Saturday, July 27, 2024
spot_img
spot_img
spot_img
spot_img
spot_img
spot_img

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ : MDF.!

spot_img

ಜನಸ್ಪಂದನ ನ್ಯೂಸ್, ಬೆಂಗಳೂರು : ಬಿಸಿಲ ಧಗೆಯಿಂದ ಪರಿತಪಿಸುತ್ತಿರುವ ಕರ್ನಾಟಕದ ಜನತೆಗೆ ಮಳೆರಾಯ ತಂಪೆರೆಯಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Meteorological department forecast)ನೀಡಿದೆ.

ಕರ್ನಾಟಕ ರಾಜ್ಯದ 5ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಐದು ದಿನಗಳ (5 Days) ಕಾಲ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಅಧಿಕ ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್​ (Yellow Alert) ಘೋಷಿಸಲಾಗಿದೆ.

Job alert : ಕೇಂದ್ರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ.!

ಉಳಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು,ಮಂಡ್ಯ, ಮೈಸೂರು, ರಾಮನಗರದಲ್ಲಿ ಸಾಧಾರಣ (mediocre)  ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ (dry air)ಮುಂದುವರೆಯಲಿದೆ.

ನಿಮ್ಮ ಕೈ ಬೆರಳುಗಳೇ ಹೇಳುತ್ತವೆ ನಿಮ್ಮ Personality ಬಗ್ಗೆ : ಹೇಗಂತೀರಾ.? ಈ ಸುದ್ದಿ ಓದಿ.!

ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಕೆ ಹಾಗೂ ಆರ್ದ್ರತೆ ಹೆಚ್ಚಾಗಲಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಳವಾಗಲಿದೆ.

ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿರಲಿದೆ, ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹಾಗೂ ಜಿಕೆವಿಕೆಯಲ್ಲಿ 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

spot_img
spot_img
- Advertisment -spot_img