Friday, October 4, 2024
spot_img
spot_img
spot_img
spot_img
spot_img
spot_img
spot_img

ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ : 11 ಜನರ ಸಾವು ; ವಿಡಿಯೋ ನೋಡಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದ ಪರಿಣಾಮ 6 ಜನರು ಸಾವನ್ನಪ್ಪಿದ್ದು, 60 ಜನರು ಗಾಯಗೊಂಡಿರುವ (injuries) ಘಟನೆ ಮಧ್ಯಪ್ರದೇಶದ (Madhya Pradesh) ಹರ್ದಾ ಜಿಲ್ಲೆಯ ಬೈರಾಗರ್ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಸ್ಫೋಟದ (blast) ತೀವ್ರತೆ ಎಷ್ಟಿತ್ತೆಂದರೆ, ನರ್ಮದಾಪುರಂ ಜಿಲ್ಲೆಯ ಪಕ್ಕದ ಸಿಯೋನಿ ಮಾಲ್ವಾ ಪ್ರದೇಶದಲ್ಲಿ ಭೂಮಿ ಕಂಪಿಸಿದೆ ಎಂದು ಜನ ಹೇಳಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ : ಹಾಕಿ ಸ್ಟಾರ್ ಆಟಗಾರನ ವಿರುದ್ಧ ಅತ್ಯಾಚಾರ ಆರೋಪ ; FIR ದಾಖಲು.!

ಬೆಂಕಿ ಅವಘಡ ಸಂಭವಿಸಿದ ಕೆಲವೇ ಹೊತ್ತಿನಲ್ಲಿ ಭಾರಿ ಸ್ಪೋಟದ ಸದ್ದು ಕೇಳಿದೆ. ಈ ವೇಳೆ ದೊಡ್ಡ ಬೆಂಕಿಯ ಜ್ವಾಲೆ ದೂರದವರೆಗೂ ವ್ಯಾಪಿಸಿರುವುದು ಕಂಡುಬಂದಿದೆ.

ಅಲ್ಲದೆ ಬೆಂಕಿಯ ಕೆನ್ನಾಲಿಗೆ ಆಕಾಶದೆತ್ತರಕ್ಕೆ ಚಿಮ್ಮಿದ್ದು, ದಟ್ಟ ಹೊಗೆ (smoke) ಸುತ್ತಮುತ್ತಲ ಪ್ರದೇಶವನ್ನು ಆವರಿಸಿಕೊಂಡಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇನ್ನು ಕಲೆಕ್ಟರ್ ನರೇಂದ್ರ ಕುಮಾರ್ ಸೂರ್ಯವಂಶಿ ಅವರ ಸೂಚನೆಯ ಮೇರೆಗೆ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (Chief Medical and Health Officer) ಡಾ. ರವಿಕಾಂತ್ ಉಯ್ಕೆ ಅವರು ನಾಲ್ಕು 108 ಆಂಬ್ಯುಲೆನ್ಸ್‌, ಇಬ್ಬರು ವೈದ್ಯರು ಮತ್ತು ಇತರ ಸಿಬ್ಬಂದಿಯನ್ನು ಒಳಗೊಂಡ ವೈದ್ಯಕೀಯ ತಂಡವನ್ನು ಹರ್ದಾಗೆ ಕಳುಹಿಸಿದ್ದಾರೆ.

ಜಿಲ್ಲಾಧಿಕಾರಿ ರಿಷಿ ಗರ್ಗ್ ಘಟನೆಯ ಬಗ್ಗೆ ತಿಳಿಸಿದ್ದು, ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿಯನ್ನು ಹತೋಟಿಗೆ ತರುವ ಕಾರ್ಯ ನಡೆಯುತ್ತಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ನಾವು ರಾಷ್ಟ್ರೀಯ ವಿಪತ್ತು (disaster) ನಿರ್ವಹಣಾ ಪಡೆಯನ್ನೂ ಕರೆಸಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ : ಸಿಎಂ ಸಿದ್ಧರಾಮಯ್ಯ ಸೇರಿ ನಾಲ್ವರು ಕಾಂಗ್ರೆಸ್ ನಾಯಕರಿಗೆ ದಂಡ ವಿಧಿಸಿದ ಹೈಕೋರ್ಟ್.!

ಘಟನೆಯ ಬಗ್ಗೆ ವಿವರಗಳನ್ನು ಕೇಳಿದ್ದು ಅಲ್ಲದೆ ಘಟನಾ ಸ್ಥಳಕ್ಕೆ ಬೇಕಾದ ತುರ್ತು ಸೇವೆಗಳನ್ನು ಸಜ್ಜುಗೊಳಿಸಲು ಸೂಚನೆ ನೀಡಲಾಗಿದೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಆದೇಶಿಸಲಾಗಿದೆ (order) ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img