Sunday, September 15, 2024
spot_img
spot_img
spot_img
spot_img
spot_img
spot_img
spot_img

ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ನಕಲಿ ಬೆಳ್ಳುಳ್ಳಿ ; ವಿಡಿಯೋ Viral.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಸಿಮೆಂಟ್‌ನಿಂದ ತಯಾರಿಸಿದ ನಕಲಿ ಬೆಳ್ಳುಳ್ಳಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಬಹಳ ಸದ್ದು ಮಾಡುತ್ತಿದೆ.

ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : BSNL : 229 ರೂ. ರೀಚಾರ್ಜ್​ ಪ್ಲಾನ್​ಗೆ ಭಾರೀ ಡಿಮ್ಯಾಂಡ್; ದಿನಕ್ಕೆ 2GB ಡೇಟಾ ಸೇರಿ ಹಲವು ಬೆನಿಫಿಟ್ಸ್.!

ಅಡುಗೆ ಮನೆಯ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುವುದರೊಂದಿಗೆ, ಕೆಲವು ಮಾರಾಟಗಾರರು ಪರಿಸ್ಥಿತಿಯ ಲಾಭವನ್ನು ಪಡೆಯಲು ಮುಂದಾಗಿದ್ದು, ಗ್ರಾಹಕರಿಗೆ ಕೊಂಚವೂ ಅನುಮಾನವೇ ಬರದಂತೆ‌ ಸಿಮೆಂಟ್‌ ಬೆಳ್ಳುಳ್ಳಿಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ.

ಅಕೋಲಾದ ಬಜೋರಿಯಾ ನಗರದಲ್ಲಿ ನೆಲೆಸಿರುವ ನಿವೃತ್ತ ಪೊಲೀಸ್ ಅಧಿಕಾರಿ ಸುಭಾಷ್ ಪಾಟೀಲ್ ಅವರ ಪತ್ನಿ ಕೃತಕ ಬೆಳ್ಳುಳ್ಳಿ ಮಾರಾಟ ಮಾಡುವ ಬೀದಿ ಬದಿ ವ್ಯಾಪಾರಿಯಿಂದ ವಂಚನೆಗೊಳಗಾಗಿದ್ದು, ಅವರು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇನ್ನು​ ಬೆಳ್ಳುಳ್ಳಿಯನ್ನು ಬೇರ್ಪಡಿಸಲು ಪ್ರಯತ್ನಿಸಿದಾಗ ಇದು ಅಸಲಿ ಬೆಳ್ಳುಳ್ಳಿಯಲ್ಲ, ನಕಲಿ ಎಂದು ಬಯಲಾಗಿದೆ. ಚಾಕುವಿನಿಂದ ಕತ್ತರಿಸಿದಾಗ ಅದು ಸಿಮೆಂಟ್​ನಿಂದ ಮಾಡಿದ ಬೆಳ್ಳುಳ್ಳಿ ಎಂದು ಬೆಳಕಿಗೆ ಬಂದಿದೆ.

ಅಕೋಲಾ ನಗರದ ಹೆಚ್ಚಿನ ಭಾಗಗಳಲ್ಲಿ, ಈ ವ್ಯಾಪಾರಿಗಳು ಪ್ರತಿದಿನ ತರಕಾರಿಗಳನ್ನು ಮಾರಾಟ ಮಾಡಲು ಬರುತ್ತಾರೆ, ಅವರಲ್ಲಿ ಕೆಲವರು ನಕಲಿ ಬೆಳ್ಳುಳ್ಳಿಯನ್ನು ಮಾರಾಟ ಮಾಡುತ್ತಿರಬಹಿದು ಎಂಬ ಅನುಮಾನ ವ್ಯಕ್ತವಾಗಿದೆ.

ಇದನ್ನು ಓದಿ : 10ನೇ ತರಗತಿ ಪಾಸಾದವರಿಗೆ ಯಾವುದೇ ಪರೀಕ್ಷೆ ಇಲ್ಲದೇ Railway ಇಲಾಖೆಯಲ್ಲಿ ಉದ್ಯೋಗಾವಕಾಶ.!

ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲೇ ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ನಕಲಿ ಮೊಟ್ಟೆ, ನಕಲಿ ಅಕ್ಕಿಗಳ ಮಾರಾಟ ಹೆಚ್ಚಾಗಿದೆ. ಆದರೆ ಇದರ ಗರಿಷ್ಠ ಬಳಕೆ ಕರ್ನಾಟಕದಲ್ಲಿ ಆಗುತ್ತಿದೆ. ವರದಿಯ ಪ್ರಕಾರ ಬೆಂಗಳೂರಿನಲ್ಲಿ ದಿನಕ್ಕೆ 75 ಲಕ್ಷ ಮೊಟ್ಟೆಗಳಿಗೆ ಬೇಡಿಕೆ ಇದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮೊಟ್ಟೆ ಬೇಡಿಕೆಯಿಂದ ನಕಲಿ ಮೊಟ್ಟೆಗಳ ವ್ಯಾಪಾರ ಹೆಚ್ಚುತ್ತಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img