ಜನಸ್ಪಂದನ ನ್ಯೂಸ್, ಡೆಸ್ಕ್ : ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿಗಾಗಿ ಸತ್ತಂತೆ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ (F.I.R) ದಾಖಲಾಗಿದೆ.
ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿದ ಹಿನ್ನಲೆಯಲ್ಲಿ ದೂರು ದಾಖಲಾಗಿದ್ದು, ನಟಿ ಕುರಿತು ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ನಟಿ ಪೂನಂ ಪಾಂಡೆ ಔಷಧಿ ಕಂಪನಿಗಳಿಗಾಗಿ ಹಣ ಪಡೆದು ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು.
Astrology : ಫೆ. 5 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ಗರ್ಭಕಂಠ ಕ್ಯಾನ್ಸರ್ ಕುರಿತಾಗಿ ಜಾಗೃತಿ ಮೂಡಿಸುವುದಕ್ಕಾಗಿ ತಾನು ಸತ್ತಿರುವುದಾಗಿ ಮ್ಯಾನೇಜರ್ ಮೂಲಕ ಸುದ್ದಿ ಮಾಡಿಸಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಆದರೆ, ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV) ಮಾತ್ರ ನಟಿಯ ಬೆಂಬಲಕ್ಕೆ ನಿಂತಿದ್ದಾರೆ.
ಬಾಲಿವುಡ್ ನಟಿ, ಗರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ವಾಮಮಾರ್ಗ ಹಿಡಿದಿದ್ದು, ಕಾಂಟ್ರವರ್ಸಿ ಕ್ವೀನ್ ಪೂನಂ ಪಾಂಡೆಯನ್ನು (Poonam Pandey) ಅರೆಸ್ಟ್ ಮಾಡಬೇಕು ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಾಯಿಗಳ ಗುಂಪಿನೊಂದಿಗೆ ಕಾಳಿಂಗ ಸರ್ಪದ ಏಕಾಂಗಿ ಹೋರಾಟ ; ವಿಡಿಯೋ ವೈರಲ್.!
ಸೋಷಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್ ಪೂನಂ ಪಾಂಡೆ’ (Boycott) ಟ್ರೆಂಡ್ ಶುರು ಮಾಡಿದ್ದಾರೆ. ಈ ಬೆನ್ನಲ್ಲೇ ಪೂನಂ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಶಾಸಕ ಸತ್ಯಜೀತ್ ತಾಂಬೆ ಮುಂಬೈ ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ.
ತಮ್ಮ ಪ್ರಚಾರಕ್ಕಾಗಿ ಇಂತಹ ಸ್ಟಂಟ್‌ಗಳನ್ನ ಮಾಡುವಂತವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಸಾವಿನ ಸುದ್ದಿಯಿಂದ ಗರ್ಭಕಂಠ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ ಮೂಡಿಸಲು ಸಾಧ್ಯವಿಲ್ಲ. ಇದು ಕ್ಯಾನ್ಸರ್ ಸಮಸ್ಯೆಯಿಂದ ಬುದುಕುಳಿದಿರುವವರನ್ನು ಗೇಲಿ ಮಾಡಿದಂತಾಗಿದೆ. ಇದರಿಂದ ಪೂನಂ ವಿರುದ್ಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ. (ಎಜೇನ್ಸಿಸ್)