ಜನಸ್ಪಂದನ ನ್ಯೂಸ್, ಬೆಂಗಳೂರು : ಕರ್ನಾಟಕ ಹೈಕೋರ್ಟ್ ಕೆಲವೊಂದು ಇಲಾಖೆಯ ನೌಕರರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ.
ಇದನ್ನು ಓದಿ : ವಿದ್ಯಾಭ್ಯಾಸದಲ್ಲಿ ಹಿನ್ನಡೆ : ಮಕ್ಕಳ ಮೊಬೈಲ್ ಒಡೆದು ಪುಡಿ ಮಾಡಿದ ಪೋಷಕರು ; ವಿಡಿಯೋ viral.!
ರೇಷ್ಮೆ ಇಲಾಖೆ ಮತ್ತು ರಾಜ್ಯದ ತೋಟಗಾರಿಕೆ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ದುಡಿಯುತ್ತಿರುವ ಕಾರ್ಮಿಕರ ಹಿತ ಕಾಯುವ ನಿಟ್ಟಿನಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಕರ್ನಾಟಕ ಹೈಕೋರ್ಟ್, 10 ವರ್ಷಗಳಿಗೂ ಹೆಚ್ಚು ಕಾಲ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ದೈನಂದಿನ ವೇತನ ನೌಕರರನ್ನು ಖಾಯಂ ಗೊಳಿಸಬೇಕು ಎಂದು ನಿರ್ದೇಶನ ನೀಡಿದೆ.
ಇದನ್ನು ಓದಿ : Video : ಹೋಟೆಲ್‌ನಲ್ಲಿ ಇಬ್ಬರು ಯುವತಿಯರ ಜೊತೆ ಪತಿಯ ಸರಸ; ರೆಡ್ ಹ್ಯಾಂಡ್ಆಗಿ ಹಿಡಿದ ಪತ್ನಿ.!
ಆ ಮೂಲಕ ಇಷ್ಟೂ ವರ್ಷಗಳ ಕಾಲ ತಮ್ಮ ನೌಕರಿಯ ಬಗ್ಗೆ ಅಭದ್ರತೆ ಮತ್ತು ಅಸ್ಥಿರತೆ ಹೊಂದಿದ್ದ ನೌಕರರ ಬವಣೆಯನ್ನು ಹೈಕೋರ್ಟ್ ನೀಗಿಸಿದೆ.
ಹೀಗಾಗಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ನೌಕರರು ಸಂತಸಗೊಂಡಿದ್ದಾರೆ.