Thursday, April 25, 2024
spot_img
spot_img
spot_img
spot_img
spot_img
spot_img

Lady Police : ಕ್ವಾಟ್ರಸ್‌ನಲ್ಲಿಯೇ ಮಹಿಳಾ ಪೊಲೀಸ್ ಸಿಬ್ಬಂದಿ ಆ*ತ್ಮ*ಹ*ತ್ಯೆ.!

spot_img

ಜನಸ್ಪಂದನ ನ್ಯೂಸ್, ಉಡುಪಿ : ಉಡುಪಿ ಜಿಲ್ಲೆಯ ಕಾಪು (Kapu) ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೋರ್ವರು ಕ್ವಾಟ್ರಸ್‌ನಲ್ಲಿಯೇ ನೇಣಿಗೆ ಶರಣಾದ ಘಟನೆ ಶನಿವಾರ ನಡೆದಿದೆ.

ಆತ್ಮಹತ್ಯೆಗೆ (suicide) ಶರಣಾದ ಮಹಿಳಾ ಪೊಲೀಸ್ ಸಿಬ್ಬಂದಿ ಜ್ಯೋತಿ (29) ಎಂದು ತಿಳಿದು ಬಂದಿದೆ.

ಇದನ್ನೂ ಓದಿJob alert : ಕೇಂದ್ರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ.!  

ಎಂದಿನಂತೆ ಕರ್ತವ್ಯ ನಿರ್ವಹಿಸಿ ಕ್ವಾಟ್ರಸ್‌ಗೆ ವಾಪಸ್ಸಾಗಿದ್ದ ಅವರು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ (Hanging) ತಿಳಿದು ಬಂದಿದೆ.

ಮೃತ ಪೊಲೀಸ್ ಸಿಬ್ಬಂದಿಯ ಪತಿ KSRTC ಸಿಬ್ಬಂದಿಯಾಗಿದ್ದು, ಅವರು ಬೆಳಿಗ್ಗೆ ಕರ್ತವ್ಯಕ್ಕೆ ಹೋಗುತ್ತಿದ್ದ ವೇಳೆ ಪತ್ನಿ ಜ್ಯೋತಿ ನೇಣಿಗೆ ಕೊರಳೊಡ್ಡಿರುವುದನ್ನು ಗಮನಿಸಿದ್ದಾರೆ.

ಇದನ್ನೂ ಓದಿHealth : ಬೇಸಿಗೆಯಲ್ಲಿ ಕಬ್ಬಿನ ರಸ ಕುಡಿಯುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.!  

ತಕ್ಷಣ ಪಕ್ಕದಲ್ಲಿರುವ ಪೊಲೀಸ್ ಠಾಣೆಗೆ (police station) ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ಅವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ (inspection) ನಡೆಸಿದ್ದಾರೆ.

 ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

spot_img
spot_img
spot_img
- Advertisment -spot_img