ಜನಸ್ಪಂದನ ನ್ಯೂಸ್, ಬೆಂಗಳೂರು : ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (92) ಅವರು ಇಂದು (ಡಿ.26) ರಂದು ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದರು.
ಈ ಹಿನ್ನೆಲೆಯಲ್ಲಿ ನಾಳೆ ಕರ್ನಾಟಕ ರಾಜ್ಯಾದ್ಯಂತ ಸರ್ಕಾರಿ ರಜೆ (Holly day) ಘೋಷಣೆ ಮಾಡಲಾಗಿದೆ.
Read it : ಭಾರತೀಯ ರೈಲ್ವೆ ಇಲಾಖೆಯಲ್ಲಿ 50,000 ಕ್ಕೂ ಹೆಚ್ಚು ಗ್ರೂಪ್ ಡಿ ಹುದ್ದೆಗಳ ನೇಮಕಾತಿ.!
ನಾಳೆ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಡಾ. ಮನಮೋಹನ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ (Seven days of mourning have been announced in the state). ಜೊತೆಗೆ ನಾಳೆ (ಡಿ.27) ಸರ್ಕಾರಿ ರಜೆ ಘೋಷಿಸಲಾಗಿದೆ.
ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರಗಳ ಕಾಲ ರದ್ದು ಮಾಡುವುದಾಗಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.