿತ್ತು ನಾಗರಹಾವು ; ವಿಡಿಯೋ ನೋಡಿ.!
ಈ ಕುಟುಂಬದ ಇನ್ನೊಬ್ಬ ಹೆಣ್ಣು ಮಗಳು ಕೇರಳದಲ್ಲಿದ್ದಾರೆ, ಮೃತರ ಪೋಸ್ಟ್ ಮಾರ್ಟಮ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇಂದು ಮುಂಜಾನೆ ವೇಳೆ ಮಳೆಗೆ ಗೋಡೆ ನೆನೆದು ಕಸಿದು ಬಿದ್ದಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಆಗುತ್ತಿದೆ. ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.