Friday, October 18, 2024
spot_img
spot_img
spot_img
spot_img
spot_img
spot_img
spot_img

ಅಡ್ಡಗಟ್ಟಿದ ಪೊಲೀಸರ ಮೇಲೆಯೇ ಕಲ್ಲುತೂರಿ ಕಳ್ಳರ gang ಎಸ್ಕೇಪ್..!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಸಮೀಪ ಕಳ್ಳರನ್ನು ಹಿಡಿಯಲು ಹೋಗಿದ್ದ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.

ಏಕಾಏಕಿ ಕಳ್ಳರು ದಾಳಿ ಮಾಡಿದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಏರ್ ಫೈರಿಂಗ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : 3 ಅಡಿ ಕುಳ್ಳನಿಗೆ 7 ಅಡಿ ಎತ್ತರದ ಗರ್ಲ್‌ಫ್ರೆಂಡ್.! ಇವರ ಪ್ರಣಯದ ವಿಡಿಯೋ ಪುಲ್‌ Viral.!

ಪೊಲೀಸರ ಮೇಲೆ ಕಲ್ಲು ತೂರಿ ಆಂಧ್ರದ ಡೆಡ್ಲಿ ಕಳ್ಳರ ಗ್ಯಾಂಗ್‌ವೊಂದು ಎಸ್ಕೇಪ್‌ ಆಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಪೊಲೀಸ್‌ ಜೀಪ್ ಮೇಲೆ ಕಲ್ಲು ತೂರಿ ಕಳ್ಳರು ಎಸ್ಕೇಪ್ ಆಗಿದ್ದಾರೆ.

ಪೊಲೀಸರು ಏರ್ ಫೈರ್ ಮಾಡಿದರೂ ಜಗ್ಗದೆ ತಪ್ಪಿಸಿಕೊಂಡಿದ್ದಾರೆ. ಕಳ್ಳರು ಕಲ್ಲು ತೂರಿದ ಪರಿಣಾಮ ಪೊಲೀಸರ ಜೀಪಿನ ಗ್ಲಾಸ್ ಡ್ಯಾಮೇಜ್ ಆಗಿದೆ.

ಆಂಧ್ರಪ್ರದೇಶದ ರಿಜಿಸ್ಟ್ರೇಷನ್‌ ಹೊಂದಿದ್ದ ಬೊಲೆರೋ ವಾಹನದಲ್ಲಿ ಸುಮಾರು 7 ಮಂದಿ ಗ್ಯಾಂಗ್‌ ಬಂದಿದ್ದರು. ಇದನ್ನೂ ಗಮನಿಸಿದ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು, ತಡೆದು ಪರಿಶೀಲನೆಗೆ ಮುಂದಾಗಿದ್ದಾರೆ. ಈ ವೇಳೆ ಗಾಡಿ ನಿಲ್ಲಿಸದೇ ಖತರ್ನಾಕ್‌ ಕಳ್ಳರು, ಪೊಲೀಸರಿಗೆ ಕಲ್ಲು ತೂರಿದ್ದಾರೆ.

ಇದನ್ನು ಓದಿ : ಪೊಲೀಸ್​ ಠಾಣೆ ಆವರಣದಲ್ಲಿಯೇ ಮಗನಿಂದ ಬೆಂಕಿಗಾಹುತಿಯಾದ ಹೆತ್ತ ತಾಯಿ ; ದೃಶ್ಯ CCTVಯಲ್ಲಿ ಸೆರೆ.!

ದರೋಡೆಕೋರರು ಎಂಬ ಅನುಮಾನದಿಂದ ಪೊಲೀಸರು ಅಲರ್ಟ್ ಆಗಿದ್ದಾರೆ. ಬೊಸೇ ದೇವರಹಟ್ಟಿ, ಕೋಟೆ ನಗರ ಒಳ ಮಾರ್ಗದಲ್ಲಿ ಕುದಾಪುರ ಕಡೆ ಬರುತ್ತಿದ್ದ ಕಳ್ಳರಿಗೆ, ಪೊಲೀಸರು ಮನಮಯ್ಯನಹಟ್ಟಿ ಕುದಾಪುರ ಒಳ ಮಾರ್ಗದಲ್ಲಿ ಎದುರಾಗಿದ್ದರು.

ಇನ್ನೂ ನಾಯಕನಹಟ್ಟಿ ಠಾಣೆ ಪಿಎಸ್‌ಐ ಶಿವಕುಮಾರ್ ತಂಡ ಬೊಲೆರೋ ವಾಹನದಲ್ಲಿ ಬಂದಿದ್ದ ಕಳ್ಳರನ್ನು ಹಿಡಿಯಲು ಯತ್ನಿಸಿದ್ದಾರೆ. ಆದರೆ ಹಿರೇಹಳ್ಳಿ, ಬೇಡರೆಡ್ಡಿಹಳ್ಳಿ, ಬುಕ್ಕಂಬೂದಿ ಮಾರ್ಗದಲ್ಲಿ ಕಳ್ಳರು ಎಸ್ಕೇಪ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಹಳೆಯ ಹಾಡಿಗೆ 90 ವರ್ಷದ ಅಜ್ಜಿಯ ಮಸ್ತ್‌ ಮಸ್ತ್ ಸ್ಟೆಪ್ಸ್ ; ವಿಡಿಯೋ ನೋಡಿದ್ರೆ ವಾವ್ ಅನ್ನೋದು ಗ್ಯಾರಂಟಿ.!

ಸ್ಥಳಕ್ಕೆ ಚಿತ್ರದುರ್ಗ ಎಸ್‌ಪಿ ಧರ್ಮೇಂದರ್ ಕುಮಾರ್ ಮೀನಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ ನಡೆದ ಘಟನೆ ಕುರಿತು ಸ್ಥಳೀಯ ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ.

ಇನ್ನೂ ಪೊಲೀಸರ ಮೇಲೆ ಕಳ್ಳರ ದಾಳಿ ಸುದ್ದಿ ತಿಳಿದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ ‌

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img