ಜನಸ್ಪಂದನ ನ್ಯೂಸ್, ಡೆಸ್ಕ್ : ಕೆಲವು ಜನರಿಗೆ ನಿರಂತರ ಕೆಲಸ ಮಾಡಿದ ನಂತರ ದಣಿವಾಗುತ್ತದೆ (tired). ಇನ್ನೂ ಕೆಲವರು ಏನೂ ಕೆಲಸ ಮಾಡದೇ ಹೋದರೂ ದಣಿದ ಅನುಭವವಾಗುತ್ತದೆ. ಇದೇನು ಆರೋಗ್ಯ ಸಮಸ್ಯೆಯಲ್ಲ ಎಂದು ನಾವು ಕಡೆಗಣಿಸುತ್ತೇವೆ. ಆದರೆ ಈ ಸಮಸ್ಯೆಯು ರೋಗಗಳ ಮುನ್ಸೂಚನೆಯಾಗಿರಬಹುದು (forecast).
ಹೃದಯದ ಸಮಸ್ಯೆ (Heart problem) :
ಹೃದಯವು ಸರಿಯಾಗಿ ಕೆಲಸ ಮಾಡದಿದ್ದ ಸಂದರ್ಭದಲ್ಲಿ, ಆಮ್ಲಜನಕವು ದೇಹದ ವಿವಿಧ ಭಾಗಗಳನ್ನು ಸರಿಯಾಗಿ ತಲುಪಲು ಸಾಧ್ಯವಾಗುವುದಿಲ್ಲ. ಹೃದಯ ಕವಾಟದ (Heart valve) ವೈಫಲ್ಯವು ಉಸಿರಾಟದ ಸಮಸ್ಯೆಗೆ ಕಾರಣವಾಗಬಹುದು ಎಂಬುದು ತಜ್ಞರ ಅಭಿಪ್ರಾಯ.
ಇದನ್ನು ಓದಿ : ರಾತ್ರಿ 10 ಗಂಟೆಯ ನಂತರ ದೇಹವು ಈ ಸೂಚನೆಯನ್ನು ನೀಡುತ್ತಿದೆಯೇ? ಇದು stroke ಆಗಿರಬಹುದು.!
ಒತ್ತಡ ಮತ್ತು ಆತಂಕ :
ಒತ್ತಡ ಮತ್ತು ಆತಂಕದಿಂದ ಇದ್ದಾಗಲೂ ಸಹ ದಣಿವು ಉಂಟಾಗುತ್ತದೆ. ಅತಿಯಾದ ಒತ್ತಡದಿಂದ ಸ್ನಾಯು ಸೆಳೆತ (Muscle spasms) ಸಹ ಕಾಡಿಸಬಹುದು. ಇದರಿಂದಾಗಿ ಉಸಿರಾಟದ ತೊಂದರೆ ಉಂಟಾಗುವ ಸಾಧ್ಯತೆ ಇದೆ.
ಉಸಿರಾಟದ ಸಮಸ್ಯೆ :
ತಜ್ಞರು ಹೇಳುವಂತೆ ದೇಹದಲ್ಲಿ ಆಮ್ಲಜನಕದ ಕೊರತೆಯಾದಾಗ ಉಸಿರಾಟದ ಸಮಸ್ಯೆಯಾಗುತ್ತದೆ. ರಕ್ತದಲ್ಲಿ Hemoglobin ಕಡಿಮೆಯಾದರೆ ಆಮ್ಲಜನಕದ ಹರಿವು (Oxygen flow) ಸಹ ಕಡಿಮೆಯಾಗುತ್ತದೆ. ಇದು ಉಸಿರಾಡಲು ಸಹ ಕಷ್ಟವಾಗುತ್ತದೆ ಎನ್ನಲಾಗಿದೆ.
ಇಂತಹ ಸಮಸ್ಯೆಗಳು ಕಾಡಿಸುತ್ತಿದ್ದರೆ ಆಹಾರದಲ್ಲಿ ವಿಟಮಿನ್ ಬಿ -12, ಕಬ್ಬಿಣ ಮತ್ತು ಫೋಲಿಕ್ ಆಮ್ಲ (Folic acid) ಸಮೃದ್ಧವಾಗಿರುವ ಆಹಾರ ಸೇವಿಸಬೇಕು. ಇದರಿಂದಾಗಿ ರಕ್ತದಲ್ಲಿ ಆಮ್ಲಜನಕದ ಮಟ್ಟ ಹೆಚ್ಚಾಗುತ್ತದೆ. ಅಲ್ಲದೇ ಪ್ರತಿದಿನವೂ ಲಘು ವ್ಯಾಯಾಮ ಮಾಡಬೇಕು ಎಂದು ತಜ್ಞರು ಹೇಳುತ್ತಾರೆ.
