ಜನಸ್ಪಂದನ ನ್ಯೂಸ್, ಮೈಸೂರು : ಮೈಸೂರಿನ ಅಶೋಕಪುರಂ ಠಾಣೆಯ ಹೆಡ್ಕಾನ್ಸ್ಟೇಬಲ್ ನನ್ನು ಮನೆಗಳ್ಳರ ಜೊತೆ ಕೈಜೋಡಿಸಿದ ಆರೋಪದ ಮೇಲೆ ಅರೆಸ್ಟ್ ಮಾಡಲಾಗಿದೆ.
ಅಶೋಕಪುರಂ ಠಾಣೆಯ ಹೆಡ್ಕಾನ್ಸ್ಟೇಬಲ್ ರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನು ಓದಿ : ಅತ್ತೆ ಹೊಡೆದಿದ್ದಾರೆ ಎಂದು ಸಹಾಯವಾಣಿ ಕೇಂದ್ರಕ್ಕೆ Call ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್; ಮುಂದೆನಾಯ್ತು ಗೊತ್ತಾ.?
ಮೈಸೂರಿನ ಮಂಡಿ ಠಾಣೆ ಪೊಲೀಸರು ಹೆಡ್ಕಾನ್ಸ್ಟೇಬಲ್ ರಾಜು ಸೇರಿದಂತೆ ಕಳ್ಳರಾದ ನಜರುಲ್ಲಾ ಬಾಬು ಹಾಗೂ ಅಲೀಂ ಎಂಬ ಮೂವರನ್ನು ಅರೆಸ್ಟ್ ಮಾಡಿದ್ದಾರೆ.
ಕದ್ದ ಚಿನ್ನಾಭರಣ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಅವರನ್ನು ಬಂಧಿಸಿದ್ದಾರೆ.
ಮೈಸೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗಳವು ಮಾಡಿದ್ದ ನಜರುಲ್ಲಾ ಬಾಬು, ಅಲೀಂ. ಸುಮಾರು 400 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದರು.
ಇದನ್ನು ಓದಿ : Video : ಅಪಹರಿಸಿದವನ ಬಿಟ್ಟು ಬರಲ್ಲೊಪ್ಪದ ಮಗು : ಆತ ಕಿಡ್ನ್ಯಾಪರ್ ಅಲ್ಲ, ಹಾಗಾದ್ರೆ ಮತ್ಯಾರು.?
400 ಗ್ರಾಂ ಚಿನ್ನದಲ್ಲಿ 300 ಗ್ರಾಂನ್ನು ಹೆಡ್ ಕಾನ್ಸ್‌ಟೇಬಲ್ ರಾಜುಗೆ ನೀಡಿದ್ದರು. ಉಳಿದ 100 ಗ್ರಾಂ ಚಿನ್ನಾಭರಣ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಅವರನ್ನು ಪೊಲೀಸರು ಬಂಧಿಸಿದ್ದರು.
ವಿಚಾರಣೆ ವೇಳೆ ನಜರುಲ್ಲಾ ಬಾಬು, ಅಲೀಂ ಹೆಡ್ ಕಾನ್ಸ್‌ಟೇಬಲ್ ರಾಜು ಬಗ್ಗೆ ಬಾಯ್ಬಿಟ್ಟಿದ್ದು, ಈ ಹಿನ್ನಲೆ ಅಶೋಕಪುರಂ ಠಾಣೆ ಹೆಡ್ಕಾನ್ಸ್ಟೇಬಲ್ ರಾಜು ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.