Monday, November 4, 2024
spot_img
spot_img
spot_img
spot_img
spot_img
spot_img

Hatras stampede : ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಸ್ಥಳದಲ್ಲಿಯೇ ಸಾ*ನ್ನಪ್ಪಿದ ಪೊಲೀಸ್.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಡೆಸ್ಕ್ : ‌ನಿನ್ನೆ ಮಂಗಳವಾರ ನಡೆದ ಉತ್ತರ ಪ್ರದೇಶದ ಹತ್ರಾಸ್‌ ಕಾಲ್ತುಳಿತ ಹಿನ್ನಲೆಯಲ್ಲಿ ಸಾವನ್ನಪ್ಪಿದವರ ಹೆಣಗಳ ರಾಶಿ ನೋಡಿ ಆಘಾತಗೊಂಡ ಕರ್ತವ್ಯ ನಿರತ ಪೊಲೀಸ್‌ ಒಬ್ಬರು ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೂ ನಡೆದಿದೆ.

ಕಾಲ್ತುಳಿತ ಹಿನ್ನಲೆಯಲ್ಲಿ ಇಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ಬಿದ್ದಿದ್ದ ಹೆಣಗಳ ರಾಶಿಯನ್ನು ನೋಡಿದ ಭದ್ರತಾ ಭದ್ರತಾ ಡ್ಯೂಟಿಗೆ ನಿಯೋಜನೆಯಾಗಿದ್ದ ರಜನೀಶ ಎಂಬುವವರೇ ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿದ ಪೊಲೀಸ್‌ ಸಿಬ್ಬಂದಿ.

ಇದನ್ನು ಓದಿ : ಚಿಂಪಾಂಜಿಗೂ ಇದೇ Instagram ಹುಚ್ಚು : ಸ್ಕ್ರೋಲ್‌ ಮಾಡೋದನ್ನು ನೋಡಿದರೆ ನೀವೂ ಶಾಕ್‌ ಆಗ್ತೀರಾ.

ಮಂಗಳದಿನವಾದ ನಿನ್ನೆ (ದಿ.02) ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಗ್ರಾಮದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿದ್ದ ಪರಿಣಾಮ ಸುಮಾರು 121 ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ.

ಹತ್ರಾಸ್‌ನ ಸಿಕಂದರ್‌ರಾವ್‌ ಪ್ರದೇಶದ ಮೊಘಲ್‌ಘರಾಹಿ ಗ್ರಾಮದಲ್ಲಿ ಮಂಗಳವಾರ ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ (Bhole Baba) ಅವರು ಸತ್ಸಂಗ ಆಯೋಜಿಸಿದ್ದರು.

ಈ ವೇಳೆ ಭೀಕರ ಕಾಲ್ತುಳಿತ ಸಂಭವಿಸಿತು, ಘಟನೆಯಲ್ಲಿ ಮೃತರಾದವರನ್ನು ಇಟಾಹ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಭದ್ರತಾ ಡ್ಯೂಟಿಗೆ ನಿಯೋಜನೆಯಾಗಿದ್ದ ರಜನೀಶ್ ಬಿದ್ದಿದ್ದ ಹೆಣಗಳ ರಾಶಿಯನ್ನು ನೋಡಿದ ನಂತರ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇದನ್ನು ಓದಿ : 10 ಮತ್ತು 12 ನೇ ತರಗತಿ ಪಾಸ ಆದವರಿಗೆ ಯೂನಿಯನ್ ಬ್ಯಾಂಕ್‌ ನಲ್ಲಿ ಉದ್ಯೋಗವಕಾಶ.!

ಈ ದುರ್ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ಈಗಾಗಲೇ ಆದೇಶಿಸಿದ್ದಾರೆ. ‌

ಹತ್ರಾಸ್ ಘಟನೆಯ ಹಿಂದಿನ ಸತ್ಯವನ್ನು ಬಹಿರಂಗಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು (ಬುಧವಾರ) ದುರ್ಘಟನಾ ಸ್ಥಳಕ್ಕೆ ಆಗಮಿಸಿ ಸಂತ್ರಸ್ತರನ್ನು ಭೇಟಿ ಮಾಡಲಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img