ಜನಸ್ಪಂದನ ನ್ಯೂಸ್, ಹಾಸನ : ಹಾಸನದ ಶಕ್ತಿ ದೇವತೆ ಹಾಸನಾಂಬೆಯು ವರ್ಷಕ್ಕೊಮ್ಮೆ ತನ್ನ ಭಕ್ತರಿಗೆ ದರ್ಶನ ನೀಡುವಳು. ಆದರೆ ಈ ದೇವಿಯ ದೇವಸ್ಥಾನದಲ್ಲಿ ಕಂದಾಯ ಇಲಾಖೆ ಸಿಬ್ಬಂದಿಯ ನಡುವೆ ಗುರುವಾರ ಮಾರಾಮಾರಿ ನಡೆದಿದೆ.
ಇದನ್ನು ಓದಿ : ಆಧಾರ್ ಕಾರ್ಡ್ ಜನ್ಮ ದಿನಾಂಕದ ಅಧಿಕೃತ ಪುರಾವೆಯಲ್ಲ; Supreme Court ನಿಂದ ಮಹತ್ವದ ತೀರ್ಪು.!
ಹಾಸನಾಂಬೆ ದೇವಾಲಯದ ಎಕ್ಸಿಟ್ ಗೇಟ್ ಸಮೀಪ ಈ ಘಟನೆ ನಡೆದಿದ್ದು, ಸಿಬ್ಬಂದಿಗಳಿಬ್ಬರು ಕೈಕೈ ಮಿಲಾಯಿಸಿದ್ದಾರೆ. ಇನ್ನೂ ಸಿಬ್ಬಂದಿಯ ಜಗಳ ಬಿಡಿಸಲು ಪೊಲೀಸರು ಹರಸಾಹಸಪಟ್ಟರು ಎಂದು ತಿಳಿದು ಬಂದಿದೆ.
ಇದನ್ನು ಓದಿ : ನನ್ನ ಜತೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ; ಕಿಡಿಗೇಡಿಯಿಂದ ಯುವತಿಗೆ ವಾಟ್ಸಪ್ ಮೆಸೇಜ್.!
ಎರಡು ದಿನಗಳ ಹಿಂದಷ್ಟೇ ಹಾಸನ ನಗರಸಭೆ ಎದುರಿನ ಮುಖ್ಯದ್ವಾರದ ಬಳಿ ಹಾಸನಾಂಬ ದರ್ಶನ ವಿಚಾರವಾಗಿ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಡಿಸಿ ಕಚೇರಿ ಸಿಬ್ಬಂದಿ ಕೈ ಕೈ ಮಿಲಾಯಿಸಿದ್ದರು. ಜಗಳ ಬಿಡಿಸಲು ಹರಸಾಹಸ ಪಡಬೇಕಾಯಿತು.