Saturday, July 27, 2024
spot_img
spot_img
spot_img
spot_img
spot_img
spot_img

PUC ಪಾಸಾಗಿದ್ದೀರಾ.? ; ಸ್ಟಾಫ್‌ ಸೆಲೆಕ್ಷನ್‌ ಕಮಿಷನ್ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!

spot_img

ಜನಸ್ಪಂದನ ನ್ಯೂಸ್‌, ನೌಕರಿ : ದ್ವಿತೀಯ ಪಿಯುಸಿ ಪಾಸಾದವರಿಗೆ ಗುಡ್‌ ನ್ಯೂಸ್‌, ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ :

ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾದ ಎಲ್ಲದರ ಬಗ್ಗೆ ಇಲ್ಲಿದೆ ಮಾಹಿತಿ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್‌ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಲೈಟ್ ಬಲ್ಬ್ ಕದ್ದ ಪೊಲೀಸ್‌ ಕಾನ್ಸ್‌ಟೇಬಲ್ : ಬೆಚ್ಚಿಬಿದ್ದಿ ಜನ ; ವಿಡಿಯೋ Virul.!

ಹುದ್ದೆಗಳ ವಿವರ :

  • ಲೋವರ್‌ ಡಿವಿಷನ್‌ ಕ್ಲರ್ಕ್‌ (LDC).
  • ಜೂನಿಯರ್‌ ಸೆಕ್ರೆಟೆರಿಯೇಟ್‌ ಅಸಿಸ್ಟಂಟ್‌ (JSA).
  • ಡೇಟಾ ಎಂಟ್ರಿ ಆಪರೇಟರ್‌ (DEO) ಮತ್ತು
  • ಡೇಟಾ ಎಂಟ್ರಿ ಆಪರೇಟರ್‌ ಗ್ರೇಡ್‌ ʼA’ ಹುದ್ದೆಗಳಿವೆ.

ವಿದ್ಯಾರ್ಹತೆ :

  • ಎಲ್‌ಡಿಸಿ ಹುದ್ದೆಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • 12ನೇ ತರಗತಿಯಲ್ಲಿ ವಿಜ್ಞಾನ ಮತ್ತು ಗಣಿತ ವಿಷಯವನ್ನು ಓದಿದವರು ಡೇಟಾ ಎಂಟ್ರಿ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು.
  • ತತ್ಸಮಾನ ವಿದ್ಯಾರ್ಹತೆ ಹೊಂದಿದವರೂ ಅಪ್ಲೈ ಮಾಡಬಹುದು.

ವಯೋಮಿತಿ : 

  • ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷ.
  • ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ.
  • ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ; ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ; ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಿನಾಯಿತಿ ಇದೆ.

ಗರ್ಲ್ಸ್ HOSTEL ಮುಂದೆ ಬಟ್ಟೆ ಬಿಚ್ಚಿ ಸೈಕೋಗಳ ಅಶ್ಲೀಲ ವರ್ತನೆ.!

ಅರ್ಜಿ ಶುಲ್ಕ :

  • ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ /ಮಹಿಳೆ/ಮಾಜಿ ಯೋಧರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.
  • ಸಾಮಾನ್ಯ/ಒಬಿಸಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ.
  • ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ : 

  • ಎರಡು ಹಂತದ ಲಿಖಿತ ಪರೀಕ್ಷೆ, ಸ್ಕಿಲ್‌ ಟೆಸ್ಟ್‌/ಟೈಪಿಂಗ್‌ ಟೆಸ್ಟ್‌, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ 3,712 ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
  • ಮೊದಲ ಹಂತದ ಪರೀಕ್ಷೆ ಜುಲೈ 1,2,3,4,5,8,9,10,11,12 ರಂದು ನಡೆಯಲಿದೆ.
  • ಕರ್ನಾಟಕದಲ್ಲಿ ಪರೀಕ್ಷೆ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ನಡೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07 ಮೇ 2024

ಅರ್ಜಿ ಸಲ್ಲಿಸುವ ವಿಧಾನ :

  • ವೈಯಕ್ತಿಕ ಮಾಹಿತಿ ನೀಡುವ ಮೂಲಕ ಹೆಸರು ನೋಂದಾಯಿಸಿ.
  • ನಿಮಗೆ ಬಂದಿರುವ ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಾಣಿಸುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಸೂಚಿಸಿರುವ ಅಳತೆಯಲ್ಲಿ ದಾಖಲೆಗಳನ್ನು ಮತ್ತು ಫೋಟೊ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾದ ಬಳಿಕ ಈ ಬಗ್ಗೆ ಇಮೇಲ್‌, ಎಸ್‌ಎಂಎಸ್‌ ಮೂಲಕ ಸಂದೇಶ ಬರಲಿದೆ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪಿಂಟ್‌ಔಟ್‌ ತೆಗೆದಿಡಿ.
  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

spot_img
spot_img
- Advertisment -spot_img