Wednesday, November 6, 2024
spot_img
spot_img
spot_img
spot_img
spot_img
spot_img

ತಿರುಪತಿಗೆ ತೆರಳುತ್ತಿದ್ದ ಎರ್ಟಿಗಾ ಕಾರು​ ಪಲ್ಟಿ ; ನಾಲ್ವರ ಸಾವು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಹಾವೇರಿ : ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಹಾವೇರಿಯಿಂದ ತಿರುಪತಿಗೆ ತೆರಳುತ್ತಿದ್ದ ಎರ್ಟಿಗಾ ಕಾರು​ ಪಲ್ಟಿಯಾಗಿ ಸರ್ವಿಸ್​​ ರೋಡ್‌ಗೆ​ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಹಲಗೇರಿ ಸೇತುವೆ ಬಳಿ ಶುಕ್ರವಾರ ನಡೆದಿದೆ.

ರಾತ್ರಿ 12:30ರ ಸುಮಾರಿಗೆ ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಕೆನರಾ ಬ್ಯಾಂಕ್ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲದೆ ಡೈರೆಕ್ಟ್‌ link.!

ಚಾಲಕನ ನಿಯಂತ್ರಣ ತಪ್ಪಿದ ಕಾರು ರಾಷ್ಟ್ರೀಯ ಹೆದ್ದಾರಿ 4 ಪಿಬಿ ರಸ್ತೆಯಿಂದ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದು ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮೃತ ಮೃತ ದುರ್ದೈವಿಗಳನ್ನು ಹಾವೇರಿಯ ಅಶ್ವಿನಿ ನಗರದ ಸುರೇಶ್(45), ಐಶ್ವರ್ಯ(22), ಚೇತನಾ(7), ಪ್ರಮಿಳಾ(28) ಎಂದು ಗುರುತಿಸಲಾಗಿದೆ. ಇಲ್ಲಿ ಸುರೇಶ್​, ಐಶ್ವರ್ಯ, ಚೇತನಾ ಸ್ಥಳದಲ್ಲೇ ಮೃತಪಟ್ಟರೆ, ಪ್ರಮೀಳಾ (28) ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

Health : ಸ್ಕೀಪಿಂಗ್ ಮಾಡುವುದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ.?

ಇನ್ನು ಈ ಅಪಘಾತದಲ್ಲಿ ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಸ ಬಾರ್ಕಿ, ಪ್ರಭುರಾಜ್ ಸಮಗಂಡಿ, ಗೀತಾ ಭಾರ್ಕಿ, ಹೊನ್ನಪ್ಪ ಬಾರ್ಕಿ ಎಂಬವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಹಾವೇರಿ ಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಣೆಬೆನ್ನೂರು ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img