Saturday, July 13, 2024
spot_img
spot_img
spot_img
spot_img
spot_img
spot_img

ಕ್ರೋಧಿ ನಾಮ ಸಂವತ್ಸರದ ಭವಿಷ್ಯ : ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವು ; ಕೋಡಿಮಠ ಶ್ರೀ.

spot_img

ಜನಸ್ಪಂದನ ನ್ಯೂಸ್, ಧಾರವಾಡ : ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೆ ಸ್ಪೋಟಕವಾದಂತಹ ಭವಿಷ್ಯ ನುಡಿದಿದ್ದು, ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವು ಆಗುತ್ತದೆ ಎಂದು ಕ್ರೋಧಿ ನಾಮ ಸಂವತ್ಸರದ ಭವಿಷ್ಯ ನುಡಿದಿದ್ದಾರೆ.

ಧಾರವಾಡದಲ್ಲಿ ಸ್ಪೋಟಕವಾದ ಭವಿಷ್ಯ ನುಡಿದ ಅವರು, ಈ ಸಂವತ್ಸರದಲ್ಲಿ ಒಳಿತಿಗಿಂತ ಕೆಡಕು ಹೆಚ್ಚು ಎನ್ನಬಹುದು. ಭೂಮಿ, ಅಗ್ನಿ, ಆಕಾಶ, ವಾಯು, ಜಲ ಐದರಿಂದಲೂ ತೊಂದರೆ ಇದೆ.

ಇದನ್ನು ಓದಿ : ಬೃಹತ್‌ ಗಾಳಿಪಟದೊಂದಿಗೆ ಆಕಾಶಕ್ಕೆ ಹಾರಿದ 3 ವರ್ಷದ ಮಗು ; ಬೆಚ್ಚಿಬೀಳಿಸುವ ವಿಡಿಯೋ‌ ವೈರಲ್.!

ಭೂ ಕುಸಿತ, ಜಲಪ್ರಳಯ ಲಕ್ಷಣ ಇದೆ. ಗಾಳಿಯಿಂದಲೂ ತೊಂದರೆ ಆಗಲಿದೆ. ಆಕಾಶ ತತ್ವ ಆಗಲಿದೆ. ಆ ಆಕಾಶ ತತ್ವ ಏನು ಅನ್ನೋದನ್ನು ಶ್ರಾವಣದಲ್ಲಿ ಹೇಳುವೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಇನ್ನು ಇದೇ ವೇಳೆ ರಾಜಕೀಯ ಬಗ್ಗೆ ಮಾತನಾಡಿರುವ ಕೋಡಿಶ್ರೀ, ರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ಕೂಡಿದ್ದಾರೆ, ಇನ್ನೂ ಅಂಗಡಿ ಓಪನ್ ಆಗಿಲ್ಲ. ವ್ಯಾಪಾರ ಶುರುವಾಗಲಿ. ಆ ಬಳಿಕ ರಾಷ್ಟ್ರ ರಾಜಕಾರಣದ ಭವಿಷ್ಯ ಹೇಳುವೆ.

ಇದನ್ನು ಓದಿ : ಕೇಂದ್ರ ಕಾರ್ಮಿಕ & ಔದ್ಯೋಗಿಕ ಇಲಾಖೆಯ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವು ಆಗಲಿದೆ. ದೊಡ್ಡ ದೊಡ್ಡವರಿಗೆ ನೋವು ತಾಪ ದುಃಖ ಆಗಲಿದೆ ಎಂದು ಆಘಾತಕಾರಿ ಭವಿಷ್ಯವಾಣಿ ನುಡಿದರು.

spot_img
spot_img
- Advertisment -spot_img