ಜನಸ್ಪಂದನ ನ್ಯೂಸ್, ಬಾಗಲಕೋಟೆ : ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿರುವ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ನಡೆದಿದೆ.
ಇದನ್ನು ಓದಿ : ಅಕ್ರಮ ಮರಳುಗಾರರ ಪರ ಮಾತನಾಡಿದ ಶಾಸಕರಿಗೆ ಖಡಕ್ ಉತ್ತರ ಕೊಟ್ಟ ಲೇಡಿ ಆಫೀಸರ್.!
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಾಯಕ ಆಡಳಿತಾಧಿಕಾರಿ ರಾಜಶ್ರೀ ಪೋಳ ಲಂಚ ಪಡೆಯುವ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ರಾಘವೇಂದ್ರ ಮಡಿವಾಳ ಎಂಬವರು ಈ ಬಗ್ಗೆ ದೂರು ನೀಡಿದ್ದರು.
ಈ ಹಿನ್ನೆಲೆ ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ವರ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿರುವ ಕಚೇರಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಇದನ್ನು ಓದಿ : ಚಲಿಸುತ್ತಿರುವ ರೈಲಿನಲ್ಲಿ ಅಪಾಯಕಾರಿ ಸ್ಟಂಟ್ ಮಾಡಿದ ತಾತಪ್ಪ; Video ನೋಡಿದ್ರೆ ಬೆರಗಾಗ್ತೀರಾ.!
ಅಧಿಕಾರಿ ರಾಜಶ್ರೀ ಪೋಳ ಅವರು ಸಿಬ್ಬಂದಿಯನ್ನು ಕರ್ತವ್ಯಕ್ಕೆ ಸೇರಿಸಿಕೊಳ್ಳಲು ಲಂಚದ ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದೆ.
5 ಸಾವಿರ ರೂಪಾಯಿ ಲಂಚದ ಹಣ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