ಇದನ್ನು ಓದಿ : Hindu ಸಂಪ್ರದಾಯದ ಪ್ರಕಾರ, ಯಾರು ಯಾವ ಬೆರಳಿನಿಂದ ತಿಲಕವನ್ನು ಇಟ್ಟುಕೊಳ್ಳಬೇಕು.?
ಉಸಿರಾಟಕ್ಕೆ ಸಂಬಂಧಿಸಿದ ವ್ಯಾಯಾಮಗಳನ್ನು ಮಾಡುವುದು ಸಹ ತುಂಬಾ ಉಪಯುಕ್ತವಾಗಿದೆ. ಆಗಾಗ ಉಸಿರಾಟದ ಸಮಸ್ಯೆ ಉಂಟಾಗುತ್ತಿದ್ದರೆ, ವೈದ್ಯರನ್ನು ಸಂಪರ್ಕಿಸುವುದು ಉತ್ತಮ. ರಕ್ತವನ್ನು ಪರೀಕ್ಷಿಸಿರಿ. ಇದಲ್ಲದೆ, ಒತ್ತಡವನ್ನು ಕಡಿಮೆ ಮಾಡಲು ಧ್ಯಾನ, ಯೋಗಾಸನಗಳನ್ನು ಮಾಡಿ.
ಹಿಂದಿನ ಸುದ್ದಿ ಓದಿ : ನಗ್ನ ಪೋಟೋ ಕಳುಹಿಸುವಂತೆ ವೈದ್ಯೆಗೆ ಕಿರುಕುಳ ನೀಡಿದ PSI.!
ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರು ನಗರದ ಬಸವನಗುಡಿ ಠಾಣೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಖಾಸಗಿ ಆಸ್ಪತ್ರೆ ವೈದ್ಯೆಯೊಬ್ಬರು (private hospital doctor) ದೂರು ನೀಡಿದ್ದಾರೆ.
ವೈದ್ಯೆಗೆ ನಗ್ನ ಫೋಟೋ ಕಳಿಸುವಂತೆ ಪಿಎಸ್‌ಐ ಕಿರುಕುಳ (harassment) ನೀಡಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರಿಗೆ ವೈದ್ಯೆ ದೂರು ನೀಡಿದ್ದಾರೆ.
ಇದನ್ನು ಓದಿ : ಮಾಡೆಲಿಂಗ್ ತೊರೆದು IFS ಅಧಿಕಾರಿಯಾದ ಐಶ್ವರ್ಯಾ ಶೆಯೋರಾನ್ ಸ್ಪೂರ್ತಿದಾಯಕ ಸ್ಟೋರಿ.!
ಬಸವನಗುಡಿ ಠಾಣೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜಕುಮಾರ್ ಜೋಡಟ್ಟಿ ವಿರುದ್ಧ ಇಂತದ್ದೊಂದು ಆರೋಪ ಕೇಳಿಬಂದಿದೆ.
ಫೇಸ್‌ಬುಕ್ ಮೂಲಕ 2020ರಲ್ಲಿ ಪಿಎಸ್ಐಗೆ ವೈದ್ಯೆಯ ಪರಿಚಯವಾಗಿದೆ. ಈ ವೇಳೆ ಪೊಲೀಸ್ ಅಕಾಡೆಮಿಯಲ್ಲಿ PSI ಟ್ರೈನಿಂಗ್ನಲ್ಲಿದ್ದರು. ಯುವತಿ ಸಹ MBBS ವ್ಯಾಸಂಗ ಮಾಡುತ್ತಿದ್ದಳು. ಅದೇ ವರ್ಷ ಇಬ್ಬರೂ ಪರಸ್ಪರ ಸ್ನೇಹ ಬೆಳೆದು ಪ್ರೀತಿಯಲ್ಲಿ (love) ಬಿದ್ದಿದ್ದರು ಎನ್ನಲಾಗಿದೆ.
ಪಿಎಸ್‌ಐ ಯುವತಿಗೆ ನಗ್ನ ಫೋಟೋ (Nude photo) ಕಳಿಸುವಂತೆ ಕಿರುಕುಳ ನೀಡಿದ್ದು, ಈ ಮಾತಿಗೆ ಒಪ್ಪದಿದ್ದಕ್ಕೆ ವೈದ್ಯೆಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ವೈದ್ಯೆಯ call record ತೆಗೆದು ಕಿರುಕುಳ ನೀಡುತ್ತಿರುವ ಆರೋಪಿಸಲಾಗಿದೆ. ಇದರಿಂದ ನೊಂದ ವೈದ್ಯೆ ಬೆಂಗಳೂರು ಪೊಲೀಸ್ ಕಮಿಷನರ್ಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : ಅಪ್ರಾಪ್ತ ಪತ್ನಿ ಜೊತೆ ಸಮ್ಮತಿಯಿಂದ ಲೈಂಗಿಕ ಕ್ರಿಯೆ ನಡೆಸುವುದು ಸಹ ಅತ್ಯಾಚಾರಕ್ಕೆ ಸಮ; Highcourt.!
