ಜನಸ್ಪಂದನ ನ್ಯೂಸ್, ಡೆಸ್ಕ್ : ಇತ್ತೀಚೆಗೆ ಹೃದಯ ಸಂಬಂಧಿ ಕಾಯಿಲೆಗಳಿಂದ ಯುವ ಜನರು ಬಲಿಯಾಗುತ್ತಿದ್ದಾರೆ. ಇನ್ನೂ ಪೊಲೀಸ್ ನೇಮಕಾತಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕನೋರ್ವ ಜಾಗಿಂಗ್ ಮಾಡುವಾಗ ಹೃದಯಾಘಾತದಿಂದ ಕುಸಿದು ಬಿದ್ದು ಸಾವಿಗೀಡಾದ ಘಟನೆ ನಡೆದಿದೆ.
ಇದನ್ನು ಓದಿ : ಸ್ಮಾರ್ಟ್‌ಫೋನ್ ನಿಮ್ಮ ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಎಂದು ತಿಳಿಯಲು ಈ Code ಬಳಸಿ.!
ಗುಜರಾತ್ನ ಜಾಮ್‌ನಗರದ ಲಾಲ್‌ಪುರ ತಾಲ್ಲೂಕಿನ ಭರುಡಿಯಾ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಮೃತರು ಹೇಮಂತ್ ಭಾಯ್ ಜೋಗಲ್ ಎಂದು ವರದಿಯಾಗಿದ್ದು, ಯುವಕ ಹೃದಯಾಘಾತದಿಂದ ಕುಸಿದು ಬೀಳುತ್ತಿರುವ ವಿಡಿಯೋ ಸಿಸಿಟಿವಿ ಒಂದರಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ವೈರಲ್ ವಿಡಿಯೋದಲ್ಲಿರುವ ದೃಶ್ಯ :
ಎಂದಿನಂತೆ ಯುವಕ ಹೇಮಂತ್, ತನ್ನ ಸ್ನೇಹಿತರೊಂದಿಗೆ ಗ್ರಾಮದ ಫೀಲ್ಡ್ನಲ್ಲಿ ಜಾಗಿಂಗ್ ಮಾಡುತ್ತಿರುತ್ತಾನೆ. ಎರಡು ಸುತ್ತು ಚೆನ್ನಾಗಿ ಓಡುವ ಯುವಕ ಬಳಿಕ ಸುಸ್ತಾದಂತೆ ಕಾಣುತ್ತಿದ್ದು, ಏಕಾಏಕಿ ಕುಸಿದು ಬೀಳುತ್ತಾನೆ.
ಇದನ್ನು ನೋಡಿದ ಸ್ನೇಹಿತರು ಕೂಡಲೇ ಆತನ ರಕ್ಷಣೆಗೆ ಧಾವಿಸುವುದನ್ನು ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಬಹುದು.
ಇದನ್ನು ಓದಿ : Health : ಈ ಎಲೆಯನ್ನು ಮೂಸಿದರೆ ಸಾಕು; ಕ್ಷಣದಲ್ಲೇ ಕೆಮ್ಮು, ನೆಗಡಿ ಗುಣವಾಗುತ್ತದೆ.!
ಇನ್ನೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿ ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.