Saturday, January 18, 2025
HomeNewsಗ್ಯಾಸ್ ಸಿಲಿಂಡರ್ ಕೇಸ್: ಚಿಕಿತ್ಸೆ ಫಲಿಸದೇ ಇಬ್ಬರು ಮಾಲಾಧಾರಿಗಳ ಸಾವು.!
spot_img

ಗ್ಯಾಸ್ ಸಿಲಿಂಡರ್ ಕೇಸ್: ಚಿಕಿತ್ಸೆ ಫಲಿಸದೇ ಇಬ್ಬರು ಮಾಲಾಧಾರಿಗಳ ಸಾವು.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಹುಬ್ಬಳ್ಳಿ : ಹುಬ್ಬಳ್ಳಿ ಸಾಯಿನಗರ (Hubli Sainagar) ಅಚ್ಚವ್ವನ ಕಾಲೋನಿಯ ಈಶ್ವರ ದೇವಸ್ಥಾನದಲ್ಲಿ ಗ್ಯಾಸ್‌ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿ ಗಂಭೀರವಾಗಿ ಸುಟ್ಟುಗೊಂಡಿದ್ದ (He was seriously burnt) ಇಬ್ಬರು ಮಾಲಾಧಾರಿಗಳು ಗುರುವಾರ (ಡಿ.26) ಚಿಕಿತ್ಸೆ ಫಲಿಸದೆ ಉಸಿರು ಚೆಲ್ಲಿದರು.

ಸಾವಿಗೀಡಾದ ‌ಮಾಲಾಧಾರಿಗಳು ನಿಜಲಿಂಗಪ್ಪ ಬೇಪುರಿ (58) ಹಾಗೂ ಸಂಜಯ ಸವದತ್ತಿ (18) ಎಂದು ತಿಳಿದು ಬಂದಿದೆ.

ಇದನ್ನು ಓದಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 9,871 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ Green signal.!

ಅಯ್ಯಪ್ಪಸ್ವಾಮಿ ವ್ರತಧಾರಿ‌ಗಳು ರವಿವಾರ ಪೂಜೆ ಸಲ್ಲಿಸಿ ರಾತ್ರಿ ನಿದ್ರೆ ಮಾಡುತ್ತಿದ್ದ ವೇಳೆ‌ ಗೃಹ ಬಳಕೆಯ ಅನಿಲ ಸೋರಿಕೆಯಾಗಿ (Gas leak) ಕೋಣೆ ತುಂಬೆಲ್ಲ ಬೆಂಕಿ ಆವರಿಸಿಕೊಂಡು ಬಾಲಕ ಸೇರಿ ಒಂಭತ್ತು ಮಾಲಾಧಾರಿಗಳಿಗೆ ಗಂಭೀರವಾದ ಸುಟ್ಟ ಗಾಯಗಳಾಗಿದ್ದವು.‌

ಒಂಭತ್ತು ಮಾಲಾಧಾರಿಗಳಲ್ಲಿ ಬಾಲಕ ಹೊರತುಪಡಿಸಿ ಉಳಿದವರೆಲ್ಲರಿಗೆ ಶೇ.‌ 80ಕ್ಕೂ ಹೆಚ್ಚು ಪ್ರಮಾಣದಲ್ಲಿ ಸುಟ್ಟಿದೆ. ಅವರೆಲ್ಲರು ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದನ್ನು ಓದಿ : 150 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ ; Chikkodi ಮೂಲದ ಯೋಧ ಸೇರಿ ಐವರು ಹುತಾತ್ಮ.!

ಆದರೆ ಇಂದು ಬೆಳಗಿನ ಜಾವ ಚಿಕಿತ್ಸೆಗೆ ಸ್ಪಂದಿಸದೆ ನಿಜಲಿಂಗಪ್ಪ ಮತ್ತು ಸಂಜಯ ಸಾವನ್ನಪ್ಪಿದ್ದಾರೆ. ಇನ್ನುಳಿದ ಆರು ಜನರ ಸ್ಥಿತಿ ಚಿಂತಾಜನಕವಾಗಿದೆ (condition is serious) ಎಂದು ಮೂಲಗಳಿಂದ ತಿಳಿದು ಬಂದಿದೆ.

ವಿದ್ಯಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಯ ಬಗ್ಗೆ ಪ್ರಕರಣ ದಾಖಲಾಗಿದೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!