ಜನಸ್ಪಂದನ ನ್ಯೂಸ್, ಬೆಂಗಳೂರು : ಕರ್ನಾಟಕ ಹೈಕೋರ್ಟ್ (Karnataka high court), ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರು ಕಾಂಗ್ರೆಸ್ ನಾಯಕರಿಗೆ ದಂಡ ವಿಧಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸಂಪುಟದ ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ 10 ಸಾವಿರ ರೂಪಾಯಿ ದಂಡ (penalty) ವಿಧಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಸೂಚಿಸಿದೆ.
ಇದನ್ನು ಓದಿ : ಈ ನಗರದಲ್ಲಿ ಗೋಬಿ ಮಂಚೂರಿ ಬ್ಯಾನ್ ; ಯಾಕೆ ಗೊತ್ತಾ.?
ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ, ಮಾರ್ಚ್ 7 ರಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, 11 ರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಆರ್ ಎಸ್ ಸುರ್ಜೇವಾಲಾ ಮತ್ತು ಮಾರ್ಚ್ 15 ರಂದು ಭಾರೀ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಹಾಜರಾಗುವಂತೆ ಸೂಚಿಸಲಾಗಿದೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ. ಎಸ್. ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ 2022 ರ ಏಪ್ರಿಲ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು. ಈ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಇತ್ಯಾದಿ ಆರೋಪಗಳಡಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣ ರದ್ದು ಕೋರಿ ಸಿದ್ದರಾಮಯ್ಯ, ರಾಮಲಿಂಗ ರೆಡ್ಡಿ, ಎಂ.ಬಿ ಪಾಟೀಲ್, ಸುರ್ಜೆವಾಲ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ಇದನ್ನು ಓದಿ : ಹೆಣ್ಣು ಮಕ್ಕಳ ತಂದೆ ತಾಯಿಯರಿಗೆ ಬಂಪರ್ ಸುದ್ದಿ ; ರೂ.2 ಲಕ್ಷ ಯೋಜನೆಗೆ ಕೂಡಲೇ ಅಪ್ಲೈ ಮಾಡಿ.!
ನ್ಯಾ. ಕೃಷ್ಣದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠವು ಅರ್ಜಿಗಳನ್ನು ವಿಚಾರಣೆ ನಡೆಸಿ ವಜಾಗೊಳಿಸಿದೆ. ಅಲ್ಲದೆ ಸಂಬಂಧಪಡದ ಪೊಲೀಸ್ ಅಧಿಕಾರಿಯನ್ನು ಪ್ರತಿವಾದಿಯನ್ನಾಗಿ ಮಾಡಿದ್ದಕ್ಕೆ ಎಲ್ಲರಿಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ.