Sunday, September 15, 2024
spot_img
spot_img
spot_img
spot_img
spot_img
spot_img
spot_img

ಬಂದಿದೆಯಂತೆ ಮಾಂಸ ತಿನ್ನುವ ಬ್ಯಾಕ್ಟೀರಿಯಾ ; 48 ಗಂಟೆಗಳ ಸಾವು ಖಚಿತ ಎನ್ನುತ್ತಾರೆ ತಜ್ಞರು!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಇದೀಗ ‘ಮಾಂಸ ತಿನ್ನುವ ಬ್ಯಾಕ್ಟೀರಿಯಾ’ ಎಂದ ಹೊಸದೊಂದು ಆತಂಕ ಸೃಷ್ಟಿಸಿದೆ. ಜಪಾನ್‌ನಲ್ಲಿ ಹರಡುತ್ತಿರುವ ಈ ಅಪರೂಪದ ಬ್ಯಾಕ್ಟೀರಿಯಾ, ಗಂಭೀರ ಕಾಯಿಲೆ ಉಂಟುಮಾಡುತ್ತಿದ್ದು, 48 ಗಂಟೆಗಳಲ್ಲಿ ಸಾವಿಗೆ ಕಾರಣವಾಗುವಷ್ಟು ಅಪಾಯಕಾರಿಯಾಗಿದೆ.

ಸದ್ಯ ವೈದ್ಯಕೀಯ ಲೋಕಕ್ಕೆ ಹೊಸ ಸವಾಲೊಡ್ಡಿದ್ದು, ಕೋವಿಡ್ ಸಮಯದ ನಿರ್ಬಂಧಗಳನ್ನು ಸಡಿಲಿಸಿದ ಬಳಿಕ ಜಪಾನ್‌ನಲ್ಲಿ ಇದು ಕಾಣಿಸಿಕೊಂಡಿದೆ ಎಂದು ಬ್ಲೂಮ್‌ಬರ್ಗ್ ವರದಿ ಹೇಳಿದೆ.

ಇದನ್ನು ಓದಿ : Health : ಈ ಜ್ಯೂಸ್ ಕುಡಿಯಿರಿ ಮೂತ್ರಪಿಂಡದಲ್ಲಿನ ಕಲ್ಲುಗಳನ್ನು ಹೊರಹಾಕುತ್ತದೆ.

ಜಪಾನ್‌ನಲ್ಲಿ ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ (ಎಸ್‌ಟಿಎಸ್‌ಎಸ್‌) ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ. ಜೂನ್ 2ರ ವೇಳೆಗೆ 977 ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಒಟ್ಟು 941 ಪ್ರಕರಣಗಳು ವರದಿಯಾಗಿದ್ದವು. ಈ ವರ್ಷದ ಅರ್ಧ ಭಾಗದಲ್ಲಿಯೇ ಅದನ್ನೂ ಮೀರಿದ ಪ್ರಕರಣಗಳು ಅಂದರೆ ಸುಮಾರು 2,500 ಪ್ರಕರಣಗಳು ದಾಖಲಾಗಿವೆ ಎಂದು ಸಾಂಕ್ರಾಮಿಕ ಕಾಯಿಲೆಗಳ ರಾಷ್ಟ್ರೀಯ ಸಂಸ್ಥೆ ವರದಿ ಹೇಳಿದೆ.

ಮಾಂಸ ತಿನ್ನುವ ಬ್ಯಾಕ್ಟೀರಿಯಾದ ಲಕ್ಷಣಗಳು?
ಈ ಕಾಯಿಲೆಯಲ್ಲಿ ಮರಣ ದರ ಶೇ 30ರಷ್ಟು ಇದ್ದು, ಅಪಾಯದ ಕರೆಗಂಟೆ ಬಾರಿಸಿದೆ. ಗ್ರೂಪ್ ಎ ಸ್ಟ್ರೆಪ್ಟೋಕೊಕ್ಕಸ್ (ಜಿಎಎಸ್), ಮಕ್ಕಳಲ್ಲಿ ಸ್ಟ್ರೆಪ್ ಥ್ರೋಟ್ ಎಂದು ಕರೆಯಲಾಗುವ ಲಘು ಕಾಯಿಲೆಯನ್ನು ಉಂಟುಮಾಡುತ್ತದೆ. ಇದರಲ್ಲಿ ಗಂಟಲು ನೋವು ಮತ್ತು ಊದುವಿಕೆ ಕಾಣಿಸಿಕೊಳ್ಳುತ್ತದೆ.

ಇದನ್ನು ಓದಿ : ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ 975 ಹುದ್ದೆಗಳಿಗೆ ನೇಮಕಾತಿ.!

ಆದರೆ ಕೆಲವು ಮಾದರಿಯ ಜಿಎಎಸ್‌ಗಳು ಅಂಗಾಂಗ ನೋವು, ಊತ, ಜ್ವರ ಹಾಗೂ ಕಡಿಮೆ ರಕ್ತದೊತ್ತಡದಂತಹ ಲಕ್ಷಣಗಳನ್ನು ತ್ವರಿತವಾಗಿ ಉಂಟುಮಾಡಬಹುದು. ಇದು ಜೀವಕೋಶಗಳ ಸಾವು, ಉಸಿರಾಟದ ತೊಂದರೆ, ಅಂಗಾಂಗ ವೈಫಲ್ಯ ಹಾಗೂ ಸಾವಿಗೆ ಕೂಡ ಕಾರಣವಾಗಬಹುದು. ವಯಸ್ಕರು, ಮುಖ್ಯವಾಗಿ 50 ವರ್ಷ ದಾಟಿದವರಿಗೆ ಈ ಕಾಯಿಲೆ ಹೆಚ್ಚು ಅಪಾಯಕಾರಿಯಾಗಿದೆ.

“ಹೆಚ್ಚಿನ ಸಾವುಗಳು 48 ಗಂಟೆಗಳ ಒಳಗೆ ಸಂಭವಿಸಿವೆ. ಪಾದದಿಂದ ಮೊಣಕಾಲಿನವರೆಗೆ ಊತವು ಕೆಲವೇ ಗಂಟೆಗಳಲ್ಲಿ ಹರಡುತ್ತದೆ. ಅದಾಗಿ 48 ಗಂಟೆಗಳಲ್ಲಿ ಸಾವು ಉಂಟಾಗಬಹುದು” ಎಂದು ಟೋಕಿಯೋ ಮಹಿಳಾ ವೈದ್ಯಕೀಯ ಕಾಲೇಜಿನ ಸಾಂಕ್ರಾಮಿಕ ಕಾಯಿಲೆ ವಿಭಾಗದ ಪ್ರೊಫೆಸರ್ ಕೆನ್ ಕಿಕುಚಿ ತಿಳಿಸಿದ್ದಾರೆ.

ಕೈಗಳನ್ನು ಸ್ವಚ್ಛವಾಗಿ ಇರಿಸಿಕೊಳ್ಳುವುದು ಬಹಳ ಮುಖ್ಯ. ಜತೆಗೆ ಯಾವುದೇ ತೆರೆದ ಗಾಯಗಳನ್ನು ಸೂಕ್ಷ್ಮವಾಗಿ ನಿಭಾಯಿಸಬೇಕು ಎಂದು ಕಿಕುಚಿ ಹೇಳಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img