ಜನಸ್ಪಂದನ ನ್ಯೂಸ್, ಬೆಂಗಳೂರು : ಮುಂದಿನ 4 ದಿನಗಳ ಕಾಲ ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Meteorological department forecast) ನೀಡಿದೆ. ನಿನ್ನೆ ದಿನ ಸಂಕೇಶ್ವರ, ನಾಪೊಕ್ಲು ಸೇರಿದಂತೆ ಹಲವೆಡೆ ಮಳೆಯಾಗಿದೆ.
ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಗದಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಇದನ್ನು ಓದಿ : ಗರ್ಲ್ಸ್ HOSTEL ಮುಂದೆ ಬಟ್ಟೆ ಬಿಚ್ಚಿ ಸೈಕೋಗಳ ಅಶ್ಲೀಲ ವರ್ತನೆ.!
ಕಲ್ಯಾಣ ಕರ್ನಾಟಕದ ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಳಿದಂತೆ ಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿಯೂ ಮಳೆಯಾಗಲಿದೆ.
ಇದನ್ನು ಓದಿ : ಪಾರ್ಕ್ನಿಂದ ಹೊರಗೊಗಲು ಸೂಚಿಸಿದ ಶಾಸಕರು ; ರೂಮ್ ವ್ಯವಸ್ಥೆ ಮಾಡಿಕೊಡಿ ಎಂದ ಲವರ್ಸ್ ; Video viral.!
ತಾಪಮಾನ :
ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ತುಮಕೂರಿನಲ್ಲಿ ಉಷ್ಣಗಾಳಿ ಬೀಸಲಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗಲಿದೆ.
ಕಲಬುರಗಿಯಲ್ಲಿ 41.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮತ್ತು ಚಿಂತಾಮಣಿಯಲ್ಲಿ 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಜನಸ್ಪಂದನ ನ್ಯೂಸ್, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.