ಪಾಲ್ಘರ್ (ಮಹಾರಾಷ್ಟ್ರ) : ರಸ್ತೆಯಲ್ಲೇ ಸರ್ಕಾರಿ ಮಹಿಳಾ ಸಿಬ್ಬಂದಿಯ ಮೇಲೆ ವ್ಯಕ್ತಿನೋರ್ವ ಕುಡುಗೋಲಿನಿಂದ ಭೀಕರವಾಗಿ ಮಾರಣಾಂತಿಕ ದಾಳಿ ಮಾಡಿ ಪರಾರಿಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ಶುಕ್ರವಾರ ಸಂಜೆ ನಡೆದಿದ್ದು, ಸದ್ಯ ಭೀಕರ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಬೆಚ್ಚಿಬೀಳಿಸುವಂತಹ ಘಟನೆ ಮಹಾರಾಷ್ಟ್ರದ ಪಾಲ್ಘರ್ ಪ್ರದೇಶದಲ್ಲಿ ನಡೆದಿದ್ದು, ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ವ್ಯಕ್ತಿಯೊಬ್ಬ ಮಾರಕಾಸ್ತ್ರದಿಂದ ದಾಳಿ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಆರೋಪಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಏಕಾಏಕಿ ದಾಳಿ :
ಲಭ್ಯವಾಗಿರುವ ಮಾಹಿತಿ ಪ್ರಕಾರ, 27 ವರ್ಷದ ಸ್ನೇಹಲ್ ಎಂಬ ಯುವತಿ ಪಾಲ್ಘರ್ ಜಿಲ್ಲಾ ಕಚೇರಿಯ ಕಂದಾಯ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಏಕಾಏಕಿ ಆಕೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ.
ಆರೋಪಿ ಅಮೋಲ್ ಎಂದು ಗುರುತಿಸಲಾಗಿದ್ದು, ಇತನು ಸಹ ನ್ಯಾಯಾಲಯದ ಕಚೇರಿಗೆ ಸಂಬಂಧಿಸಿದ ಸಿಬ್ಬಂದಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಈ ಸುದ್ದಿಯನ್ನು ಓದಿ : ತಂಪು ಪಾನೀಯ ಕುಡಿಸಿ ಮಹಿಳೆ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ಆರೋಪ; 10 ಮಂದಿ ಬಂಧನ.
ಹಲ್ಲೆಗೊಳಗಾದ ಯುವತಿ ರಸ್ತೆ ಬದಿಯಲ್ಲಿ ತನ್ನಷ್ಟಕ್ಕೆ ತಾನು ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಹಿಂಬದಿಯಿಂದ ದಾಳಿ ನಡೆಸಿದ್ದಾನೆ. ಕುತ್ತಿಗೆ, ಬೆನ್ನು, ಭುಜ ಹಾಗೂ ದೇಹದ ಇತರ ಭಾಗಗಳಿಗೆ ಹಲವು ಬಾರಿ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.
ಸರ್ಕಾರಿ ಮಹಿಳಾ ಸಿಬ್ಬಂದಿ ಮೇಲಿನ ದಾಳಿಯ ವಿಡಿಯೋ :
Woman Govt Employee Hacked 8 Times With Sickle In Broad Daylight
📍Palghar, Maharashtra
Snehal Sawant, 27, a revenue department employee at Palghar District Collector’s Office, was attacked with a sickle by colleague Amol Mule… a court peon… near Gold Cinema Hall at 6:15… pic.twitter.com/jF0ogc8hb7
— زماں (@Delhiite_) June 13, 2026
Courtesy : Social Media / Twitter
ಪ್ರತ್ಯಕ್ಷದರ್ಶಿಗಳ ಪ್ರಕಾರ, ಯುವತಿ (ಸರ್ಕಾರಿ ಮಹಿಳಾ ಸಿಬ್ಬಂದಿ) ನೆಲಕ್ಕುರುಳಿದ ಬಳಕವೂ ಆರೋಪಿ ದಾಳಿ ಮುಂದುವರಿಸಿದ್ದು, ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.
ಇನ್ನು ದಾಳಿ ನಡೆಸಿದ ನಂತರ ಆರೋಪಿ ತನ್ನ ಬ್ಯಾಗ್ ಹಾಗೂ ಬಳಸಿದ ಆಯುಧವನ್ನು ಸ್ಥಳದಲ್ಲೇ ಬಿಟ್ಟು ಓಡಿಹೋಗಿದ್ದಾನೆ ಎನ್ನಲಾಗಿದೆ.
ಸ್ಥಳೀಯರು ಗಾಯಗೊಂಡ ಯುವತಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ. ಆರಂಭದಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮತ್ತೊಂದು ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನು ಓದಿ : ಮೂಡಲಗಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ ಪತ್ತೆ; 4 ಟನ್ ಅಕ್ಕಿ ವಶಕ್ಕೆ.
ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಧಿವಿಜ್ಞಾನ ತಂಡವೂ ಸಾಕ್ಷ್ಯ ಸಂಗ್ರಹ ಕಾರ್ಯ ಕೈಗೊಂಡಿದೆ. ದಾಳಿಗೆ ನಿಖರ ಕಾರಣ ಏನು ಎಂಬುದು ಇನ್ನೂ ಬಹಿರಂಗವಾಗಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಆರೋಪಿಯನ್ನು ಬಂಧಿಸಲು ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಈ ಘಟನೆ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಹಾಗೂ ಮಹಿಳೆಯರ ಸುರಕ್ಷತೆ ಕುರಿತು ಮತ್ತೊಮ್ಮೆ ಗಂಭೀರ ಚರ್ಚೆಗೆ ಕಾರಣವಾಗಿದೆ.
ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Disclaimer: ಈ ಸರ್ಕಾರಿ ಮಹಿಳಾ ಸಿಬ್ಬಂದಿ ಲೇಖನವು ಸಾರ್ವಜನಿಕವಾಗಿ ಲಭ್ಯವಿರುವ ಮಾಹಿತಿಗಳು ಹಾಗೂ ವಿವಿಧ ವರದಿಗಳ ಆಧಾರದ ಮೇಲೆ ಸಿದ್ಧಪಡಿಸಲಾದ ಮಾಹಿತಿ ಲೇಖನವಾಗಿದೆ. ಇದರ ಉದ್ದೇಶ ಓದುಗರಿಗೆ ಮಾಹಿತಿ ನೀಡುವುದಾಗಿದೆ.







