ಜನಸ್ಪಂದನ ನ್ಯೂಸ್, ಡೆಸ್ಕ್ : ಕೆಲವರಿಗೆ ಚಿಕನ್ ಬಿರಿಯಾನಿ ತಿನ್ನುತ್ತಾ ಕೂಲ್‌ಡ್ರಿಂಕ್ಸ್ ಕುಡಿಯೋ ಅಭ್ಯಾಸವಿರುತ್ತದೆ. ಆದರೆ ಈ ಅಭ್ಯಾಸ ಒಳ್ಳೆಯದೇ.? ಇದು ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುತ್ತಾರೆ ತಜ್ಞರು.
ಹಾಗಾದರೆ ಚಿಕನ್ ಬಿರಿಯಾನಿ ತಿನ್ನುತ್ತಾ ಕೂಲ್‌ಡ್ರಿಂಕ್ಸ್ ಕುಡಿದರೆ ಆಗುವ ಅಡ್ಡ ಪರಿಣಾಮಗಳೇನು? ಅಂತ ತಿಳಿಯೋಣ.
ಇದನ್ನು ಓದಿ : Health : ಅರಿಶಿನ ಬೆರೆಸಿದ ನೀರನ್ನು ಸೇವಿಸುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು.!
* ಸಕ್ಕರೆ ಮತ್ತು ಪ್ರಿಸರ್ವೇಟಿವ್ ಗಳು ಕೂಲ್‌ಡ್ರಿಂಕ್ಸ್ ನಲ್ಲಿ ಅಧಿಕವಾಗಿದ್ದು, ಇವು ಯಕೃತ್ತು ಹಾಗೂ ಮೂತ್ರಪಿಂಡಗಳ ಮೇಲೆ ತೀವ್ರ ಪರಿಣಾಮ ಬೀರುತ್ತವೆ. ಬಿರಿಯಾನಿಯಲ್ಲಿರುವ ಪ್ರೋಟೀನ್ ಮತ್ತು ಕೊಬ್ಬು ದೇಹಕ್ಕೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ. ತಂಪು ಪಾನೀಯಗಳ ಜೊತೆಗೆ ಇದನ್ನು ಸೇವಿಸುವುದರಿಂದ ದೇಹದಲ್ಲಿ ವಿಷಕಾರಿ ಅಂಶ ಹೆಚ್ಚುತ್ತದೆ. ಇದು ಯಕೃತ್ತು ಹಾಗೂ ಮೂತ್ರಪಿಂಡದ ಕಾರ್ಯ ನಿರ್ವಹಣೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
* ಕೂಲ್‌ಡ್ರಿಂಕ್ಸ್‌ಗಳಲ್ಲಿನ ಕಾರ್ಬೊನೇಷನ್ ಜೀರ್ಣಕ್ರಿಯೆಯ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ಅಜೀರ್ಣ, ಹೊಟ್ಟೆ ನೋವು ಮತ್ತು ಉಬ್ಬುವುದು ಮುಂತಾದ ಸಮಸ್ಯೆಗಳನ್ನು ಉಂಟು ಮಾಡುತ್ತದೆ.
ಇದನ್ನು ಓದಿ : South Western Railway ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.!
* ಕೂಲ್ ಡ್ರಿಂಕ್ಸ್, ಬಿರಿಯಾನಿಯಲ್ಲಿರುವ ಅಧಿಕ ಸಕ್ಕರೆ ಮತ್ತು ಕ್ಯಾಲೋರಿಗಳು ದೇಹದಲ್ಲಿ ಕೊಬ್ಬು ಹೆಚ್ಚಾಗಲು ಕಾರಣವಾಗುತ್ತವೆ. ಇದರಿಂದಾಗಿ ಕೊಬ್ಬು ಬೊಜ್ಜು ಮತ್ತು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು. ದೀರ್ಘಾವಧಿಯಲ್ಲಿ ಇದು ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ಕಾರಣವಾಗುತ್ತದೆ. ಇದು ಹೃದಯ ಸಮಸ್ಯೆಗಳನ್ನು ತಂದೊಡ್ಡಬಹುದು.
* ಬಿರಿಯಾನಿಯಂತಹ ಮಸಾಲೆಯುಕ್ತ ಆಹಾರವನ್ನು ಸೇವಿಸಿದರೆ ಹೊಟ್ಟೆಯಲ್ಲಿ ಗ್ಯಾಸ್ಟ್ರಿಕ್ ಆಮ್ಲ ಬಿಡುಗಡೆಯಾಗುತ್ತದೆ. ಅದರ ಜೊತೆಗೆ ತಂಪು ಪಾನೀಯವನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯಲ್ಲಿ ಆಮ್ಲೀಯತೆ ಹೆಚ್ಚುತ್ತದೆ. ಇದು ಗ್ಯಾಸ್ ಮತ್ತು ಎದೆಯುರಿ ಸಮಸ್ಯೆಗೆ ಕಾರಣವಾಗುತ್ತದೆ.
ಇದನ್ನು ಓದಿ : Health : ಈ ಎಲೆಯ ನೆನೆಸಿದ ನೀರು ಕುಡಿಯುವುದರಿಂದ ಬೆಣ್ಣೆಯಂತೆ ಕರಗುವುದು ಹೊಟ್ಟೆಯ ಕೊಬ್ಬು.!
* ಮಧುಮೇಹದಿಂದ ಬಳಲುತ್ತಿರುವವರಿಗೆ ಇದು ಹೆಚ್ಚು ಅಪಾಯವನ್ನುಂಟು ಮಾಡುತ್ತದೆ. ಬಿರಿಯಾನಿ, ಕಾರ್ಬೋಹೈಡ್ರೇಟ್‌ಗಳು, ಕೊಬ್ಬು ಮತ್ತು ಕೂಲ್ ಡ್ರಿಂಕ್ಸ್‌ನಲ್ಲಿನ ಹೆಚ್ಚಿನ ಸಕ್ಕರೆ ಅಂಶವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಕಾರಣವಾಗುತ್ತದೆ.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.