ಜನಸ್ಪಂದನ ನ್ಯೂಸ್, ಕೊಪ್ಪಳ : ತುಂಗಭದ್ರಾ ಜಲಾಶಯದ ಗೇಟ್ ಸಂಖ್ಯೆ 19ರಲ್ಲಿ ಚೈನ್ ಲಿಂಕ್ ಮುರಿದು ಹೋಗಿರುವ ಕಾರಣ ಅದನ್ನು ಸರಿಪಡಿಸಲು ಜಲಾಶಯದ 60 ಟಿಎಂಸಿ ಅಡಿ ನೀರನ್ನು ಖಾಲಿ ಮಾಡಬೇಕಾಗಿದೆ.
ಹೀಗಾಗಿ ನದಿ ಪಾತ್ರದ ಜನರು ಎಚ್ಚರದಿಂದ ಇರಬೇಕು ಎಂದು ಸೂಚಿಸಲಾಗಿದೆ. ಅಣೆಕಟ್ಟೆಯ 19ನೇ ಗೇಟ್‌ನ ಚೈನ್ ಲಿಂಕ್ ಮುರಿದಿರುವುದು ಅಣಕಟ್ಟೆಯ ಗೇಟ್ ಲಿಂಕ್ ಮುರಿದ ನಂತರ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿದೆ.
ಇದನ್ನು ಓದಿ : ಊರ ಹಬ್ಬದಲ್ಲಿ ಅರೆನಗ್ನಾವತಾರದಲ್ಲಿ ಕಾಣಿಸಿಕೊಂಡ ಖ್ಯಾತ ಗಾಯಕಿ; ವಿಡಿಯೋ Viral.!
ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ನ ಚೈನ್‌ಲಿಂಕ್ ಶನಿವಾರ (ಆ.10) ತಡರಾತ್ರಿ 11 ಗಂಟೆ ಸುಮಾರಿಗೆ ತುಂಡಾಗಿದೆ.
ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಸಂಖ್ಯೆ 19ರಲ್ಲಿ ಚೈನ್ ಲಿಂಕ್ ತುಂಡಾಗಿರುವ ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗುತ್ತಿದೆ. ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿ : Health : ಸೋಡಾ ಕುಡಿಯುವುದರಿಂದ ಆರೋಗ್ಯದ ಮೇಲಾಗುವ ಪರಿಣಾಮಗಳೇನು ಗೊತ್ತಾ.?
ಇನ್ನೂ ಮುರಿದು ಹೋಗಿರುವ ಚೈನ್ ಲಿಂಕ್ ಸರಿಪಡಿಸಲು ಜಲಾಶಯದ 60 ಟಿಎಂಸಿ ಅಡಿ ನೀರನ್ನು ಖಾಲಿ ಮಾಡಬೇಕು.
ಹೀಗಾಗಿ ಜಲಾಶಯ ನೋಡಲು ಬರುವ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿರುವುದು.
ಇದನ್ನು ಓದಿ : ನಿಮ್ಮ ಹೃದಯ ರೇಖೆಯಿಂದ ತಿಳಿಯಬಹುದು ನಿಮ್ಮ personality ; ನಿಮ್ಮ ಅಂಗೈ ರೇಖೆ ಯಾವ ರೀತಿ ಇದೆ.!
ಅಣೆಕಟ್ಟೆಯ ಗೇಟ್ ಲಿಂಕ್ ಮುರಿದಿರುವ ಸುದ್ದಿ ಕೇಳಿ ಜಲಾಶಯದತ್ತ ಸ್ಥಳೀಯರು ನೋಡಲು ಬರುತ್ತಿದ್ದಾರೆ.
ಸಚಿವ ಶಿವರಾಜ ತಂಗಡಗಿ ಅವರು ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು ಸದ್ಯ ಜಲಾಶಯದ ಪ್ರವೇಶ ದ್ವಾರದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.