ಜನಸ್ಪಂದನ ನ್ಯೂಸ್, ಉಡುಪಿ : ಉಡುಪಿ ಜಿಲ್ಲೆಯ ಪಡುಬಿದ್ರೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಾಟ್ಸಾಪ್ ಗ್ರೂಪ್ ಗಳಲ್ಲಿ ತಂದೆಯೇ ತನ್ನ ಮಗಳ ಖಾಸಗಿ ವೀಡಿಯೋಗಳನ್ನು ಹರಿಬಿಟ್ಟ ಘಟನೆ ನಡೆದಿದೆ.
ಸದ್ಯ ಆರೋಪಿ ಆಸೀಫ್ ಯಾನೆ ಎಂಬಾತನ ವಿರುದ್ಧ ಆತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.
ಇದನ್ನು ಓದಿ : ಕೋರ್ಟ್ ಆವರಣದಲ್ಲೇ ವ್ಯಕ್ತಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ ; ಕಾರಣ ಇಷ್ಟೇ, Video ನೋಡಿ.!
ತಂದೆಯ ಹೀನ ಕೃತ್ಯಕ್ಕೆ ಮನನೊಂದು ಮಗಳು ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಂಚಿನಡ್ಕದ ನಿವಾಸಿ ಆರೋಪಿ ಆಸೀಫ್‌ನ ಮಗಳು ಹಾಗೂ ತೀರ್ಥ ಹಳ್ಳಿಯ ಅವರ ಸಂಬಂಧಿ ತೌಸೀಫ್ ಲವ್ ಮಾಡುತ್ತಿದ್ದು, ಇದು ಆಸೀಫ್ ಗೆ ಇಷ್ಟವಿರಲಿಲ್ಲ. ಹೀಗಾಗಿ ಆರೋಪಿಯು ತೌಸೀಫ್‌ನನ್ನು ಮನೆಗೆ ಕರೆಸಿ ಆತನ ಮೇಲೆ ಹಲ್ಲೆ ಮಾಡಿದ್ದಾನೆ.
ಅಲ್ಲದೇ ಯುವಕ ಹಾಗೂ ತನ್ನ ಮಗಳ ಫೋನ್‌ಗಳನ್ನು ಕಸಿದುಕೊಂಡು ಅದರಲ್ಲಿದ್ದ ವಿಡಿಯೋಗಳನ್ನು ತನ್ನ ಫೋನ್‌ಗೆ ವರ್ಗಾಯಿಸಿಕೊಂಡು ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಿವಿಧ ವಾಟ್ಸಾಪ್ ಗಳಲ್ಲಿ ಕಳುಹಿಸಿದ್ದಾನೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : ಈ ಗಿಡದಲ್ಲಿ ಸಂಗ್ರಹವಾದ ನೀರು Kidney stone ಗೆ ರಾಮಬಾಣ ; ಕುಡಿದ ತಕ್ಷಣ ಮೂತ್ರದ ಮೂಲಕ ಹೊರಬರುತ್ತೆ ಕಲ್ಲು.!
ಇದಕ್ಕೆ ಪತ್ನಿ ಆಕ್ಷೇಪಿಸಿದ್ದು, ಆಕೆ ಹಾಗೂ ಪುತ್ರಿ ಮೇಲೆ ಹಲ್ಲೆಯನ್ನೂ ಮಾಡಿದ್ದಾನೆ. ಬಳಿಕ ಪತ್ನಿಯು ಉಚ್ಚಿಲದ ತನ್ನ ತಾಯಿ ಮನೆಯಲ್ಲಿದ್ದಾಗ ಅಲ್ಲಿಗೂ ಹೋಗಿ ಗಲಾಟೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತಾಗಿ ಪತ್ನಿಯು ಉಡುಪಿ ಸೆನ್ ಠಾಣೆಗೆ ದೂರು ನೀಡಿದ್ದಾರೆ.