Wednesday, May 22, 2024
spot_img
spot_img
spot_img
spot_img
spot_img
spot_img

ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು video ಚಿತ್ರೀಕರಣ ; ಆರೋಪಿ ಅರೆಸ್ಟ್.!

spot_img

ಜನಸ್ಪಂದನ ನ್ಯೂಸ್, ದಕ್ಷಿಣ ಕನ್ನಡ : ಲೇಡಿಸ್ ಟಾಯ್ಲೆಟ್ ನಲ್ಲಿ ಮೊಬೈಲ್ ಪೋನ್ ಇಟ್ಟು ಚಿತ್ರೀಕರಣಕ್ಕೆ (For filming) ಪ್ರಯತ್ನಿಸಿದ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

ಮಂಗಳೂರಿನ ಲೈಟ್ ಹೌಸ್ ಹಿಲ್ ರೋಡ್ ಬಾವುಟಗುಡ್ಡೆಯಲ್ಲಿರುವ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ 1ನೇ ಮಹಡಿಯಲ್ಲಿರುವ ಲೇಡಿಸ್ ಟಾಯ್ಲೆಟ್ ನ (ladies toilet) ಎಕ್ಸಾಸ್ಟ್ ಫ್ಯಾನ್ ಬಳಿ ಮೊಬೈಲ್ ಪೋನ್ ಇಟ್ಟು ವಿಡಿಯೋ ರೆಕಾರ್ಡ್ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಇದನ್ನು ಓದಿ : ಪತಿಯ ಕೈ-ಕಾಲು ಕಟ್ಟಿ ಸಿಗರೇಟ್‌ನಿಂದ ಪತಿಯ ಖಾಸಗಿ ಅಂಗ ಸುಟ್ಟ ಪತ್ನಿ ; ದೃಶ್ಯ CCTVಯಲ್ಲಿ ಸೆರೆ.!

ಸದ್ಯ ಘಟನೆಗೆ ಸಂಬಂಧಿಸಿದಂತೆ 17 ವರ್ಷದ ಬಾಲಕನೊಬ್ಬನನ್ನು ವಶಕ್ಕೆ (custody) ಪಡೆದ ಪೊಲೀಸರು ವಿಚಾರಣೆ ನಡೆಸಿ ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಶೌಚಾಲಯದಲ್ಲಿ ಯಾರೂ ಇಲ್ಲದ ವೇಳೆ ಮೊಬೈಲ್ ರಿಂಗ್ ಆಗಿದ್ದು, ತಕ್ಷಣ ಭದ್ರತಾ ಸಿಬ್ಬಂದಿ ಶೌಚಾಲಯವನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೊಬೈಲ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಕೋಳಿಯೊಂದಿಗೆ ಯುವತಿಯ ಯುದ್ಧ ; ಸೋತವರ್ಯಾರು, ಗೆದ್ದವರ್ಯಾರು? ; Video ನೋಡಿ.!

ಬಾಲಕ ರೋಗಿಯ ಸೋಗಿನಲ್ಲಿ ವೈದ್ಯಕೀಯ ಕಾಲೇಜಿನ (medical college) ಒಳಗೆ ಬಂದು ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ. ಮೊಬೈಲನ್ನು ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಬಂದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img
spot_img
spot_img
- Advertisment -spot_img