Sunday, September 15, 2024
spot_img
spot_img
spot_img
spot_img
spot_img
spot_img
spot_img

CM ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ರಾಜ್ಯಪಾಲ ಗೆಹ್ಲೋಟ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ ಗೆ ಶನಿವಾರ (ಆ.17) ಬೆಳಗ್ಗೆ ಅನುಮತಿ ನೀಡಿರುವುದಾಗಿ ಟಿವಿ ಮಾಧ್ಯಮಗಳ ವರದಿ ತಿಳಿಸಿದೆ.

ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ. ಈ ಕುರಿತಾದ ಆದೇಶವನ್ನು ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ.

ದೂರುದಾರ, ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ, ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವುದು ಒಳ್ಳೆಯ ಸಂಗತಿಯಾಗಿದೆ. ನನಗೂ ರಾಜಭವನದಿಂದ ಕರೆ ಬಂದಿದೆ. ಈಗಾಗಲೇ ಮಡಿಕೇರಿಯಿಂದ ನಾನು ಹೊರಟಿದ್ದೇನೆ. ಮಧ್ಯಾಹ್ನದ ವೇಳೆಗೆ ನಾನು ಅವರನ್ನು ಭೇಟಿಯಾಗಲಿದ್ದೇನೆ. ಮುಂದಿನ ಕಾನೂನು ಹೋರಾಟ ಕೂಡ ತುಂಬಾ ದೀರ್ಘವಾಗಿ ಇರಲಿದೆ ಎಂದು ಅವರು ತಿಳಿಸಿದ್ದಾರೆ.

ಸಿದ್ಧರಾಮಯ್ಯ ಅವರ ರಾಜಕೀಯ ಜೀವನದ ಅತಿದೊಡ್ಡ ಸಂಕಷ್ಟ ಇದು ಎಂದು ಹೇಳಲಾಗಿದೆ.ಮೂರು ದೂರುಗಳನ್ನು ಒಟ್ಟಿಗೆ ಸೇರಿಸಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

ಇಂದು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಸುಳಿವು ಸಿಎಂ ಸಿದ್ಧರಾಮಯ್ಯ ಅವರಿಗೆ ಶುಕ್ರವಾರವೇ ಲಭಿಸಿತ್ತು. ಅದರಂತೆ ಕಳೆದ ರಾತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಅವರೊಂದಿಗೆ ಸಿಎಂ ಸಮಾಲೋಚನೆ ನಡೆಸಿದ್ದಾರೆ.

ಇನ್ನು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಿದ್ದಂತೆಯೇ ಸಿಎಂ ನಿವಾಸಕ್ಕೆ ಸಚಿವರಾದ ದಿನೇಶ್‌ ಗುಂಡೂರಾವ್‌, ಪ್ರಿಯಾಂಕ್‌ ಖರ್ಗೆ, ಬೈರತಿ ಸುರೇಶ್‌ ಮೊದಲಿಗರಾಗಿ ಆಗಮಿಸಿದ್ದಾರೆ.

 

 

 

 

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img