ಅಲ್ಲದೇ ವೈದ್ಯೆಯಿಂದ ಸಬ್ ಇನ್ಸ್‌ಪೆಕ್ಟರ್ ರಾಜಕುಮಾರ್ ಹಂತ ಹಂತವಾಗಿ 1.71 ಲಕ್ಷ ರೂ. ಹಣ ಪಡೆದಿದ್ದಾರೆ. ಹಣ ವಾಪಸ್ ಕೇಳಿದ್ದಕ್ಕೆ ಹಣ ಬೇಕಾದರೆ ಠಾಣೆಗೆ ಬಂದು ತೊಗೊಂಡು ಹೋಗು ಎಂದು ಬೆದರಿಕೆ ಹಾಕಿದ್ದಾರೆ. ಇದರಿಂದ ತೀವ್ರ ಮನನೊಂದ ವೈದ್ಯೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು (suicide attempt) ಎಂದು ದೂರಿನಲ್ಲಿ ತಿಳಿಸಲಾಗಿದೆ.
ಆದರೆ ಈ ಕೇಸಿನಲ್ಲಿ ವೈದ್ಯೆಯ ಹೆಸರಿನಲ್ಲಿ ಫೇಸ್‌ಬುಕ್ fake account ಕ್ರಿಯೇಟ್ ಮಾಡಲಾಗಿದೆ ಎನ್ನಲಾಗಿದೆ. ಅಸಲಿಗೆ ಸ್ವಾತಿ ದ್ಯಾಮಕ್ಕನವರ್ ಅನ್ನುವ ಡಾಕ್ಟರ್ ಅಕೌಂಟ್ ಫೇಕ್ ಆಗಿದೆ. ಈ ಫೇಕ್ ಅಕೌಂಟ್ ನ್ನು ಸ್ವಾತಿಯ ಸಹೋದರ ಎಂದು ಹೇಳಿಕೊಂಡು ಬಂದಿರುವ ಇದೇ ಸಿದ್ದಪ್ಪ ದ್ಯಾಮಕ್ಕನವರ್ ಕ್ರಿಯೆಟ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಈ ಆಸಾಮಿ ವೈದ್ಯೆ ಸ್ವಾತಿ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಹಣ ಹೊಡೆಯಲು ಉಪಾಯ ಮಾಡಿದ್ದ. ಫೇಸ್‌ಬುಕ್ ಮೂಲಕ PSI ಪರಿಚಯ ಮಾಡಿಕೊಂಡು ಹಂತ ಹಂತವಾಗಿ ಹಣ ವಸೂಲಿ ಮಾಡಿದ್ದನು. ಸ್ವಾತಿ ಹೆಸರಿನಲ್ಲಿ ಇಲ್ಲಿಯವರೆಗೆ ಪಿಎಸ್‌ಐ 50 ಸಾವಿರ ರೂ. ಹಣ ಪಡೆದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೇ ಹಣವನ್ನು ಮರಳಿ ಕೊಡದಿದ್ದಾಗ ಸಬ್ ಇನ್ಸಪೆಕ್ಟರ್ ಕೋಪಗೊಂಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ಇದು fake Facebook account ಎಂಬುದು ಪತ್ತೆಯಾಗಿದೆ.
ಇದನ್ನು : ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವರದಾನವಾದ PM ವಿದ್ಯಾಲಕ್ಷ್ಮೀ ಯೋಜನೆ ; 10 ಲಕ್ಷದವರೆಗೆ ಸಾಲ.!
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹನುಮಂತ ನಗರ ಠಾಣೆ ಇನ್ಸಪೆಕ್ಟರ್ ತನಿಖೆ ಮಾಡುತ್ತಿದ್ದಾರೆ. ಈವರೆಗೂ ಆ ಯುವತಿ (ವೈದ್ಯೆ) ವಿಚಾರಣೆಗೆ ಹಾಜರಾಗಿಲ್ಲ. ಹುಡುಗಿ ರೀತಿ ಚಾಟ್ ಮಾಡಿ ಹುಡುಗಿ ಧ್ವನಿಯಲ್ಲಿ ಮಾತನಾಡಿ ಟ್ರ್ಯಾಪ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ ಸಬ್ ಇನ್ಸ್‌ಪೆಕ್ಟರ್ ಮತ್ತು ಯುವತಿ ನಡುವೆ ಹಣದ ವ್ಯವಹಾರ ನಡೆದಿದೆ. ಸಹೋದರ ಅಂತ ಬಂದಿರುವ ವ್ಯಕ್ತಿಯ ಬಗ್ಗೆ ಅನುಮಾನವಿದೆ. ಅಧಿಕಾರಿಯನ್ನೇ trap ಮಾಡಲು ಯತ್ನಿಸಿದಂತಿದೆ. ತನಿಖೆ ನಂತರ ಅಸಲಿ ಕಹಾನಿ ಗೊತ್ತಾಗಲಿದೆ ಎಂದು ಬೆರಳು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