Saturday, July 27, 2024
spot_img
spot_img
spot_img
spot_img
spot_img
spot_img

ಜಲಪಾತದಲ್ಲಿ ಹಠಾತ್‌ ಪ್ರವಾಹ : ದಿಕ್ಕುಪಾಲಾಗಿ ಓಡಿದ ಜನ ; Video Viral.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಕಳೆದೊಂದು ವಾರದಿಂದ ತಮಿಳುನಾಡು ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ಹಿನ್ನೆಲೆ ನದಿಗಳಲ್ಲಿ ನೀರಿನ ಹರಿವು (Water flow) ಹೆಚ್ಚಾಗಿದೆ. ಜಲಪಾತಗಳಲ್ಲಿಯೂ ನೀರು ಇದ್ದಕ್ಕಿದ್ದಂತೆ ಹೆಚ್ಚಾಗುತ್ತಿದೆ.

ಈ ಕುರಿತಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗ್ತಿದೆ.

ಇದನ್ನು ಓದಿ : ಮದುವೆ ಮಂಟಪದಲ್ಲೇ WWE ; ಯುವಕನಿಗೋಸ್ಕರ ಇಬ್ಬರು ಯುವತಿಯರ ನಡುವೆ ಮಾರಾಮಾರಿ ; ವಿಡಿಯೋ ವೈರಲ್.!

ಶುಕ್ರವಾರ ಮಧ್ಯಾಹ್ನ ಸುಮಾರು 2.30ರ ವೇಳೆಗೆ ಪ್ರವಾಸಿಗರ ಗುಂಪು (group of tourists) ಹಳೆಯ ಕುರ್ಟಾಲಂ ಜಲಪಾತದ ಕೆಳ ಭಾಗದಲ್ಲಿ ಪ್ರವಾಸಿಗರು ಸ್ನಾನ ಮಾಡುತ್ತಿದ್ದರು.

ಪಶ್ಚಿಮಘಟ್ಟಗಳಲ್ಲಿ ಮಳೆಯಾಗುತ್ತಿರುವ ಕಾರಣ ಕುರ್ಟಾಲಂ ಜಲಪಾತದಲ್ಲಿ ನೀರು ಹೆಚ್ಚಾಗಿದೆ. ಕೂಡಲೇ ಪ್ರವಾಸಿಗರು ಜೋರಾಗಿ ಕಿರುಚುತ್ತಾ (screaming) ಹೊರಗೆ ಓಡಿ ಬಂದಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು, ಸ್ಥಳೀಯರು ಜನರನ್ನು ರಕ್ಷಣೆ ಮಾಡಿದ್ದಾರೆ. ಎಲ್ಲ ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ (to a safe place) ಕರೆತರಲಾಗಿದೆ.

ಆದರೆ ದುರಾದೃಷ್ಟವಶಾತ್ 11ನೇ ಕ್ಲಾಸ್ ವಿದ್ಯಾರ್ಥಿಯೋರ್ವ ಜಲಪಾತದಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದಾನೆ ಎಂದು ವರದಿಯಿಂದ ತಿಳಿದು ಬಂದಿದೆ.

ಇನ್ನೂ ನೀರು ಕಾರ್ ಪಾರ್ಕಿಂಗ್‌ವರೆಗೂ ಬಂದಿದೆ ಎಂದು ವರದಿಯಾಗಿದೆ.

ಇದನ್ನು ಓದಿ : ವಂದೇ ಭಾರತ್ Express ರೈಲಿನಡಿ ಸಿಲುಕಿದ ಹಸು ಬದುಕಿದ್ದಾದರೂ ಹೇಗೆ.?

ನೀರು ಹರಿದು ಬರುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದುಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಹವಾಮಾನದಲ್ಲಿ ಬದಲಾವಣೆಯಿಂದಾಗಿ (change in climate) ಜಲಪಾತಗಳಲ್ಲಿ ನೀರು ಹೆಚ್ಚಾಗುತ್ತಿದ್ದು, ಪ್ರವಾಸಿಗರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಮನ್ನಾರ್, ಕನ್ಯಾಕುಮಾರಿ, ಕೊಡೈಕೆನಾಲ್ ಅಂತಹ ತಾಣಗಳು ಪ್ರವಾಸಿಗರನ್ನು ಸೆಳೆಯುತ್ತಿವೆ.

spot_img
spot_img
- Advertisment -spot_img